ಗ್ರಾಮೀಣ ಭಾಗದ ಯುವಕರು ಉದ್ಯೋಗಕ್ಕಾಗಿ ನಾನಾ ಕಂಪನಿಗಳ ಕದ ತಟ್ಟುವ ಬದಲು ಕೃಷಿ ಕ್ಷೇತ್ರದಲ್ಲಿ ಹೊಸ ಆಲೋಚನೆ, ತಂತ್ರಜ್ಞಾನಗಳೊಂದಿಗೆ ಸ್ವಂತ ಉದ್ಯಮ ಆರಂಭಿಸುವವರಿಗೆ ಕೃಷಿ ಇಲಾಖೆಯು ‘ಕೃಷಿ ನವೋದ್ಯಮ’ದಡಿ ಆರ್ಥಿಕ ನೆರವು ನೀಡುತ್ತಿದೆ. ರಾಜ್ಯಾದ್ಯಂತ ಕೃಷಿ ವಲಯದಲ್ಲಿ ನೂತನ ಆವಿಷ್ಕಾರಗಳು, ನವೀನ ಉತ್ಪನ್ನಗಳು ಹಾಗೂ ಸೇವೆಗಳನ್ನು ಒಳಗೊಂಡಿರುವ ಕೃಷಿ ನವೋದ್ಯಮಗಳಿಗೆ ಉತ್ತೇಜನ ನೀಡುವ ಉದ್ದೇಶದೊಂದಿಗೆ ‘ಕೃಷಿ ನವೋದ್ಯಮ’ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ.
PM Usha Scholarship: PUC ಪಾಸಾದ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ₹20,000 ಆರ್ಥಿಕ ನೆರವು.! ಇಂದೇ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲಾದ ಕೃಷಿ ನವೋದ್ಯಮಗಳ ಪೈಕಿ ಅರ್ಹ ಕೃಷಿ ನವೋದ್ಯಮಗಳನ್ನು ವಿವಿಧ ಹಂತಗಳಲ್ಲಿ ಪರಿಶೀಲನೆ ನಡೆಸಿ ಹೊಸ ಕೃಷಿ ನವೋದ್ಯಮಗಳಿಗೆ ಕನಿಷ್ಠ ರೂ. 5 ಲಕ್ಷದಿಂದ ಗರಿಷ್ಠ ರೂ. 20 ಲಕ್ಷ ಹಾಗೂ ಈಗಾಗಲೇ ಸ್ಥಾಪಿಸಲಾದ ಕೃಷಿ ನವೋದ್ಯಮಗಳ ವಿಸ್ತರಣೆಗೆ ಕನಿಷ್ಠ ರೂ. 20 ಲಕ್ಷದಿಂದ ಗರಿಷ್ಠ ರೂ. 50 ಲಕ್ಷದವರೆಗಿನ ಸಹಾಯಧನವನ್ನು ಶೇ. 50 ರಷ್ಟು ರಿಯಾಯಿತಿಯೊಂದಿಗೆ ಖಜಾನೆ-2 ಮೂಲಕ ನೀಡಲಾಗುವುದು.
ಹೀಗೆ ಆಯ್ಕೆಯಾದ ಕೃಷಿ ನವೋದ್ಯಮಗಳ ಸಾಮರ್ಥ್ಯಾಭಿವೃದ್ಧಿಗಾಗಿ ವಿವಿಧ ತರಬೇತಿ ಕೇಂದ್ರಗಳಲ್ಲಿ ಹಾಗೂ ಇನ್ಕ್ಯುಬೇಷನ್ ಸೆಂಟರ್ ಗಳಲ್ಲಿ ತರಬೇತಿ ನೀಡಲಾಗುವುದು. ಕೃಷಿ ಪದವೀಧರರು, ವಿದ್ಯಾವಂತ ಯುವಕರು, ಆಸಕ್ತ ಪ್ರಗತಿಪರ ರೈತರು, ನವೋದ್ಯಮಿಗಳು ಮತ್ತು ಇತರೆ ಫಲಾನುಭವಿಗಳಿಗಾಗಿ ಈ ಯೋಜನೆ ಅಡಿ ಅರ್ಜಿ ಸಲ್ಲಿಸಬಹುದಾಗಿದೆ.
ಎಲ್ಲಿ ಅರ್ಜಿ ಸಲ್ಲಿಸಬೇಕು?
ಈ ಕೃಷಿ ನವೋದ್ಯಮ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ತಮ್ಮ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಅಥವಾ ಹೋಬಳಿಯ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಈ ಕೃಷಿ ನವೋದ್ಯಮಕ್ಕೆ ಅಭ್ಯರ್ಥಿಗಳು ತಮ್ಮ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ಹೋಬಳಿಯ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಸದ್ಯ ಖುದ್ದಾಗಿ ಅರ್ಜಿಗಳನ್ನು ಸಲ್ಲಿಸಲು ಮಾತ್ರ ಅವಕಾಶ ನೀಡಲಾಗಿದೆ. ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿಗೆ ಬರಲಿದೆ.