ಮೈಸೂರು: ನಾನು ರೈತ ಸಂಘದ ಹೋರಾಟಗಾರನಾಗಿದ್ದೆ ಎನ್ನುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರ ಹೋರಾಟಕ್ಕೆ ಆಸ್ಪದ ನೀಡದೆ ಬಂಧನ ಮಾಡಿಸಿದ್ದು, ಇವರಿಗೆ ಶೋಭೆ ತರುವಂತದ್ದಲ್ಲ ಎಂದು ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,
ಕಳೆದ ನವೆಂಬರ್ 9ರಂದು ಸಿಎಂ ಸಿದ್ದರಾಮಯ್ಯನವರ ಮನೆ ಮುಂದೆ ಕಬ್ಬು ಬೆಳೆಗಾರ ರೈತರು ಧರಣಿ ನಡೆಸಲು ಆಸ್ಪದ ನೀಡದೆ ಬಂಧನ ಮಾಡಿದ ಪೊಲೀಸ್ ವರ್ತನೆ ಖಂಡನೀಯ, ಮುಖ್ಯಮಂತ್ರಿಗಳ ಮುಂದಿನ ಮೈಸೂರು ಪ್ರವಾಸದ ವೇಳೆ ರೈತ ಮುಖಂಡರ ಸಭೆ ನಡೆಸಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತರಾದ ರಮೇಶ್ ಬಾನುತ್ ರವರು ಬಂದಿತರಾಗಿದ್ದ ಚಳುವಳಿ ನಿರತರ ರೈತರ ಬಳಿ ಬಂದು ಭರವಸೆ ನೀಡಿದ್ದಾರೆ.

ಮುಖ್ಯಮಂತ್ರಿಗಳ ಕ್ಷೇತ್ರದ ಸಮಸ್ಯೆಯಾಗಿರುವ ಕಾರಣ ಸಮಸ್ಯೆ ಬಗೆಹರಿಸಲು ಜಿಲ್ಲಾ ಮಂತ್ರಿಗಳು ವಿಶೇಷ ಗಮನಹರಿಸಬೇಕು. ನಿರ್ಲಕ್ಷ್ಯ ಮಾಡಿದರೆ ರೈತರ ಗಂಭೀರ ಹೋರಾಟ ಎದುರಿಸಬೇಕಾಗುತ್ತದೆ ಎಂದು ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಎಚ್ಚರಿಸಿದರು.

