ಕಲಬುರಗಿ:- ಜಿಲ್ಲೆಯ ಚಿಂಚೋಳಿ ತಾಲೂಕಿನ ಸುಲೆಪೇಟ್ ಬಿಜೆಪಿ ಕಚೇರಿಯಲ್ಲಿ ವಿಪಕ್ಷ ನಾಯಕ ಆರ್.ಅಶೋಕ ಅವರು ತಮ್ಮ ಹಣೆಗೆ ಕುಂಕುಮ ಹಾಕಲು ನಿರಾಕರಿಸಿದ ಘಟನೆ ಜರುಗಿದೆ.
ಸಿದ್ದರಾಮಯ್ಯ ಹಿಂದೂ ವಿರೋಧಿ, ಕುಂಕುಮ ಹಾಕಲ್ಲ ಎಂದೆಲ್ಲಾ ಟೀಕಿಸುವ ಬಿಜೆಪಿ ನಾಯಕರು ಇದೀಗ ಇದಕ್ಕೆ ಏನು ಹೇಳುತ್ತಾರೆ?
ಕಚೇರಿಗೆ ಆಗಮಿಸಿದ ಅಶೋಕ್ ಅವರಿಗೆ ಬಿಜೆಪಿ ಮುಖಂಡರು ಹಾರ ಹಾಕಿ ಸ್ವಾಗತಿಸಲು ಮುಂದಾದರು. ಈ ವೇಳೆ ಎರಡು ಹಾರಗಳನ್ನು ತಾವು ಹಾಕಿಕೊಳ್ಳದೆ ಬಿಜೆಪಿ ಹಿರಿಯ ಮುಖಂಡ ಡಾ ವಿಶ್ವನಾಥ್ ಪವಾರ್ ಮತ್ತು ಇನ್ನೊಬ್ಬರಿಗೆ ಹಾಕಿ ಗೌರವಿಸಿದರು. ಈ ನಡುವೆ ಡಾ ವಿಶ್ವನಾಥ್ ಪವಾರ್ ಅವರು ಅಶೋಕ ಅವರ ಹಣೆಗೆ ಕುಂಕುಮ ಇಡಲು ಮುಂದಾಗಿದ್ದಾರೆ. ಆದರೆ ಅಶೋಕ ಅವರು ಕುಂಕುಮ ಹಚ್ಚದಂತೆ ತಡೆದಿದ್ದಾರೆ. ಬಳಿಕ ವಿಶ್ವನಾಥ್ ಶಾಲು ಹಾಕಿ ಸನ್ಮಾನಿಸಿದರು.