ಬೆಂಗಳೂರು: ಹಾಲು ತರಲು ಅಂಗಡಿಗೆ ಹೋದ ವೇಳೆ ಮಹಿಳೆಯನ್ನು ವ್ಯಕ್ತಿಯೋರ್ವ ಬಾಯಿ ಮುಚ್ಚಿ ಎಳೆದೊಯ್ಯಲು ಯತ್ನಿಸಿದ್ದಾನೆ. ಇದನ್ನು ನೋಡಿದ ಯುವಕರು ವ್ಯಕ್ತಿಯನ್ನು ಬೆತ್ತಲೆಗೊಳಿಸಿ ಥಳಿಸಿರುವ ಘಟನೆ ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಸಮೀಪದ ಕಲ್ಕೆರೆ ಕಾಲೋನಿ ಬಳಿ ಘಟನೆ ನಡೆದಿದೆ.
ಹಾಲು ಖರೀದಿಸಲು ಮಹಿಳೆ ಅಂಗಡಿಗೆ ಬಂದಿದ್ದರು. ಈ ವೇಳೆ ವ್ಯಕ್ತಿಯೋರ್ವ ಮಹಿಳೆಯ ಬಾಯಿ ಮುಚ್ಚಿ ಎಳೆದೊಯ್ಯಲು ಯತ್ನಿಸಿದ್ದಾನೆ. ಆತಂಕಗೊಂಡ ಮಹಿಳೆ ಸಹಾಯಕ್ಕಾಗಿ ಕಿರುಚಿಕೊಂಡಿದ್ದು ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ.
Eye Twitching: ಎಡಗಣ್ಣು ಪಟಪಟ ಅಂತ ಹೊಡೆದುಕೊಳ್ತಿದ್ರೆ ಹೀಗೆಲ್ಲಾ ಆಗ್ಬೋದಂತೆ!
ಈ ವೇಳೆ ಮಹಿಳೆಯ ನೆರವಿಗೆ ಬಂದ ಗ್ರಾಮದ ಯುವಕರ ಗುಂಪು ಕುಡಿದ ನಶೆಯಲ್ಲಿದ್ದ ಅಪರಿಚಿತ ವ್ಯಕ್ತಿಯನ್ನ ಹಿಡಿದು ಹಲ್ಲೆ ನಡೆಸಿದ್ದಾರೆ. ವ್ಯಕ್ತಿಯನ್ನು ಬೆತ್ತಲೆಗೊಳಿಸಿ ಮರ್ಮಾಂಗಕ್ಕೆ ಒದ್ದಿದ್ದಾರೆ. ಹಲ್ಲೆ ಮಾಡಿ ಆಟೋದಲ್ಲಿ ಕರೆದೊಯ್ಯುವಾಗ ಪೊಲೀಸರು ಬಂದಿದ್ದು ವ್ಯಕ್ತಿಯನ್ನು ಬನ್ನೇರುಘಟ್ಟ ಪೊಲೀಸರ ವಶಕ್ಕೆ ಪಡೆದಿದ್ದಾರೆ. ಗಾಯಾಳು ವ್ಯಕ್ತಿಯನ್ನು ಗೊಟ್ಟಿಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಸದ್ಯ ಚಿಕಿತ್ಸೆ ನೀಡಲಾಗುತ್ತಿದೆ. ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಧಾರವಾಡ ಮೂಲದ ರವಿಕುಮಾರ್ ಹಲ್ಲೆಗೊಳಗಾದ ವ್ಯಕ್ತಿ. ಕಲ್ಕೆರೆ ಹೋಟೆಲ್ ನಲ್ಲಿ ಅಡುಗೆ ಭಟ್ಟನಾಗಿ ಕೆಲಸ ಮಾಡುತ್ತಿದ್ದ ಈತ ಕಳೆದ ರಾತ್ರಿ ಅಂಗಡಿಗೆ ಹಾಲು ತೆಗೆದುಕೊಂಡು ಬರಲು ಹೋಗಿದ್ದ ಮಹಿಳೆಯ ಬಾಯಿ ಮುಚ್ಚಿ ಎಳೆದೊಯ್ಯಲು ಯತ್ನಿಸಿದ್ದ. ಅಲ್ಲಿಯೇ ಇದ್ದ ಗ್ರಾಮದ ಯುವಕರು ಮಹಿಳೆ ನೆರವಿಗೆ ಬಂದಿದ್ದು ಕುಡಿದ ನಶೆಯಲ್ಲಿದ್ದ ರವಿಕುಮಾರನನ್ನು ಹಿಡಿದು ಮನಸೋ ಇಚ್ಚೆ ಹಲ್ಲೆ ಮಾಡಿದ್ದಾರೆ.