ಅಥಣಿ : ತಾಲೂಕಿನ ಜಂಬಗಿ ಗ್ರಾಮದ ಹೊರ ವಲಯದಲ್ಲಿ ಬೈಕ್ ಸ್ಕಿಡ್ ಆದ ಪರಿಣಾಮ ಅಪಘಾತ ಸಂಭವಿಸಿದೆ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ.
ಇಂದು ಸಾಯಂಕಾಲ 6 ಗಂಟೆ ಸುಮಾರಿಗೆ ಸಂಬರಗಿ ಗ್ರಾಮದಿಂದ ಅಥಣಿ ಮಾರ್ಗವಾಗಿ ಸಾಗುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು ತಲೆಯ ಭಾಗಕ್ಕೆ ಗಂಭೀರ ಗಾಯಗೊಂಡಿದೆ ವ್ಯಕ್ತಿಯ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಬಂದಿಲ್ಲ.
ಸ್ಥಳಕ್ಕೆ ಆಗಮಿಸಿದ 108 ಅಂಬುಲೆನ್ಸ್ ಸಿಬ್ಬಂದಿಗಳು
ಅಪಘಾತಕ್ಕಿಡಾದ ವ್ಯಕ್ತಿಯನ್ನ ಅಥಣಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.