ಬೆಂಗಳೂರು: ಕಂಬಳದ ಪುನೀತ್ ರಾಜ್ ಕುಮಾರ್ ವೇದಿಕೆ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ನವರು ಚಾಲನೆ ನೀಡಿದರು.
ಹಾಗೆ ದೀಪ ಬೆಳಗುವ ಮೂಲಕ ಬೆಂಗಳೂರು ಕಂಬಳದ ಜೋಡು ಕರೆಯನ್ನು ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಉದ್ಘಾಟಿಸಿದರು. ಮಾಜಿ ಸಿಎಂ ಯಡಿಯೂರಪ್ಪ, ಶಾಸಕ ಎಸ್.ಆರ್.ವಿಶ್ವನಾಥ್, ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈ, ಉಮೇಶ್ ಶೆಟ್ಟಿ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.
ಕಂಬಳದಲ್ಲಿ ಭಾಗವಹಿಸಲು ಈಗಲೇ 228 ಜೋಡಿ ಕೋಣಗಳು ನೋಂದಣಿಯಾಗಿವೆ.ಅಖಾಂಡಕ್ಕೆ 228 ಜೋಡಿ ಕೋಣಗಳು ಇಳಿಯಲಿವೆ. ಬೆಂಗಳೂರಿನಲ್ಲಿ ನಡೆಯುವ ಕಂಬಳಕ್ಕೆ 77.50- 78 ಕೋಟಿ ರೂ. ವೆಚ್ಚ ತಗಲುವ ನಿರೀಕ್ಷೆಯಿದ್ದು, ಸರ್ಕಾರ ಒಂದು ಕೋಟಿ ರೂ. ಅನುದಾನ ಪ್ರಕಟಿಸಿದೆ. ಬೆಂಗಳೂರಿನ ಪ್ರತಿಷ್ಠಿತ ಸಂಸ್ಥೆಗಳು ಹಣ ಸಹಾಯ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಕೈಜೋಡಿಸಿವೆ