ಬೆಂಗಳೂರು;- ಡಿಎಂಕೆ ಮುಖಂಡ ಗುರುಸ್ವಾಮಿ ಮೇಲೆ ಅಟ್ಯಾಕ್ ಕೇಸ್ ಗೆ ಸಂಬಂಧಿಸಿದಂತೆ ಬಾಣಸವಾಡಿ ಪೊಲೀಸರು ನಾಲ್ಕೈದು ಮಂದಿಯನ್ನು ಅರೆಸ್ಟ್ ಮಾಡಿದ್ದಾರೆ. ಕಳೆದ ಎರಡು ದಿನಗಳಿಂದ ತಮಿಳುನಾಡಿನಲ್ಲಿ ಬೀಡು ಬಿಟ್ಟಿದ್ದ ಪೊಲೀಸರು, ಮಧುರೈ ಹಾಗೂ ಧರ್ಮಪುರಿ ಯಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಸದ್ಯಕ್ಕೆ ತಮಿಳುನಾಡಿನಿಂದ ಕರೆತಂದಿದ್ದು, ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಗುರುಸ್ವಾಮಿ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ರಾಜಕೀಯ ದ್ವೇಷಕ್ಕೆ ಕೊಲೆ ಯತ್ನ ನಡೆಸಿರುವ ಬಗ್ಗೆ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

