ಮೈಸೂರು:- ನಾಳೆ ಚಾಮುಂಡಿ ಬೆಟ್ಟಕ್ಕೆ ಆಷಾಡ ಪ್ರಯುಕ್ತ ರಾಜ್ಯಾದ್ಯಂತ ಸಾವಿರಾರು ಭಕ್ತರು ಆಗಮಿಸಲಿದ್ದಾರೆ.
ಮಳೆ ಆರ್ಭಟ: ಇಂದಿನಿಂದ ರಾಮನಗರ – ಗೋವಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಬಂದ್!
ನಾಡಿನ ಮೂಲೆ ಮೂಲೆಗಳಿಂದ ಚಾಮುಂಡಿ ಬೆಟ್ಟಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ನಾಡದೇವತೆಯ ಭಕ್ತರು ಆಗಮಿಸಲಿದ್ದಾರೆ. ಹಾಗಾಗಿ ಭಕ್ತರಿಗೆ ಉಚಿತ ಬಸ್ ಪ್ರಯಾಣದ ವ್ಯವಸ್ಥೆ ಮಾಡಲಾಗುತ್ತಿದೆ. ಚಾಮುಂಡಿ ಬೆಟ್ಟದ ತಪ್ಪಲಿನ ಲಲಿತಮಹಲ್ ಪ್ಯಾಲೇಸ್ ಬಳಿಯಿರುವ ಮೈದಾನದಿಂದ ಬಸ್ ಗಳು ಸಂಚರಿಸಲು ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಬೆಟ್ಟಕ್ಕೆ ಬರುವ ಭಕ್ತಾದಿಗಳಿಗೆ ಕುಡಿಯುವ ನೀರು, ಉಪಹಾರ, ಪ್ರಸಾದ ವಿತರಣೆ, ವಾಹನಗಳ ನಿಲುಗಡೆ, ಶೌಚಾಲಯ ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕೂಡ ಸಿದ್ಧತೆ ನಡೆಸಲಾಗಿದೆ.
ಆಷಾಢ ಮಾಸದ 4 ಶುಕ್ರವಾರದ ಜೊತೆಗೆ ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ ಮಹೋತ್ಸವದ ದಿನ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರ ವಾಹನಗಳ ಪ್ರವೇಶಕ್ಕೆ ನಿಷೇಧಿಸಲಾಗುತ್ತದೆ. ನಾಡಿನ ಅಧಿದೇವತೆಯ ದರ್ಶನಕ್ಕೆ ಪಾಸ್ ವ್ಯವಸ್ಥೆ ರದ್ದುಗೊಳಿಸಲಾಗಿದೆ. ಎಲ್ಲರೂ ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆಯಲಿ ಎಂದು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಆದರೆ ವಿಶೇಷ ದರ್ಶನಕ್ಕೆ ದರ ನಿಗದಿ ಮಾಡಲಾಗಿದೆ. 50 ರೂ ಹಾಗೂ 300ರೂ ನಿಗದಿ ಮಾಡಲಾಗಿದೆ. ಈ ಟಿಕೆಟ್ ಹೊರತುಪಡಿಸಿ ಬೇರೆ ಯಾವುದೇ ರೀತಿಯ ಪಾಸ್ಗಳು ಲಭ್ಯವಿರುವುದಿಲ್ಲ
ಚಾಮುಂಡಿ ಬೆಟ್ಟದಲ್ಲಿ ಕುಡಿಯುವ ನೀರು, ಶೌಚಾಲಯ, ವೈದ್ಯಕೀಯ ಸೇವೆ, ತುರ್ತು ವಾಹನಗಳ ವ್ಯವಸ್ಥೆಗೆ ಆದ್ಯತೆ ನೀಡಲಾಗಿದೆ. ಭಕ್ತರಿಗೆ ಪ್ರಸಾದ ವಿತರಿಸುವ ಸಾರ್ವಜನಿಕರು ಕಡ್ಡಾಯವಾಗಿ ಅನುಮತಿ ಪತ್ರ ಪಡೆಯಬೇಕು.