ಕೆಲಸ ಹುಡುಕುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗುಡ್ನ್ಯೂಸ್. ದೇಶದ ಪ್ರತಿಷ್ಠಿತ ಭಾರತೀಯ ಸ್ಟೇಟ್ ಬ್ಯಾಂಕ್ನಲ್ಲಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಡಿಸೆಂಬರ್ 17 ರಿಂದ ಅರ್ಜಿ ಸಲ್ಲಿಸಲು ಆರಂಭವಾಗಿದೆ, ಜನವರಿ 7, 2025 ಅರ್ಜಿ ಸಲ್ಲಿಕೆಗೆ ಕೊನೆಯ ದಿನ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ಮಾಹಿತಿ:
ನೇಮಕಾತಿ ಬ್ಯಾಂಕ್ ಹೆಸರು : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ
ಹುದ್ದೆ ಹೆಸರು : ಜೂನಿಯರ್ ಅಸೋಸಿಯೇಟ್ (ಕಸ್ಟಮರ್ ಸಪೋರ್ಟ್ ಮತ್ತು ಸೇಲ್ಸ್)
ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಪದವಿ ಪಡೆದಿರಬೇಕು. ಅರ್ಜಿ ಸಲ್ಲಿಸುತ್ತಿರುವ ರಾಜ್ಯದ ಸ್ಥಳೀಯ ಭಾಷೆ ಮಾತನಾಡಲು ಬರಬೇಕು.
ವಯೋಮಿತಿ:
ಅಭ್ಯರ್ಥಿಗಳ ಕನಿಷ್ಠ ವಯಸ್ಸು 20 ವರ್ಷ ಹಾಗೂ ಗರಿಷ್ಠ 28 ವರ್ಷ. ಮೀಸಲಾತಿ ವರ್ಗಗಳಿಗೂ ವಯೋಮಿತಿ ಸಡಿಲಿಕೆ ಇದೆ.
ಅರ್ಜಿ ಶುಲ್ಕ
ಸಾಮಾನ್ಯ/ಒಬಿಸಿ/ಇಡಬ್ಲ್ಯೂಎಸ್ ವರ್ಗದ ಅಭ್ಯರ್ಥಿಗಳು 750 ರುಪಾಯಿ.
ಪರಿಶಿಷ್ಟ ಜಾತಿ ಹಾಗೂ ಪಂಗಡ, ಅಂಗವಿಕಲ ವರ್ಗ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.
ಹುದ್ದೆಗಳ ಸಂಖ್ಯೆ : 13,735
ಕರ್ನಾಟಕದಲ್ಲಿ ಜೂನಿಯರ್ ಅಸೋಸಿಯೇಟ್ಸ್ ಹುದ್ದೆಗಳ ಸಂಖ್ಯೆ : 50
ವೇತನಶ್ರೇಣಿ : ಮಾಸಿಕ ಆರಂಭಿಕ ವೇತನ 26730 ರುಪಾಯಿ
ಆಯ್ಕೆ ವಿಧಾನ
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪೂರ್ವಭಾವಿ ಪರೀಕ್ಷೆ/ ಮುಖ್ಯ ಪರೀಕ್ಷೆ ಹಾಗೂ ಭಾಷಾ ಪ್ರಾವಿಣ್ಯತೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.