ಬೆಂಗಳೂರು: ಕ್ಯಾಬ್ ಡ್ರೈವರ್ ಗಳ ಸೋಗಿನಲ್ಲಿ ಗಾಂಜಾ ಮಾರುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ವಿಜಯ್ ಕುಮಾರ್, ವಿಜಯ್ ಕುಮಾರ್ ಬಂಧಿತ ಆರೋಪಿಗಳಾಗಿದ್ದು, ಯಾದಗಿರಿ, ವಿಜಯಪುರದಿಂದ ಬಂದು ಸಿಲಿಕಾನ್ ಸಿಟಿಯಲ್ಲಿ ಕ್ಯಾಬ್ ಓಡಿಸುತ್ತಿದ್ದರು. ಪರಿಚಯವಿರುವ ಗಿರಾಕಿಗಳು, ಕಾಲೇಜು ವಿದ್ಯಾರ್ಥಿಗಳು ಐಟಿ/ಬಿಟಿ ಉದ್ಯೋಗಿಗಳಿಗೆ ಗಾಂಜಾ ಮಾರುತ್ತಿದ್ದರು.
Bigg News: ತಡರಾತ್ರಿ ಪಾರ್ಟಿ ಮಾಡಿದ ಆರೋಪ : ಪೊಲೀಸ್ ಠಾಣೆಗೆ ಹಾಜರಾದ ನಟರು: Video
ಖಚಿತ ಮಾಹಿತಿ ಮೇರೆಗೆ ಸಿಸಿಬಿ ಅಧಿಕಾರಿಗಳು ಹೊಸಕೆರೆ ಹಳ್ಳಿ ಬಳಿ ಗಾಂಜಾ ಮಾರುತ್ತಿದ್ದಾಗ ದಾಳಿ ನಡೆಸಿದ್ದಾರೆ. ಆರೋಪಿಗಳಿಂದ 25 ಲಕ್ಷ ಮೌಲ್ಯದ 15 ಕೆಜಿ ಗಾಂಜಾ, ಒಂದು ತೂಕದ ಮೆಶಿನ್, ಎರಡು ಮೊಬೈಲ್, ಒಂದು ಕಾರು ಸೀಜ್ ಮಾಡಲಾಗಿದ್ದು, ಇನ್ನೂಳಿದ ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಇನ್ನೂ ಈ ಘಟನೆ ಸಂಬಂಧ ಗಿರಿನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದ್ದು, ತನಿಖೆ ಮುಂದುವರಿಸಿದ್ದಾರೆ.