ನವದೆಹಲಿ: ಆಮ್ ಆದ್ಮಿ ಪಕ್ಷದ ನಾಯಕರೂ ಆಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮುಂದಿನ 48 ಗಂಟೆಗಳ ಒಳಗೆ ತಮ್ಮ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಭಾನುವಾರ ಘೋಷಿಸಿದ್ದಾರೆ.
ನವೆಂಬರ್ನಲ್ಲಿ ದೆಹಲಿ ಚುನಾವಣೆ ನಡೆಸುವಂತೆ ಎಎಪಿ ಸಂಚಾಲಕರು ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ. ಮದ್ಯನೀತಿ ಹಗರಣದಲ್ಲಿ ಜೈಲುಪಾಲಾಗಿದ್ದ ಕೇಜ್ರಿವಾಲ್, ತಿಹಾರ್ ಜೈಲಿನಿಂದ ಜಾಮೀನಿನ ಮೇಲೆ ಹೊರಬಂದ ನಂತರ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಜನರು ನಿರ್ಧರಿಸುವವರೆಗೂ ಮುಖ್ಯಮಂತ್ರಿ ಹುದ್ದೆಯಲ್ಲಿ ಕುಳಿತುಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.
ಇಂದಿನಿಂದ ಎರಡು ದಿನಗಳ ನಂತರ ನಾನು ರಾಜೀನಾಮೆ ನೀಡಲಿದ್ದೇನೆ, ಕೇಜ್ರಿವಾಲ್ ಪ್ರಾಮಾಣಿಕ ಎಂದು ಸಾರ್ವಜನಿಕರು ತೀರ್ಪು ನೀಡುವವರೆಗೂ ನಾನು ಸಿಎಂ ಕುರ್ಚಿಯಲ್ಲಿ ಕುಳಿತುಕೊಳ್ಳುವುದಿಲ್ಲ ಎಂದು ಹೇಳಿದರು.