ಕೊಪ್ಪಳ:- ಜೈ ಶ್ರೀರಾಮ್ ಘೋಷಣೆ ಕೂಗಿದ ವ್ಯಕ್ತಿ ಮೇಲೆ ಹಲ್ಲೆ ನಡೆದ ಘಟನೆ ಜಿಲ್ಲೆಯ ಗಂಗಾವತಿಯಲ್ಲಿ ಜರುಗಿದೆ. ಶ್ರೀರಾಮನಗರದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದ ವ್ಯಕ್ತಿ ಮೇಲೆ ಸುಮಾರು 20 ಮಂದಿ ಮುಸ್ಲಿಂ ಯುವಕರ ಗುಂಪು ಹಲ್ಲೆ ಮಾಡಿದೆ ಎಂಬ ಆರೋಪ ಕೇಳಿಬಂದಿದೆ.
ಇಂದು ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ – ಯೆಲ್ಲೋ ಅಲರ್ಟ್ ಘೋಷಣೆ!
ಶ್ರೀರಾಮನಗರದ ಸನ್ ಶೈನ್ ಬಾರ್ನಲ್ಲಿ ಮಂಗಳವಾರ ರಾತ್ರಿ ಘಟನೆ ಸಂಭವಿಸಿದೆ. ಮದ್ಯ ಸೇವನೆಯ ವೇಳೆ ಶ್ರೀರಾಮ ನಗರದ ಕುಮಾರ್ ರಾಠೋಡ್ ಎಂಬಾತ ಜೈ ಶ್ರೀರಾಮ್ ಘೋಷಣೆ ಕೂಗಿದ್ದರು. ಅದೇ ವೇಳೆ ಮುಸ್ಲಿಂ ಯವಕರು ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಸದ್ಯ ಗಾಯಾಳು ಕುಮಾರ್ ರಾಠೋಡ್ರನ್ನು ಗಂಗಾವತಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಗಂಗಾವತಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.