ಜಮ್ಮು ಕಾಶ್ಮೀರ: ಕಾಶ್ಮೀರದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಯ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ 6 ಜೆಇಎಂ ಉಗ್ರರು ಹತರಾಗಿದ್ದಾರೆ. ದಕ್ಷಿಣ ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ಹಾಗೂ ಕುಲ್ಗಮ್ ಜಿಲ್ಲೆಯಲ್ಲಿ ಉಗ್ರರು ಹಾಗೂ ಸೇನಾಪಡೆ ನಡುವೆ ಪ್ರತ್ಯೇಕ ಗುಂಡಿನ ಕಾಳಗ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಮತ್ತು ಕುಲ್ಗಾಮ್ ಜಿಲ್ಲೆಗಳಲ್ಲಿ ನಡೆದ ಎರಡು ಪ್ರತ್ಯೇಕ,
ಎನ್‌ಕೌಂಟರ್‌ಗಳಲ್ಲಿ ಇಬ್ಬರು ಪಾಕಿಸ್ತಾನಿ ಪ್ರಜೆಗಳು ಸೇರಿದಂತೆ ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ (ಜೆಇಎಂ) ಸಂಘಟನೆಯ ಆರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆಯ 6 ಭಯೋತ್ಪಾದಕರು ಕೊಲ್ಲಲ್ಪಟ್ಟರು.

ಹತರಾದ ಭಯೋತ್ಪಾದಕರಲ್ಲಿ 4 ಮಂದಿಯನ್ನು ಗುರುತಿಸಲಾಗಿದ್ದು, ಅವರಲ್ಲಿ ಇಬ್ಬರು ಪಾಕಿಸ್ತಾನಿಗಳು ಹಾಗೂ ಇಬ್ಬರು ಸ್ಥಳೀಯ ಭಯೋತ್ಪಾದಕರು ಎಂದು ಗುರುತಿಸಲಾಗಿದೆ. ಇನ್ನಿಬ್ಬರು ಭಯೋತ್ಪಾದಕರ ಗುರುತನ್ನು ಇನ್ನಷ್ಟೇ ಕಂಡುಹಿಡಿಯಬೇಕಿದೆ. ಇದು ನಮಗೆ ಸಿಕ್ಕಿದ ದೊಡ್ಡ ಯಶಸ್ಸು ಎಂದು ಕಾಶ್ಮೀರದ ಇನ್ಸ್‌ಪೆಕ್ಟರ್ ಜನರಲ್ ವಿಜಯ್ ಕುಮಾರ್ ಹೇಳಿಕೆ ಉಲ್ಲೇಖಿಸಿ ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.