ಬೆಂಗಳೂರು: ಗಾಂಜಾ ಮಾರಾಟ ಮಾಡಲು ಯತ್ನಿಸಿದ ಇಬ್ಬರು ಅಪರಿಚಿತ ವ್ಯಕ್ತಿಗಳನ್ನು ಕೆಂಗೇರಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿ ಆಗಿದ್ದಾರೆ. ಕೆಂಗೇರಿ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ವ್ಯಕ್ತಿಯೊಬ್ಬರು ದೂರು ಸಲ್ಲಿಸಿದರು. ದೂರಿನ ಅನ್ವಯ ವಿಚಾರಣೆ ಕೈಗೊಂಡ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಬಂಧಿತರಿಂದ 7 ಕೆಜಿ ತೂಕದ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ ಒಂದು ಆಟೋವನ್ನು ವಶಪಡಿಸಿಕೊಂಡಿದ್ದಾರೆ. ಸದ್ಯ ಈ ಸಂಬಂಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
