ಬೆಂಗಳೂರು:- ಸೋಮವಾರದಂದು ಕೆಲ ಮಾರ್ಗದಲ್ಲಿ ನಮ್ಮ ಮೆಟ್ರೋ ಸೇವೆ ರದ್ದು ಮಾಡಲಾಗಿದೆ.
ಎಲ್ಐಸಿ ಹೌಸಿಂಗ್ ಪೈನಾನ್ಸ್ ಲಿಮಿಟೆಡ್ ವಂಚನೆ ಯತ್ನ. ಮ್ಯಾನೇಜರ್ ರಕ್ಷಣೆ, ಆರೋಪಿಗಳ ಬಂಧನ
ಕೆಂಗೇರಿ ಮತ್ತು ಚಲ್ಲಘಟ್ಟ ಮೆಟ್ರೋ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸೇವೆ ಭಾಗಶಃ ರದ್ದಾಗಿದೆ. ಜೂನ್ 17 ಸೋಮವಾರದಂದು ಬೆಳಗ್ಗೆ 5 ರಿಂದ ಮಧ್ಯಾಹ್ನ 1 ಗಂಟೆವರೆಗೂ ಮೆಟ್ರೋ ಸಂಚಾರ ಸ್ಥಗಿತವಾಗಲಿದೆ. ನೇರಳೆ ಮಾರ್ಗದ ಚಲ್ಲಘಟ್ಟ ಮೆಟ್ರೋ ನಿಲ್ದಾಣದಲ್ಲಿ ನಿರ್ವಹಣಾ ಕಾಮಗಾರಿ ನಡೆಯಲಿದ್ದು, ಜೂನ್ 17ರಂದು ಕೆಂಗೇರಿಯಿಂದ ಚಲ್ಲಘಟ್ಟ ಮೆಟ್ರೋ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸೇವೆ ಸ್ಥಗಿತ ಮಾಡಲಾಗುತ್ತಿದೆ
ಬೆಳಗ್ಗೆ 05:00 ರಿಂದ ಮಧ್ಯಾಹ್ನ 01:00 ಗಂಟೆಯವರೆಗೆ ಲಭ್ಯವಿರುವುದಿಲ್ಲ. ಮಧ್ಯಾಹ್ನ 1ಗಂಟೆಯ ಬಳಿಕ ರೈಲು ಸೇವೆ ಚಲ್ಲಘಟ್ಟ ಟು ವೈಟ್ಫೀಲ್ಡ್ ನಡುವೆ ಸಂಪೂರ್ಣ ಸಂಚಾರ ಲಭ್ಯವಿರಲಿದೆ. ಆದಾಗ್ಯೂ, ಹಸಿರು ಮಾರ್ಗದಲ್ಲಿ ಮೆಟ್ರೋ ರೈಲು ಸೇವೆಗಳು ಎಂದಿನಂತೆ ಇರಲಿದೆ