ಬೆಂಗಳೂರು: ಎಲ್ಲಿಯವರೆಗೆ EVM ಇರುತ್ತೆ ಅಲ್ಲಿಯವರೆಗೆ ಕಾಂಗ್ರೆಸ್ ಬರೋದು ಕಷ್ಟ ಆಗುತ್ತೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬಹಳಷ್ಟು ಕಡೆ ಇವಿಎಂ ಮ್ಯಾನಿಪ್ಯುಲೆಟ್ ಮಾಡಿದ್ರು ಅಂತ ಚರ್ಚೆ ಅಯ್ತು, ಜಾರ್ಖಂಡ್ನಲ್ಲಿ ಯಾಕೆ ಮಾಡಿಲ್ಲ ಅಂದ್ರೆ ಕೆಲವು ಕಡೆ ಬಿಟ್ಟು ಬಿಡ್ತಾರೆ. ರಾಜ್ಯದಲ್ಲಿ ಕೆಲವು ಗೆದ್ದೆ ಗೆಲ್ತಿವಿ ಅನ್ನೋ ಕಡೆ ಬಿಡ್ತಾರೆ.
ಇದರೊಂದಿಗೆ ಲಾಡ್ಲಿ ಬೆಹಿನ್ ಯೋಜನೆ ಸಾಕಷ್ಟು ಇಂಪ್ಯಾಕ್ಟ್ ಅಗಿದೆ. ಅವರು 6 ತಿಂಗಳು ಮೊದಲು ಕೊಟ್ಟರು, ಇದೆಲ್ಲವೂ ಅವರ ಕೈ ಹಿಡಿದಿದೆ. ನಾವು ಕೊನೆಗೆ ಟಿಕೆಟ್ ಘೋಷಣೆ ಮಾಡಿದ್ವು, ಪಕ್ಷದಲ್ಲೂ ಗೊಂದಲ ಆಯ್ತು. ಶರದ್ ಪವಾರ್ ಗುಂಪು, ಉದ್ದವ್ ಠಾಕ್ರೆ ಗುಂಪಿನ ನಡುವೆ ಸರಿಯಾಗಿ ಹೊಂದಾಣಿಕೆ ಆಗಿಲ್ಲ. ವಿದರ್ಭದಲ್ಲಿ ಹೆಚ್ಚು ಸೀಟ್ ಬರಲಿಲ್ಲ. ಎಲ್ಲಿಯವರೆಗೆ ಇವಿಎಂ ಇರುತ್ತೆ ಅಲ್ಲಿಯವರೆಗೆ ಕಾಂಗ್ರೆಸ್ ಬರೋದು ಕಷ್ಟ ಆಗುತ್ತೆ ಎಂದರು.
Health Tips: ಬೂದುಕುಂಬಳ ಜ್ಯೂಸ್ ಕುಡಿಯುವುದರಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಲಾಭವಿದೆ ಗೊತ್ತಾ..?
ಇವಿಎಂ ಇರೋವರೆಗೆ ಬಿಜೆಪಿನೇ ಗೆಲ್ಲುತ್ತಿರುತ್ತೆ. ಒಂದೊಂದು ರಾಜ್ಯ ಬಿಟ್ಟು ಬಿಡ್ತಾರೆ. ನಮ್ಮ ರಾಜ್ಯದಲ್ಲಿ ಯಡಿಯೂರಪ್ಪ ಬಳಿಕ ದೊಡ್ಡ ನಾಯಕತ್ವ ಇರಲಿಲ್ಲ. ಅದಕ್ಕೆ ಬಿಟ್ಟರು, ಹ್ಯಾಕ್ ಮಾಡೋದ್ರಲ್ಲಿ ಬಿಜೆಪಿಗರು ನಿಪುಣರು, ಜಾರ್ಖಂಡನಲ್ಲಿ ಜೆಎಂಎಂ ಬರುತ್ತೆ ಅಂತ ಬಿಟ್ಟರು. ಕಾಂಗ್ರೆಸ್ ಬರುತ್ತೆ ಅಂತಿದ್ರೆ ಅಲ್ಲೂ ಮಾಡ್ತಿದ್ರು. ಇವಿಎಂ ಬೇಡ ಅಂತ ನಾವು ಸುಪ್ರೀಂ ಕೋರ್ಟ್ ಹೋದರೂ ಆಗಲಿಲ್ಲ. ಅವರು ಸಹ ಎಲೆಕ್ಷನ್ ಕಮೀಷನ್ ಹೇಳಿದ್ದನ್ನ ಒಪ್ಪಿಕೊಂಡರು ಎಂದು ಲೇವಡಿ ಮಾಡಿದರು.