ಬಾಲಿವುಡ್ ನಟಿ ಅಥಿಯಾ ಶೆಟ್ಟಿ ಹಾಗೂ ಕ್ರಿಕೆಟಿಗ ಕೆ.ಎಲ್ ರಾಹುಲ್ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಪೋಷಕರಾಗುತ್ತಿರುವ ಸಿಹಿ ಸುದ್ದಿಯನ್ನು ಅಥಿಯಾ ಸೋಷಿಯಲ್ ಮೀಡಿಯಾದಲ್ಲಿ ತಿಳಿಸಿದ್ದಾರೆ. ಜೊತೆಗೆ ಸುನೀಲ್ ಶೆಟ್ಟಿ ಕೂಡ ಅಜ್ಜನಾಗುತ್ತಿರುವ ಸಂಭ್ರಮವನ್ನು ಸಾಮಾಜಿಕ ಜಾಲಾ ತಾಣದ ಮೂಲಕ ತಿಳಿಸಿದ್ದಾರೆ.
‘ದೇವರ ಸುಂದರ ಆಶೀರ್ವಾದ 2025ರಲ್ಲಿ ಬರಲಿದೆ’ ಎಂದು ಅಥಿಯಾ ದಂಪತಿ ಪೋಷಕರಾಗುತ್ತಿರುವ ಖುಷಿಯ ಸುದ್ದಿಯನ್ನು ತಿಳಿಸಿದ್ದಾರೆ. ಈ ಜೋಡಿಗೆ ಪೂಜಾ ಹೆಗ್ಡೆ, ಅಹಾನ್ ಶೆಟ್ಟಿ, ಸುನೀಲ್ ಶೆಟ್ಟಿ, ವಿಕ್ರಾಂತ್ ಮಾಸ್ಸಿ ಸೇರಿದಂತೆ ಅನೇಕರು ಶುಭ ಹಾರೈಸಿದ್ದಾರೆ.
ಕಳೆದ ವರ್ಷ ಜನವರಿ 23ರಂದು ಕ್ರಿಕೆಟಿಗ ಕೆ.ಎಲ್ ರಾಹುಲ್ ಜೊತೆ ಅಥಿಯಾ ಅದ್ಧೂರಿಯಾಗಿ ಮದುವೆಯಾದರು. ಹಲವು ವರ್ಷಗಳ ಕಾಲ ಪ್ರೀತಿಸುತ್ತಿದ್ದ ಜೋಡಿ ಗುರು ಹಿರಿಯರ ಸಮ್ಮುಖದಲ್ಲಿ ಅದ್ದೂರಿಯಾಗಿ ಹಸೆಮಣೆ ಏರಿದ್ದರು. ಇದೀಗ ಮದುವೆಯಾದ ಒಂದೂವರೆ ವರ್ಷದಲ್ಲಿ ಹೊಸ ಅತಿಥಿಯ ಆಗಮನದ ಖುಷಿಯಲ್ಲಿದ್ದಾರೆ.