ದಕ್ಷಿಣ ಕನ್ನಡ:- ಲೋಕಸಭಾ ಚುನಾವಣೆ ಮುಗಿದ ಮೇಲೆ ‘ಮೇ’ ನಲ್ಲಿ ವಿಧಾನಸಭಾ ಚುನಾವಣೆ ಬರುತ್ತದೆ ತಯರಾಗಿ ಎಂದು ಪದಾಧಿಕಾರಿಗಳ ಸಭೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಕಾರ್ಯಕರ್ತರಿಗೆ ಸೂಚನೆ ನೀಡಿದ್ದಾರೆ. ಬಳಿಕ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಕಟೀಲ್, ‘ಲೋಕಸಭೆ ಚುನಾವಣೆ ಮುಗಿದ ಆರು ತಿಂಗಳಲ್ಲಿ ವಿಧಾನಸಭೆ ಚುನಾವಣೆ ಬರುತ್ತದೆ. ಈ ಬಗ್ಗೆ ನಮಗೆ ಅತ್ಯಂತ ಸ್ಪಷ್ಟ ವಿಶ್ವಾಸವಿದೆ ಎಂದಿದ್ದಾರೆ.
ಇನ್ನು ಇದೇ ವೇಳೆ ಶಿವಮೊಗ್ಗದಿಂದ ಕೆ.ಎಸ್.ಈಶ್ವರಪ್ಪ ಸ್ವತಂತ್ರ ಸ್ಪರ್ಧೆ ವಿಚಾರ , ‘ಈಶ್ವರಪ್ಪ ಜೊತೆ ಮಾತುಕತೆ ಮಾಡುತ್ತಿದ್ದು, ಎಲ್ಲವೂ ಸರಿಹೋಗುತ್ತದೆ. ಜಿಲ್ಲೆಯಲ್ಲಿ ಒಂದು ರಾಜಕೀಯ ಪಾರ್ಟಿಗಳಲ್ಲಿ ಇರುವ ಸಮಸ್ಯೆ ಇದೆ. ವಿಧಾನಸಭಾ ಕ್ಷೇತ್ರದಲ್ಲಿ ಹತ್ತಕ್ಕೂ ಹೆಚ್ಚು ಸಮರ್ಥ ನಾಯಕರಿದ್ದಾರೆ. ಆದ್ದರಿಂದ ನಮ್ಮಲ್ಲಿ ನಾಯಕತ್ವದ ಗೊಂದಲ ಇದೆ. ಭಾರತಮಾತೆ ಹಾಗೂ ಮೋದಿಗಾಗಿ ಈ ಗೊಂದಲವೆಲ್ಲವನ್ನು ಬದಿಗಿಟ್ಟು ಕೆಲಸ ಮಾಡುತ್ತಾರೆ. ನನಗೆ ಕೇರಳದ ಚುನಾವಣೆ ಕೂಡ ನೋಡಿಕೊಳ್ಳಿ ಎಂದು ಹೇಳಿದ್ದಾರೆ. ಆದರೆ, ನನ್ನ ಕ್ಷೇತ್ರಕ್ಕೆ ನಾನು ಹೆಚ್ಚು ಸಮಯ ನೀಡುತ್ತೇನೆ ಎಂದು ಹೇಳಿದರು.