ಬೆಂಗಳೂರು: ವ್ಹೀಲಿಂಗ್ ಮಾಡಿಕೊಂಡು ರೋಡ್ ನಲ್ಲಿರುವವರನ್ನ ಚುಡಾಯಿಸುತ್ತಿದ್ದ ಇಬ್ಬರು ಕಿಡಿಗೇಡಿಗಳನ್ನು ಮಾಗಡಿ ರಸ್ತೆ ಸಂಚಾರಿ ಪೊಲೀಸರು ಬಂಧಿಸಿದ್ದಾರೆ.
ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿ ವೀಲ್ಹಿಂಗ್ ಮಾಡುತ್ತಿದ್ದ ದರ್ಶನ್ ಗೌಡ, ಅಭಿಷೇಕ್ ಗೌಡರನ್ನು ಬಂಧಿಸಿದ ಮಾಗಡಿ ರಸ್ತೆ ಸಂಚಾರಿ ಪೊಲೀಸರು ಕಿಡಿಗೇಡಿಗಳಿಂದ ಎರಡು ಬೈಕ್ ವಶಪಡಿಸಿಕೊಳ್ಳಲಾಗಿದೆ.

ಮಾಗಡಿ ರಸ್ತೆ, ವಿಜಯನಗರ ಮತ್ತು ಕಾರ್ಡ್ ರಸ್ತೆಯಲ್ಲಿ ವೀಲ್ಹಿಂಗ್ ಮಾಡುತ್ತಿದ್ದ ಯುವಕರು.ವೀಲ್ಹಿಂಗ್ ಮಾಡುವ ಪುಂಡರ ಬಂಧನಕ್ಕೆ ವಿಶೇಷ ಕಾರ್ಯಾಚರಣೆ ನಡೆಸಿದ್ದ ಪಶ್ಚಿಮ ವಿಭಾಗ ಸಂಚಾರ ಪೊಲೀಸರು
ಪ್ರಕರಣ ಸಂಬಂಧ ಮಾಗಡಿ ರಸ್ತೆ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
