ಬೆಂಗಳೂರು-ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ಸೃಷ್ಟಿಸಿ ದುರ್ಬಳಕೆಗೆ ಯತ್ನಿಸಿದ ಸಂಬಂಧ ನಗರದ ಕೇಂದ್ರ ಸಿಇಎನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆಯಲಾಗಿದ್ದು ಈ ಸಂಬಂಧ ಕೆಲ ದೂರುಗಳು ಬಂದ ಹಿನ್ನೆೆಲೆ ಅ.11ರಂದು ಸಿಇಎನ್ ಪೊಲೀಸ್ ಠಾಣೆ ಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ವಂಚಕರು ಸಾಮಾಜಿಕ ಜಾಲತಾಣಗಳ ತುಷಾರ್ ಗಿರಿನಾಥ್ ಅವರ ಭಾವಚಿತ್ರ, ಹೆಸರು, ಹುದ್ದೆ ಮತ್ತು ಸಂಸ್ಥೆೆಯ ಹೆಸರನ್ನು ದುರುಪಯೋಗಪಡಿಸಿಕೊಂಡು ನಕಲಿ ಫೇಸ್ ಬುಕ್ ಖಾತೆಯನ್ನು ತೆರೆದಿದ್ದರು.
ನಕಲಿ ಫೇಸ್ ಬುಕ್ ಖಾತೆ ಮೂಲಕ ಪಾಲಿಕೆಯ ಅಧಿಕಾರಿ ಹಾಗೂ ನೌಕರರಿಗೆ ಮತ್ತು ಸಾರ್ವಜನಿಕರಿಗೆ ವಂಚಿಸುವ ಸಾಧ್ಯತೆ ಇರುವುದರಿಂದ ಸದರಿ ಫೇಸ್ಬುಕ್ ಖಾತೆಯನ್ನು ಡಿಲೀಟ್ ಮಾಡಿಸಿ, ಫೇಸ್ಬುಕ್ ಖಾತೆಯನ್ನು ತೆರೆದಿರುವ ಅಪರಿಚಿತ ವ್ಯಕ್ತಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೇಖಿಸಲಾಗಿದೆ.