ಬೆಂಗಳೂರು:- ಮೆಟ್ರೋ ಪ್ರಯಾಣಿಕರು ಗಮನಿಸಬೇಕಾದ ಸುದ್ದಿ. ಭಾನುವಾರ ನಮ್ಮ ಮೆಟ್ರೋದ ಎಲ್ಲ ನಿಲ್ದಾಣಗಳಿಂದ ಬೆಳಗ್ಗೆ ಒಂದು ಗಂಟೆ ಮುಂಚಿತವಾಗಿ ರೈಲು ಸೇವೆ ಆರಂಭವಾಗಲಿದೆ ಎಂದು ಬಿಎಂಆರ್ಸಿಎಲ್ ಮಾಧ್ಯಮ ಪ್ರಕಟಣೆ ಹೊರಡಿಸಿದೆ.
Breaking: ಜೂನ್ 26 ರಂದು ಲೋಕಸಭಾ ಸ್ಪೀಕರ್ ಚುನಾವಣೆ..!
ವೈಟ್ಫೀಲ್ಡ್ (ಕಾಡುಗೋಡಿ), ಚಲ್ಲಘಟ್ಟ, ನಾಗಸಂದ್ರ ಮತ್ತು ರೇಷ್ಮೆಸಂಸ್ಥೆ ನಿಲ್ದಾಣಗಳಿಂದ ಮೆಟ್ರೋ ರೈಲು ಸೇವೆಗಳು ಬೆಳಗ್ಗೆ 7 ಗಂಟೆ ಬದಲಾಗಿ 6 ಗಂಟೆಗೆ ಪ್ರಾರಂಭವಾಗಲಿದೆ. ಪ್ರಯಾಣಿಕರು ಮತ್ತು ಪರೀಕ್ಷಾರ್ಥಿಗಳು ಈ ಸೇವೆಯ ಪ್ರಯೋಜನ ಪಡೆದುಕೊಳ್ಳುವಂತೆ ಬಿಎಂಆರ್ಸಿಎಲ್ ಕೋರಿದೆ
ನಮ್ಮ ಮೆಟ್ರೋ ಹಸಿರು ಕಾರಿಡಾರ್ನ ನಾಗಸಂದ್ರ ಹಾಗೂ ಮಾದಾವರದ ನಡುವಿನ 3.7 ಕಿಮೀ ಮಾರ್ಗ ಅಕ್ಷರಶಃ ಪಂಚವಾರ್ಷಿಕ ಯೋಜನೆಯಾಗಿತ್ತು. ಕಳೆದ ಐದು ವರ್ಷಗಳಿಂದ ಆಮೆಗತಿಯಲ್ಲಿ ಸಾಗಿದ್ದ ಕಾಮಗಾರಿ ಅಂತಿಮ ಹಂತ ತಲುಪಿದ್ದು ಜುಲೈ ಅಂತ್ಯದ ವೇಳೆಗೆ ಕಾಮಗಾರಿ ಪೂರ್ಣಗೊಳ್ಳಲಿದೆ. ಮೆಟ್ರೋ (Metro) ಸಂಚಾರ ಆರಂಭವಾಗಲಿದೆ. 298 ಕೋಟಿ ರೂ. ವೆಚ್ಚದ ಈ ಮಾರ್ಗ ಯೋಜನೆ ಪ್ರಕಾರ ಸಾಗಿದ್ದರೆ 2019ರ ಅಗಸ್ಟನಲ್ಲಿಯೇ ಜನಸಂಚಾರಕ್ಕೆ ಲಭ್ಯವಾಗಬೇಕಿತ್ತು
2017ರಲ್ಲಿ ಕಾಮಗಾರಿ ಆರಂಭವಾಗಿತ್ತು. ಅಂದುಕೊಂಡಂತೆ ಎಲ್ಲವೂ ನಡೆದಿದ್ದರೆ 2019ರ ಮಧ್ಯದ ವೇಳೆಗೆ ಕಾಮಗಾರಿ ಪೂರ್ಣಗೊಳ್ಳಬೇಕಿತ್ತು. ಆದರೆ, ಭೂಸ್ವಾದೀನ, ಸ್ಥಳೀಯರ ವಿರೋಧ ಹಾಗೂ ನಂತರ ಕೋವಿಡ್ ಸಮಸ್ಯೆ ಸೇರಿ ಹತ್ತು ಹಲವು ಸವಾಲು, ಸಮಸ್ಯೆಗಳ ಕಾರಣದಿಂದ ಐದು ವರ್ಷ ತಡವಾಗಿ ಈ ಮಾರ್ಗ ಮೆಟ್ರೋ ಸಂಚಾರಕ್ಕೆ ಲಭ್ಯವಾಗುತ್ತಿದೆ.