ರಾಯಚೂರು : ‘ ಪಡಿತರದಾರರಿಗೆ ಹಣದ ಬದಲು ಅಕ್ಕಿ ನೀಡಲು ಪ್ರಯತ್ನ ನಡೆಸಲಾಗುತ್ತಿದ್ದು, ಶೀಘ್ರವೇ ಈ ಬಗ್ಗೆ ಕ್ರಮಕೈಗೊಳ್ಳಲಾಗುವುದು’ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ ಸದ್ಯ ಐದು ಕೆಜಿ ಅಕ್ಕಿ ವಿತರಿಸಲಾಗುತ್ತಿದ್ದು, ಐದು ಕೆಜಿ ಅಕ್ಕಿಯ ಹಣವನ್ನು ಪಡಿತರದಾರರ ಖಾತೆಗೆ ಜಮಾ ಮಾಡಲಾಗುತ್ತಿದೆ.
ತೆಲಂಗಾಣ, ಆಂಧ್ರ ಮತ್ತು ಛತ್ತೀಸಗಡ್ದಲ್ಲಿ ಅಕ್ಕಿ ಖರೀದಿಗೆ ಪರಿಶೀಲನೆ ನಡೆಸಲಾಗುತ್ತಿದೆ’ ಎಂದರು. ‘ರಾಜ್ಯದಲ್ಲಿ 1.16 ಕೋಟಿ ಪಡಿತರ ಚೀಟಿಗಳಿದ್ದು 4 ಕೋಟಿ ಫಲಾನುಭವಿಗಳಿದ್ದಾರೆ. ಈ ತಿಂಗಳು 644 ಕೋಟಿ ರೂ. ಹಣವನ್ನು ಪಡಿತರದಾರರ ಖಾತೆಗೆ ಜಮಾ ಮಾಡಲಾಗಿದೆ. ಕೆಲವರ ಬ್ಯಾಂಕ್ ಖಾತೆ ಇಲ್ಲದ ಕಾರಣ ಹಣ ಜಮೆ ಮಾಡಲು ಸಮಸ್ಯೆಯಾಗಿದ್ದು, 680 ಕೋಟಿ ರೂ.ವರೆಗೆ ನೀಡಬೇಕಾಗುತ್ತದೆ.
MP Renukacharya: ಯತ್ನಾಳ್ ಒಂದು ಹುಚ್ಚು ನಾಯಿ ಇದ್ದಂತೆ: ಎಂಪಿ ರೇಣುಕಾಚಾರ್ಯ ವಾಗ್ದಾಳಿ
ಚುನಾವಣೆ ಪ್ರಯುಕ್ತ ಹೊಸದಾಗಿ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರಿಗೆ ಕಾರ್ಡ್ ನೀಡುವುದನ್ನು ನಿಲ್ಲಿಸಲಾಗಿತ್ತು. ರಾಜ್ಯದಲ್ಲಿ2.95 ಅರ್ಜಿಗಳು ಬಾಕಿಯಿದ್ದು, ಜಿಲ್ಲೆಯಲ್ಲಿ 12 ಸಾವಿರ ಅರ್ಜಿಗಳು ಬಂದಿವೆ. 15 ದಿನದೊಳಗೆ ಪರಿಶೀಲಿಸಿ ಕಾರ್ಡ್ ವಿತರಣೆ ಮಾಡುವಂತೆ ಅಕಾರಿಗಳಿಗೆ ಸೂಚನೆ ನೀಡಲಾಗಿದೆ’ ಎಂದು ತಿಳಿಸಿದರು.