ಶಿವಮೊಗ್ಗ:- ಗಲಾಟೆ ಮಾಡಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಸರ್ಕಾರಿ ವೈದ್ಯೆ, ನರ್ಸ್ ಸ್ಥಿತಿ ಗಂಭೀರ ಆಗಿರುವ ಘಟನೆ ಬಿಆರ್ಪಿ ಸರ್ಕಾರಿ ಆಸ್ಪತ್ರೆಯಲ್ಲಿ ಜರುಗಿದೆ.
ಘಟನೆ ಸಂಬಂಧ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಡಾ.ಹಂಸವೇಣಿ ಮತ್ತು ನರ್ಸ್ ಸುಕನ್ಯಾರಿಂದ ಪರಸ್ಪರ ಟಾರ್ಚರ್ ಆರೋಪ ಕೇಳಿಬಂದಿದೆ.
ಡಾ. ಹಂಸವೇಣಿ ಮತ್ತು ನರ್ಸ್ ಸುಕನ್ಯಾ ಭದ್ರಾವತಿಯ ತಾಲೂಕಿನ ಬಿಆರ್ಪಿ ಸರಕಾರಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇಬ್ಬರು ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ಇಬ್ಬರನ್ನು ಶಿವಮೊಗ್ಗ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.