ಇಂದು ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಇಂದು ನಡೆಯುವ ಮಹಿಳಾ ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಉಭಯ ತಂಡಗಳು ಮುಖಾಮುಖಿ ಆಗಲಿದೆ.
ಅಕ್ಟೋಬರ್ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ನ ಸಿದ್ಧತೆಗೆ ಈ ಪಂದ್ಯಾವಳಿ ಎಲ್ಲ ತಂಡಗಳಿಗೂ ಅತ್ಯಂತ ಪ್ರಮುಖವಾಗಿದೆ. ಒಟ್ಟು 8 ತಂಡಗಳು ಈ ಬಾರಿ ಏಷ್ಯಾಕಪ್ನಲ್ಲಿ ಕಣಕ್ಕಿಳಿಯುತ್ತಿವೆ. ಏಷ್ಯಾ ಕಪ್ ಟಿ20 ಮಾದರಿಯಲ್ಲಿ ಆಡಿದ 20 ಪಂದ್ಯಗಳಲ್ಲಿ ಭಾರತ 17ರಲ್ಲಿ ಜಯಭೇರಿ ಮೊಳಗಿಸಿದೆ. 2022ರಲ್ಲಿ
ಬಾಂಗ್ಲಾದೇಶವನ್ನು ಮಣಿಸಿ ಚಾಂಪಿಯನ್ ಆಗಿತ್ತು. ಸದ್ಯ ಹಾಲಿ ಚಾಂಪಿಯನ್ ಆಗಿರುವ ಭಾರತ ಈ ಬಾರಿಯೂ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವಾಗಿ ಕಾಣಿಸಿಕೊಂಡಿದೆ.
ಪುರುಷರ ಕ್ರಿಕೆಟ್ನಂತೆಯೇ ಮಹಿಳಾ ಕ್ರಿಕೆಟ್ನಲ್ಲಿಯೂ ಭಾರತ ತಂಡ ಪಾಕಿಸ್ತಾನ(India Women vs Pakistan Women) ವಿರುದ್ಧ ಉತ್ತಮ ದಾಖಲೆ ಹೊಂದಿದೆ. ಇದುವರೆಗೆ 14 ಟಿ20 ಪಂದ್ಯಗಳಲ್ಲಿ 11ರಲ್ಲಿ ಗೆಲುವು ಸಾಧಿಸಿದೆ. ಏಷ್ಯಾ ಕಪ್ನಲ್ಲಿ ಒಟ್ಟು 6 ಸಲ ಮುಖಾಮುಖೀಯಾಗಿದ್ದು, ಭಾರತ ಐದನ್ನು ಗೆದ್ದಿದೆ. ಭಾರತ ಇತ್ತೀಚೆಗೆ ತವರಿನ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿತ್ತು. ಹೀಗಾಗಿ ಇದೇ ಪ್ರದರ್ಶನ ಏಷ್ಯಾಕಪ್ನಲ್ಲಿಯೂ ಮೂಡಿಬರಬಹುದೆಂದು ನಿರೀಕ್ಷೆ ಮಾಡಲಾಗಿದೆ