ಬೆಂಗಳೂರು:- ವಾಹನ ಸವಾರರೇ ನೀವು ಈ ಸುದ್ದಿ ನೋಡಲೇಬೇಕು. ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಕವಾಯತು ಮೈದಾನದಲ್ಲಿ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಬೆಳಗ್ಗೆ 9 ಗಂಟೆಗೆ ಕಬ್ಬನ್ ರಸ್ತೆಯಲ್ಲಿರುವ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಕವಾಯತು ಮೈದಾನದಲ್ಲಿ ವಿಶೇಷ ಕವಾಯತು ನಡೆಯಲಿದೆ. ರಾಜ್ಯಪಾಲರು ಧ್ವಜಾರೋಹಣ ಮಾಡಿ, ಗೌರವ ವಂದನೆ ಸ್ವೀಕರಿಸಲಿದ್ದಾರೆ.
BBK11: ಫಿನಾಲೆಗೂ ಮುನ್ನವೇ ಸ್ಟ್ರಾಂಗ್ ಸ್ಪರ್ಧಿ ಔಟ್: ವೀಕ್ಷಕರ ಲೆಕ್ಕಾಚಾರ ಉಲ್ಟಾಪಲ್ಟಾ!
ಈ ಹಿನ್ನಲೆಯಲ್ಲಿ ಬೆಂಗಳೂರು ನಗರ ಸಂಚಾರ ಪೊಲೀಸರು ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಕವಾಯತು ಮೈದಾನದ ಬಂದೋಬಸ್ತ್ ವ್ಯವಸ್ಥೆಯನ್ನು ಮಾಡಿದ್ದಾರೆ. ಮತ್ತು ಮೈದಾನದ ಸುತ್ತ-ಮುತ್ತಲು ವಾಹನ ಸಂಚಾರ, ಪಾರ್ಕಿಂಗ್ ನಿಷೇಧಿಸಲಾಗಿದೆ. ಈ ಕುರಿತು ಬೆಂಗಳೂರು ಸಂಚಾರಿ ಪೊಲೀಸರು ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.
ಪರ್ಯಾಯ ಮಾರ್ಗ
ಇನ್ಫೆಂಟ್ರಿರಸ್ತೆಯಲ್ಲಿ ಮಣಿಪಾಲ್ ಸೆಂಟರ್ ಕಡೆಗೆ ಸಂಚರಿಸುವ ವಾಹನಗಳು: ನೇರವಾಗಿ ಇನ್ ಫೆಂಟ್ರಿರಸ್ತೆ – ಸಫೀನಾ ಪ್ಲಾಜಾದಲ್ಲಿ ಎಡತಿರುವು ಪಡೆದು ಮೈನ್ಗಾರ್ಡ್ರಸ್ತೆ – ಆಲೀಸ್ ಸರ್ಕಲ್-ಡಿಸ್ಸೆನ್ಸರಿ ರಸ್ತೆ – ಕಾಮರಾಜರಸ್ತೆ ಮತ್ತು ಡಿಕನ್ಸನ್ ರಸ್ತೆ ಜಂಕ್ಷನ್ನಲ್ಲಿ ಬಲಕ್ಕೆ ತಿರುವು ಪಡೆದು ಕಾಮರಾಜ ರಸ್ತೆ – ಕಬ್ಬನ್ರಸ್ತೆ ಮತ್ತು ಕಾಮರಾಜ ರಸ್ತೆ ಜಂಕ್ಷನ್ನಲ್ಲಿ ಎಡಕ್ಕೆ ತಿರುವು ಪಡೆದು ಕಬ್ಬನ್ರಸ್ತೆ ಮುಖಾಂತರ ಮಣಿಪಾಲ್ ಸೆಂಟರ್ ಕಡೆಗೆ ಸಾಗಬೇಕು.
ಕಬ್ಬನ್ ರಸ್ತೆಯಲ್ಲಿ, ಮಣಿಪಾಲ್ ಸೆಂಟರ್ ಜಂಕ್ಷನ್ನಿಂದ ಬಿ.ಆರ್.ವಿ. ಜಂಕ್ಷನ್ಕಡೆಗೆ ಬರುವ ವಾಹನಗಳ ಸಂಚಾರವನ್ನು ಮಣಿಪಾಲ್ ಸೆಂಟರ್ ಬಳಿ ನಿರ್ಬಂಧಿಸಿದ್ದು, ಸದರಿ ವಾಹನಗಳು ವೆಬ್ಸ್ ಜಂಕ್ಷನ್ ಬಳಿ ಬಲ ತಿರುವು ಪಡೆದು ಎಂ.ಜಿ. ರಸ್ತೆಯ ಮೂಲಕ ಮೆಯೋ ಹಾಲ್, ಕಾವೇರಿ ಎಂಪೋರಿಯಂ, ಅನಿಲ್ ಕುಂಬ್ಳೆ ವೃತ್ತದಲ್ಲಿ ಬಲ ತಿರುವು ಪಡೆದು ಮುಂದೆ ಸಾಗಬೇಕು.
ಕಾರ್ ಪಾಸ್ಗಳನ್ನು ಹೊಂದಿರುವ ಎಲ್ಲ ಆಹ್ವಾನಿತರು ಅವರುಗಳ ಪಾಸ್ಗಳಲ್ಲಿ ನಿಗಧಿಪಡಿಸಿದ ಗೇಟ್ಗಳಲ್ಲಿ ಇಳಿದುಕೊಳ್ಳುವುದು ಹಾಗೂ ಪಾಸ್ನಲ್ಲಿ ನಿಗಧಿಪಡಿಸಿರುವ ಸ್ಥಳಗಳಲ್ಲಿ ವಾಹನಗಳನ್ನು ನಿಲುಗಡೆಮಾಡಬೇಕು. ತುರ್ತು ಸೇವಾ ವಾಹನಗಳಾದ ಅಂಬುಲೆನ್ಸ್, ಅಗ್ನಿಶಾಮಕ ದಳದ ವಾಹನಗಳು, ನೀರಿನ ಟ್ಯಾಂಕರ್, ಕೆ.ಎಸ್.ಆರ್.ಪಿ. ಕ್ಯೂ.ಆರ್.ಟಿ, ಬಿ.ಬಿ.ಎಂ.ಪಿ. ಹಾಗೂ ಪಿಡಬ್ಲ್ಯೂಡಿ ವಾಹನಗಳು ಪ್ರವೇಶ ದ್ವಾರ-2 ರ ಮುಖಾಂತರ ಪರೇಡ್ ಮೈದಾನದ ಒಳಗೆ ಪ್ರವೇಶಿಸಿ ನಂತರ ಪೋರ್ಟ್ ವಾಲ್ ಹಿಂಭಾಗದಲ್ಲಿ ವಾಹನಗಳನ್ನು ನಿಲುಗಡೆ ಮಾಡಬೇಕು.