ಬೆಂಗಳೂರು: ರಾಜಧಾನಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಬೆಳಗ್ಗೆ 10.30ಕ್ಕೆ ನಟ ಪುನೀತ್ರಾಜಕುಮಾರ್ ಅವರ ಪತ್ನಿ ಅಶ್ವಿನಿ ಅವರು ‘ಕಂಬಳ ಕರೆ’ಗೆ ಚಾಲನೆ ನೀಡಲಿದ್ದಾರೆ.
ದೀರ್ಘಕಾಲದ ಸಂದಿ ನೋವು & ವಯಸ್ಸಾದಂತೆ ಈ ನೋವುಗಳು ನಿಮ್ಮನ್ನ ಕಾಡುತ್ತಿದ್ದರೆ: ಇಲ್ಲಿದೆ ಉಚಿತ – ಸಲಹೆ, ಸರಳ ಚಿಕಿತ್ಸೆ
ಮುಖ್ಯಸಭಾ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಜೆ 5.30ಕ್ಕೆ ಉದ್ಘಾಟಿಸಲಿದ್ದಾರೆ ಎಂದು ಬೆಂಗಳೂರು ಕಂಬಳ ಸಮಿತಿಯ ಅಧ್ಯಕ್ಷ, ಶಾಸಕ ಅಶೋಕ್ ರೈ ತಿಳಿಸಿದ್ದಾರೆ.
ನಗರದ ಅರಮನೆ ಮೈದಾನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶನಿವಾರ ಬೆಳಗ್ಗೆ 11 ಗಂಟೆಯ ಬಳಿಕ ಹಲವು ನಟ ನಟಿಯರು ಭಾಗಿಯಾಗುತ್ತಾರೆ. ಸಂಜೆಯ ಸಭಾ ಕಾರ್ಯಕ್ರಮದಲ್ಲಿ ಸಂಪುಟ ಸಚಿವರು, ರಾಜಕೀಯ ನಾಯಕರು ಭಾಗವಹಿಸಲಿದ್ದಾರೆ. ಭಾನುವಾರ(ನ.26) ಸಂಜೆ 5.30ಕ್ಕೆ ಕಂಬಳದ ಸಮಾರೋಪ ಕಾರ್ಯಕ್ರಮ ನಡೆಯುತ್ತದೆ ಎಂದು ಮಾಹಿತಿ ನೀಡಿದರು.