ನವದೆಹಲಿ:- ಗ್ಯಾರಂಟಿ ಕುರಿತು ಟೀಕಿಸಿದ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ಮಾಡಿದ ಮಲ್ಲಿಕಾರ್ಜುನ ಖರ್ಗೆಗೆ ಲೆಹರ್ ಸಿಂಗ್ ಸಿರೋಯಾ ತಿರುಗೇಟು ಕೊಟ್ಟಿದ್ದಾರೆ.
ಎಕ್ಸ್ನಲ್ಲಿ ಟ್ವಿಟ್ ಮಾಡಿದ ಲೆಹರ್ ಸಿಂಗ್ ಸಿರೋಯಾ “ಖರ್ಗೆ ಕುಟುಂಬ ನೇತೃತ್ವದ “ಸಿದ್ಧಾರ್ಥ ವಿಹಾರ ಟ್ರಸ್ಟ್” ವಿರುದ್ಧ ಕೇಳಿಬಂದಿರುವ ಭೂ ಕಬಳಿಕೆ ಆರೋಪದ ಬಗ್ಗೆ ಇನ್ನೂವರೆಗೂ ಮಾತನಾಡದ ಮಲ್ಲಿಕಾರ್ಜು ಖರ್ಗೆ ಅವರು ಪ್ರಧಾನಿ ಮೋದಿಯವರ ವಿರುದ್ಧ ವಾಗ್ದಾಳಿ ಮಾಡಿದ್ದನ್ನು ನೋಡಿ ನನಗೆ ಆಶ್ಚರ್ಯವಾಗಿದೆ” ಎಂದು ಮಲ್ಲಿಕಾರ್ಜು ಖರ್ಗೆ ವಿರುದ್ಧ ವ್ಯಂಗ್ಯವಾಡಿದರು.
ಕಾಂಗ್ರೆಸ್ ಆಮಿಷಕ್ಕೆ ಒಳಗಾದ್ರೆ ಮುಂದೆ ಹಿಂದೂಗಳ ದೇವಸ್ಥಾನ, ಮಠಗಳು ಉಳಿಯಲ್ಲ: ತೇಜಸ್ವಿ ಸೂರ್ಯ!
ಖರ್ಗೆ ಕುಟುಂಬ ನೇತೃತ್ವದ ಸಿದ್ಧಾರ್ಥ ವಿಹಾರ ಟ್ರಸ್ಟ್ಗೆ ಮಂಜೂರಾಗಿದ್ದ ಐದು ಎಕರೆ ಭೂಮಿಯನ್ನು ಸದ್ದಿಲ್ಲದೆ ಕೆಐಎಡಿಬಿ ವಾಪಸ್ ಮಾಡುವ ಮೂಲಕ ಪರೋಕ್ಷವಾಗಿ ತಪ್ಪಿತಸ್ಥರೆಂದು ಒಪ್ಪಿಕೊಂಡಿದ್ದಾರೆ” ಎಂದು ಹೇಳಿದರು.
ಕರ್ನಾಟಕ ಕಾಂಗ್ರೆಸ್ನಲ್ಲಿ ಮೂಡಿದ ಬಿರುಕಿಗೆ ತೇಪೆ ಹಚ್ಚುವ ಭರದಲ್ಲಿ ಮಲ್ಲಿಕಾರ್ಜುನ್ ಖರ್ಗೆಯವರು ಗ್ಯಾರಂಟಿಯಿಂದ ಆಗುವ ಸಮಸ್ಯೆ ಬಗ್ಗೆ ಹೇಳಿದ್ದಾರೆ. ಅಪರೂಪಕ್ಕೆ ಸತ್ಯವನ್ನು ಹೇಳಿದ್ದಾರೆ. ತೇಪೆ ಹಚ್ಚಲು ಹೋಗಿ ಪಕ್ಷಕ್ಕೆ ಇನ್ನಷ್ಟು ಹಾನಿಯುಂಟು ಮಾಡಿದೆ ಅಂತ ಮಲ್ಲಿಕಾರ್ಜುನ್ ಖರ್ಗೆ ಅವರು ಅರಿತುಕೊಂಡಿರಬೇಕು. ಇದನ್ನು ಮರೆಮಾಚಲು ಮಲ್ಲಿಕಾರ್ಜುನ್ ಖರ್ಗೆ ಅವರು ಪ್ರಧಾನಿ ಮೋದಿಯವರ ವಿರುದ್ಧ ಮಾತನಾಡಿದ್ದಾರೆ ಎಂದರು.
ಆದರೆ, ಗ್ಯಾರಂಟಿಯಿಂದ ಆಗುತ್ತಿರುವ ಹಾನಿ ಬಗ್ಗೆ ಮಲ್ಲಿಕಾರ್ಜು ಖರ್ಗೆ ಅವರು ಪ್ರಾಮಾಣಿಕವಾಗಿ ಒಪ್ಪಿಕೊಂಡಿದನ್ನು ಮತ್ತು ಕರ್ನಾಟಕದ ಈ ಸ್ಥಿತಿಗೆ ಕನ್ನಡಿ ಹಿಡಿದಿರುವ ಮಲ್ಲಿಕಾರ್ಜುನ ಖರ್ಗೆಜಿಯವರ ಪ್ರಾಮಾಣಿಕತೆಯನ್ನು ನಾನು ಪ್ರಶಂಸಿಸುತ್ತೇನೆ ಎಂದು ವ್ಯಂಗ್ಯವಾಡಿದರು.