2023-24ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಗೆ ರೈತ ಭಾಂದವರು ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿಯ ನಮೂನೆಗಳು ಸಮೀಪದ ರೈತ ಸಂಪರ್ಕ ಕೇಂದ್ರಗಳಲ್ಲಿ ಲಭ್ಯವಿರುತ್ತವೆ. ರೈತರು ಕನಿಷ್ಟ 1 ಎಕರೆ ಜಮೀನನ್ನು ಹೊಂದಿರಬೇಕು. ಸದರಿ ಯೋಜನೆಯು ಒಣ ವಲಯ ಕ್ಷೇತ್ರದ ರೈತರಿಗೆ ಮಾತ್ರ ಸಂಬಂಧಪಟ್ಟಿರುತ್ತದೆ.
ಗುರಿಗಿಂತ ಹೆಚ್ಚು ಅರ್ಜಿಗಳು ಸ್ವೀಕೃತವಾದರೆ ಲಾಟರಿ ಎತ್ತುವ ಮೂಲಕ ಫಲಾನುಭವಿಗಳನ್ನು ಗುರಿಗಳನ್ವಯ ಆಯ್ಕೆಮಾಡಲಾಗುವುದು. ರೈತರು ತಮ್ಮ ಜಮೀನುಗಳಲ್ಲಿ ಕೃಷಿ ಹೊಂಡಗಳನ್ನು ನಿರ್ಮಿಸಿಕೊಂಡು ಮಳೆ ನೀರನ್ನು ಸಂಗ್ರಹಿಸಿ ಬೆಳೆಗಳ ಸಂದಿಗ್ದ ಹಂತದಲ್ಲಿ ರಕ್ಷಣಾತ್ಮಕ ನೀರಾವರಿ ಒದಗಿಸುವುದು ಕೃಷಿ ಭಾಗ್ಯ ಯೋಜನೆಯ ಉದ್ದೇಶವಾಗಿದ್ದು ಎಂದು ಅವರು ತಿಳಿಸಿದ್ದಾರೆ
K – SET Exam: ಜನವರಿ 13ರಂದು ಕೆ-ಸೆಟ್ ಪರೀಕ್ಷೆ: ಪ್ರವೇಶಪತ್ರ ಪಡೆದುಕೊಳ್ಳಲು ಡೌನ್ಲೋಡ್ಗೆ ಸೂಚನೆ
ಕೇತ್ರ ಬದು ನಿರ್ಮಾಣಕ್ಕೆ ಸಾಮಾನ್ಯ ವರ್ಗಕ್ಕೆ ಸೇರಿರುವ ರೈತರಿಗೆ ಶೇಕಡಾ 80% ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ರೈತರಿಗೆ ಶೇಕಡಾ 90 ರಷ್ಟು ಸಹಾಯಧನ ದೊರೆಯುತ್ತೆ. ಕೃಷಿಹೊಂಡ ನಿರ್ಮಾಣಕ್ಕೆ ಸಾಮಾನ್ಯ ವರ್ಗಕ್ಕೆ ಸೇರಿರುವ ರೈತರಿಗೆ ಶೇಕಡಾ 80% ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ರೈತರಿಗೆ ಶೇಕಡಾ 90 ರಷ್ಟು ಸಹಾಯಧನ ಸಿಗಲಿದೆ. ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ ನಿರ್ಮಾಣಕ್ಕೆ ಸಾಮಾನ್ಯ ವರ್ಗಕ್ಕೆ ಸೇರಿರುವ ರೈತರಿಗೆ ಶೇಕಡಾ 40% ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ರೈತರಿಗೆ ಶೇಕಡಾ 50 ರಷ್ಟು ನೆರವು
ಕೃಷಿ ಹೊಂಡದಲ್ಲಿ ನೀರು ಇಂಗದಂತೆ ತಡೆಯಲು ಪಾಲಿಥೀನ್ ಹೊದಿಕೆಗೆ (ಸಾ.ವರ್ಗಕ್ಕೆ ಶೇಕಡಾ 40, ಪ.ಜಾ/ಪ.ಪಂಗಡ ಶೇಕಡಾ 50 ರಷ್ಟು), ಹೊಂಡದಿಂದ ನೀರೆತ್ತಲು ಡಿಸೇಲ್ ಟ್ರೋಲ್ ಅಥವಾ ಸೋಲಾರ್ ಪಂಪ್ ಸೆಟ್ ವಿತರಣೆ ಸಂಬಂಧಿಸಿದಂತೆ (ಸಾ.ವರ್ಗಕ್ಕೆ ಶೇಕಡಾ 50, ಪ.ಜಾ/ಪ.ಪಂಗಡ ಶೇಕಡಾ 90 ರಷ್ಟು) ನೆರವು ನೀಡಲಾಗುತ್ತೆ.
ಯಾವ ದಾಖಲೆಗಳನ್ನು ಒದಗಿಸಬೇಕು..?
ಕೃಷಿ ಭಾಗ್ಯ ಯೋಜನೆಯ ಅಡಿಯಲ್ಲಿ ಬರುವ ಸಹಾಯಧನವನ್ನು ಪಡೆಯಲು ರೈತರು ಕೆಲವೊಂದು ಪ್ರಮುಖ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕಾಗುತ್ತೆ ಅವುಗಳೆಂದರೆ
ಆಧಾರ್ ಕಾರ್ಡ್
ಪ್ಯಾನ್ ಕಾರ್ಡ್
ವೋಟ್ ಐಡಿ
ಸ್ವಂತ ಭೂ ದಾಖಲೆಗಳು
ಜಾತಿ ಪ್ರಮಾಣಪತ್ರ
ಆದಾಯ ಪ್ರಮಾಣ ಪತ್ರ