ವಿಶ್ವವೇ ಮೆಚ್ಚಿದ ಕಾಂತಾರ ಚಿತ್ರ ಸೇರಿದಂತೆ ಸೂಪರ್ ಹಿಟ್ ಚಿತ್ರಗಳಿಗೆ ಸಂಗೀತ ನೀಡಿರುವ ಅಜನೀಶ್ ಲೋಕನಾಥ್ abbs studios ಲಾಂಛನದಲ್ಲಿ ಸಿ.ಆರ್ ಬಾಬಿ ಅವರ ಜೊತೆಗೂಡಿ ನಿರ್ಮಿಸಿರುವ ಹಾಗೂ ಸಿ.ಆರ್.ಬಾಬಿ ನಿರ್ದೇಶಿಸಿರುವ ಮತ್ತು ಬಿಗ್ ಬಾಸ್ ಖ್ಯಾತಿಯ ಶೈನ್ ಶೆಟ್ಟಿ ಹಾಗೂ ಅಂಕಿತ ಅಮರ್ ಜೋಡಿಯ “ಜಸ್ಟ್ ಮ್ಯಾರೀಡ್” ಚಿತ್ರಕ್ಕಾಗಿ ಪ್ರೇಮಕವಿ ಕೆ.ಕಲ್ಯಾಣ್ ಬರೆದಿರುವ “ಇದು ಮೊದಲನೇ ಸ್ವಾಗತಾನಾ” ಎಂಬ ಹಾಡು ಪ್ರೇಮಿಗಳ ದಿನದಂದೇ ಬಿಡುಗಡೆಯಾಗಿದೆ.
ಈ ಸುಂದರ ಯುಗಳಗೀತೆಯನ್ನು ಬಿಡುಗಡೆ ಮಾಡಿದ ಅಶ್ವಿನಿ ಪುನೀತ್ ರಾಜಕುಮಾರ್ ಅವರು, “ಇದು ಮೊದಲನೇ ಸ್ವಾಗತನಾ” ಹಾಡು ತುಂಬಾ ಚೆನ್ನಾಗಿದೆ. ಬಾಬಿ ಅವರ ನಿರ್ದೇಶನದಲ್ಲಿ ಹಾಗೂ ಅಜನೀಶ್ ಲೋಕನಾಥ್ ಅವರ ನಿರ್ಮಾಣದಲ್ಲಿ ಮೂಡಿಬಂದಿರುವ “ಜಸ್ಟ್ ಮ್ಯಾರೀಡ್” ಚಿತ್ರದ ಬಿಡುಗಡೆಗೆ ನಾನು ಕಾತುರದಿಂದ ಕಾಯುತ್ತಿದ್ದೇನೆ ಎಂದಿದ್ದಾರೆ.
“ಇದು ಮೊದಲನೇ ಸ್ವಾಗತಾನಾ” ಹಾಡನ್ನು ಬಿಡುಗಡೆ ಮಾಡಿಕೊಟ್ಟ ಅಶ್ವಿನಿ ಪುನೀತ್ ರಾಜಕುಮಾರ್ ಅವರಿಗೆ ಧನ್ಯವಾದ. ಪ್ರೇಮಿಗಳ ದಿನದಂದು ಬಿಡುಗಡೆಯಾದ ಈ ಹಾಡಿನ ಚಿತ್ರೀಕರಣ ಬೆಂಗಳೂರಿನಲ್ಲೇ ನಡೆದಿದೆ. ನಾನೇ ಈ ಹಾಡಿಗೆ ನೃತ್ಯ ನಿರ್ದೇಶನ ಮಾಡಿದ್ದೇನೆ. ಕೆ.ಕಲ್ಯಣ್ ಬರೆದು ಅಜನೀಶ್ ಲೋಕನಾಥ್ ಸಂಗೀತ ನೀಡಿ ಹಾಗೂ ಜಸ್ಕರಣ್ ಸಿಂಗ್ ಅವರ ಕಂಠಸಿರಿಯಲ್ಲಿ ಮೂಡಿಬಂದಿರುವ ಈ ಹಾಡು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಹಾಡು ಬಿಡುಗಡೆಯಾದ ತಕ್ಷಣದಿಂದಲೇ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು, ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. “ಜಸ್ಟ್ ಮ್ಯಾರೀಡ್” ಆದವರಿಗಂತೂ ನಮ್ಮ ಚಿತ್ರ ಬಹಳ ಹತ್ತಿರವಾಗಲಿದೆ. ಚಿತ್ರತಂಡದ ಸಹಕಾರದಿಂದ ಒಂದೊಳ್ಳೆ ಪ್ರೇಮಕಥೆ ತೆರೆಗೆ ಬರಲು ಸಿದ್ದವಾಗಿದೆ. ಸದ್ಯದಲ್ಲೇ ಬಿಡುಗಡೆಯಾಗಲಿದೆ ಎಂದು ನಿರ್ದೇಶಕಿ ಸಿ.ಆರ್.ಬಾಬಿ ತಿಳಿಸಿದ್ದಾರೆ.
ನಿರ್ದೇಶಕಿ ಬಾಬಿ ಅವರೆ ಕಥೆ ಬರೆದಿದ್ದಾರೆ. ಚಿತ್ರಕಥೆ ಸಿ.ಆರ್ ಬಾಬಿ ಹಾಗೂ ಧನಂಜಯ್ ರಂಜನ್ ಅವರದು. ರಘು ನಿಡುವಳ್ಳಿ ಈ ಚಿತ್ರದ ಸಂಭಾಷಣೆಕಾರರು. ಪಿ ಜಿ ಛಾಯಾಗ್ರಹಣ, ಶ್ರೀಕಾಂತ್ ಮತ್ತು ಅಶಿಕ್ ಕುಸುಗೊಳ್ಳಿ (ಗಣೇಶ ಸಾಂಗ್) ಸಂಕಲನ, ಅಮರ್ ಕಲಾ ನಿರ್ದೇಶನ, ವಿಕ್ರಮ್ ಮೋರ್, ಸಾಹಸ ನಿರ್ದೇಶನ ಹಾಗೂ ಬಾಬಾ ಭಾಸ್ಕರ್, ಶಾಂತಿ ಅರವಿಂದ್ ಅವರ ನೃತ್ಯ ನಿರ್ದೇಶನವಿರುವ “ಜಸ್ಟ್ ಮ್ಯಾರೀಡ್” ಚಿತ್ರದ ಹಾಡುಗಳನ್ನು ಪ್ರಮೋದ್ ಮರವಂತೆ ಮತ್ತು ಧನಂಜಯ್ ಬರೆದಿದ್ದಾರೆ.
ಶೈನ್ ಶೆಟ್ಟಿ, ಅಂಕಿತ ಅಮರ್, ದೇವರಾಜ್, ಅಚ್ಯುತಕುಮಾರ್, ಮಾಳವಿಕ ಅವಿನಾಶ್, ಅನೂಪ್ ಭಂಡಾರಿ, ಶ್ರುತಿ ಹರಿಹರನ್, ಶ್ರುತಿ ಕೃಷ್ಣ, ಸಾಕ್ಷಿ ಅಗರವಾಲ್, ಶ್ರೀಮಾನ್, ರವಿಶಂಕರ್ ಗೌಡ, ರವಿ ಭಟ್, ವಾಣಿ ಹರಿಕೃಷ್ಣ, ಸಂಗೀತ ಅನಿಲ್, ಕುಮುದಾ, ಜಯರಾಮ್, ವೇದಿಕಾ ಕಾರ್ಕಳ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.