ಬೆಂಗಳೂರು : ಆರ್. ಅಶೋಕ್ ಅವರನ್ನು ಶಾಸಕಾಂಗ ಸಭೆಯಲ್ಲಿ ಸರ್ವಾನುಮತದಿಂದ ವಿಪಕ್ಷ ನಾಯಕನಾಗಿ ಆಯ್ಕೆ ಮಾಡಲಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
Gud News: ನಾನ್ ವೆಜ್ ಪ್ರಿಯರಿಗೆ ಗುಡ್ ನ್ಯೂಸ್: KMF ಮಾದರಿಯಲ್ಲೇ ಮಾಂಸ ಮಾರಾಟ!
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹು ದಿನಗಳಿಂದ ನಾವು ನೀವೆಲ್ಲರೂ ಕಾಯುತ್ತಿದ್ದಂತಹ ವಿಪಕ್ಷ ನಾಯಕನ ಸ್ಥಾನಕ್ಕೆ ಆರ್. ಅಶೋಕ್ ಆಯ್ಕೆ ಮಾಡಿದ್ದಾರೆ. ಎಲ್ಲಾ ಶಾಸಕರುಗಳು ಸಹ ಒಗ್ಗಟ್ಟಾಗಿ ಆರ್. ಅಶೋಕ್ ಅವರನ್ನು ವಿಪಕ್ಷ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. ಬಿಜೆಪಿ ಅಧ್ಯಕ್ಷನಾಗಿ ಅಶೋಕ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ನಾವೆಲ್ಲ ಒಗ್ಗಟ್ಟಾಗಿ, ಒಂದಾಗಿ, ರಾಜ್ಯದಲ್ಲಿರುವ ಬಡವರ ವಿರೋಧಿ, ರೈತ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತೇವೆ. ಭ್ರಷ್ಟ ಸರ್ಕಾರವನ್ನು ರಾಜ್ಯದ ಜನರ ಮುಂದೆ ಕಿವಿ ಹಿಂಡುವ ಕೆಲಸ ಮಾಡುತ್ತೇವೆ. ನಮ್ಮೆಲ್ಲರ ಮುಮದಿನ ಗುರಿ ಲೋಕಸಭೆ ಚುನಾವಣೆ. 28 ಲೋಕಸಭಾ ಕ್ಷೇತ್ರಗಳನ್ನೂ ನಾವು ಗೆಲ್ಲುತ್ತೇವೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸುತ್ತೇವೆ. ಮತ್ತೊಮ್ಮೆ ಮೋದಿ ಅವರನ್ನು ದೇಶದ ಪ್ರಧಾನಿಯಾಗಿ ಆಯ್ಕೆ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.