ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಪಾಕ್ ಪ್ರಜೆಗಳ ಬಂಧನ ಕೇಸ್ ಗೆ ಸಂಬಂಧಿಸಿದಂತೆ 1,350ಕ್ಕೂ ಹೆಚ್ಚು ಪುಟಗಳ ಚಾರ್ಜ್ಶೀಟ್ ಸಲ್ಲಿಕೆ ಮಾಡಲಾಗಿದೆ.
ಬೆಂಗಳೂರಿನ ರಸ್ತೆಗಿಳಿಯಲಿದೆ ಬಿಎಂಟಿಸಿಯ 320 ಎಲೆಕ್ಟ್ರಿಕ್ ಎಸಿ ಬಸ್ಸುಗಳು!
ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಪೂರ್ಣಗೊಳಿಸಿದ ಜಿಗಣಿ ಪೊಲೀಸರು ಕೋರ್ಟ್ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಸುಮಾರು 1,350ಕ್ಕೂ ಹೆಚ್ಚು ಪುಟಗಳ ಚಾರ್ಜ್ಶೀಟ್ ಸಲ್ಲಿಕೆ ಮಾಡಲಾಗಿದ್ದು.. 18 ಆರೋಪಿಗಳ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಿದ್ದಾರೆ. ಇನ್ನು ಪೊಲೀಸರ ತನಿಖೆ ವೇಳೆ ಹಲವು ಮಹತ್ವದ ವಿಚಾರಗಳು ಬೆಳಕಿಗೆ ಬಂದಿದೆ.
ಹಣ ವರ್ಗಾವಣೆ, ಅಕ್ರಮವಾಗಿ ಭಾರತಕ್ಕೆ ಎಂಟ್ರಿ, ಉದ್ಯೋಗ, ಧರ್ಮ ಬೋಧನೆ ವಿಚಾರಗಳನ್ನು ಪೊಲೀಸರು ಬಯಲಿಗೆಳೆದಿದ್ದಾರೆ.
ಬಂಧಿತ 18 ಮಂದಿಯೂ ಪಾಕ್ ಮೂಲದ ಪ್ರಜೆಗಳಾಗಿದ್ದು, ದೇಶದಿಂದ ಬಹಿಷ್ಕರಿಸಲ್ಪಟ್ಟಿದ್ದರು. ಅಕ್ರಮವಾಗಿ ಭಾರತಕ್ಕೆ ಬಂದಿದ್ದ ಇವರು, ತಮ್ಮದೇ ಯೂಟ್ಯೂಬ್ ಚಾನೆಲ್ ತೆರೆದು ಧರ್ಮ ಬೋಧನೆ ಮಾಡುತ್ತಿದ್ದರು. ಈ ಎಲ್ಲಾ ಅಂಶಗಳನ್ನು ಆಧರಿಸಿ ತನಿಖೆ ನಡೆಸಿದ್ದ ಪೊಲೀಸರು ಹಲವು ಮಹತ್ವದ ಸಾಕ್ಷ್ಯಗಳನ್ನು ಕಲೆಹಾಕಿದ್ದರು. ಈ ವೇಳೆ ಪಾಕ್ ಪ್ರಜೆಗಳು ಸೇರಿದಂತೆ ಹಲವು ಮಂದಿಯ ಹೇಳಿಕೆ ದಾಖಲು ಮಾಡಲಾಗಿದೆ. ತಾಂತ್ರಿಕ ಸಾಕ್ಷ್ಯಗಳು, ಸಿಡಿಆರ್ ರಿಪೋರ್ಟ್, ಟವರ್ ಡಂಪ್, ಯೂಟ್ಯೂಬ್ ಚಾನೆಲ್ ವಿವರಗಳನ್ನ ಕಲೆಹಾಕಿದ್ದು, ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಿದ್ದಾರೆ