ದಾವಣಗೆರೆ ಉಪ್ಪಿನಕಾಯಿ ಬೇಕು ಎಂದು ಕೇಳುತ್ತಾ ಮನೆಯೊಳಗೆ ನುಗ್ಗಿ ಅತ್ಯಾಚಾರಕ್ಕೆ ಯತ್ನಿಸಿ ಕೆನ್ನೆಯನ್ನು ಕಚ್ಚಿ ಪರಾರಿಯಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಉಪ್ಪಿನ ಕಾಯಿ ಕೇಳುವ ನೆಪದಲ್ಲಿ ಬಂದು ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯ ಗ್ರಾಮಯೊಂದರಲ್ಲಿ ನಡೆದಿದೆ.
ಮಹಿಳೆಯ ಕೆನ್ನೆಗೆ ಕಚ್ಚಿ ಗಾಯಗೊಳಿಸಿ ಪರಾರಿಯಾದ ಆರೋಪಿ ಮಂಜಪ್ಪ ಅಲಿಯಾಸ್ ಮಂಜುನಾಥ್ ಡಿ.ಹೆಚ್. ಎಂದು ಹೇಳಲಾಗುತ್ತಿದೆ. ಡಿಸೆಂಬರ್ 2 ರಂದು ನಡೆದಿದ್ದ ಘಟನೆಯ ಬಗ್ಗೆ ಪೊಲೀಸರಿಗೆ ದೂರು ಕೊಟ್ಟರೂ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಮಹಿಳೆಯರು ಗುಂಪಾಗಿ ಬಂದು ನ್ಯಾಯ ಕೊಡಿಸುವಂತೆ ಆಗ್ರಹಿಸಿದ್ದಾರೆ.
ಮಹಿಳೆ ಮನೆಯಲ್ಲಿ ಒಬ್ಬಳೇ ಇರುವುದನ್ನ ಗಮನಿಸಿ ಅತ್ಯಾಚಾರಕ್ಕೆ ಯತ್ನ ಮಾಡಿದ ಆರೋಪಿಯನ್ನು ಬಂಧಿಸಿ ಆತನಿಗೆ ತಕ್ಕ ಶಿಕ್ಷೆಯನ್ನು ಕೊಡಬೇಕು. ದೂರು ಕೊಟ್ಟು ಹಲವು ದಿನಗಳಾದರೂ ಆತನನ್ನು ಬಂಧಿಸದ ಹಿನ್ನೆಲೆಯಲ್ಲಿ ದಾವಣಗೆರೆ ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದ ಹಲವು ಮಹಿಳೆಯರು ಕೂಡಲೇ ಬಂಧಿಸುವಂತೆ ಆಗ್ರಹಿಸಿದ್ದಾರೆ.