ಟೆಹ್ರಾನ್: ಸಿರಿಯಾ ರಾಜಧಾನಿ ದಮಾಸ್ಕಸ್ನಲ್ಲಿರುವ ಇರಾನ್ ರಾಯಭಾರ ಕಚೇರಿಯ ಸಿಬ್ಬಂದಿ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟಿದ್ದಾರೆ ಎಂದು ಇರಾನ್ನ ವಿದೇಶಾಂಗ ಇಲಾಖೆ ಮಾಹಿತಿ ನೀಡಿದೆ.
ಸೈಯದ್ ದಾವೂದ್ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆದಿದ್ದು ಸೈಯದ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ. ಅವರ ಮೃತದೇಹವನ್ನು ಇರಾನ್ಗೆ ಸ್ಥಳಾಂತರಿಸಲಾಗಿದೆ. ಸಿರಿಯಾದ ಮಧ್ಯಂತರ ಸರಕಾರ ದುಷ್ಕರ್ಮಿಗಳನ್ನು ಪತ್ತೆಹಚ್ಚಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಇರಾನ್ ವಿದೇಶಾಂಗ ಇಲಾಖೆಯ ವಕ್ತಾರರು ಆಗ್ರಹಿಸಿದ್ದಾರೆ.