ಬೆಂಗಳೂರು :- ಜಾತಿಗಣತಿ ವರದಿ ವಿಚಾರ, ಇದು ರಾಜಕೀಯ ಪ್ರೇರಿತ ಎಂದು ಅಶ್ವಥ್ ನಾರಾಯಣ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಎಚ್.ಕಾಂತರಾಜು ವರದಿ ಸಮಾಜದಲ್ಲಿ ಸಮಸ್ಯೆ ಬಗೆಹರಿಸುವುದಕ್ಕಿಂತ ರಾಜಕೀಯ ಪ್ರೇರಿತವಾಗಿದೆ. ಸಿಎಂ ಸಿದ್ದರಾಮಯ್ಯ ಅವರಿಗಾಗಲಿ, ಕಾಂಗ್ರೆಸ್ ನವರಿಗಾಗಲಿ ದುರುದ್ದೇಶ ಇದೆ. ಇದರದಲ್ಲಿ ಸದುದ್ದೇಶ ಇದ್ದರೆ ಭ್ರಷ್ಟಾಚಾರ ರಹಿತ ಸರ್ಕಾರ ನೀಡುತ್ತಿದ್ದರು ಎಂದು ಮಾಜಿ ಡಿಸಿಎಂ ಡಾ. ಸಿ.ಎನ್.ಅಶ್ವತ್ಥನಾರಾಯಣ ಕಿಡಿಕಾರಿದ್ದಾರೆ.
ಆಡಳಿತದಲ್ಲಿ ಪಾರದರ್ಶಕತೆ ಇಲ್ಲ. ಗುಣಮಟ್ಟದ ಶಿಕ್ಷಣ, ಸೌಲಭ್ಯ ಇಲ್ಲ. ಯಾವುದೇ ಪ್ರಶ್ನೆಗಳಿಗೂ ಅವರ ಬಳಿ ಉತ್ತರ ಇಲ್ಲ. ಅಧಿಕಾರಕ್ಕೆ ಬಂದ ಬಳಿಕವಾದರೂ ಜನ ಕೊಟ್ಟ ಬೆಂಬಲಕ್ಕೆ ಕೆಲಸಮಾಡಬೇಕಿತ್ತು. ಆದರೆ, ಕಾಂತರಾಜು ವರದಿ ಕೇವಲ ಸಮೀಕ್ಷೆ ಅಂತಾರೆ. ಜಾತಿ ಜನಗಣತಿ ಸಮೀಕ್ಷೆ ಸರಿಯಾಗಿ ಆಗಿಲ್ಲ ಅನ್ನುವ ಮಾತು ಕೇಳಿಬರುತ್ತಿದೆ. ಹಸ್ತಪ್ರತಿ ಇಲ್ಲ, ಕಾರ್ಯದರ್ಶಿ ಸಹಿ ಇಲ್ಲ ಅಂತಿದ್ದರೂ ಈಗ ವರದಿ ಬಿಡುಗಡೆ ಮಾಡುತ್ತಿದ್ದಾರೆ. ಇದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸರ್ವರಿಗೂ ಸಮಪಾಲು, ಸಮಬಾಳು ಅಂತಿದ್ದಾರೆ, ಬರೀ ಸ್ವಾರ್ಥ, ಕುಟುಂಬ ರಾಜಕಾರಣ ಮಾಡುತ್ತಿದ್ದಾರೆ. ಜನರ ಮೇಲೆ ಎಳ್ಳಷ್ಟು ವಿಶ್ವಾಸ ಇಲ್ಲ. ವಿಷ ತುಂಬುವ ಕೆಲಸ ಮಾಡ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.