ಬೆಂಗಳೂರು:- ವಾಹನ ಸವಾರರು ನೋಡಲೇಬೇಕಾದ ಸ್ಟೋರಿ. ಬರೋಬ್ಬರಿ 2 ತಿಂಗಳು ಈ ರಸ್ತೆಗಳು ಬಂದ್ ಆಗಲಿದ್ದು, ಈ ರಸ್ತೆ ಬಳಸೋ ಮುನ್ನ ಪರ್ಯಾಯ ಮಾರ್ಗದ ಬಗ್ಗೆ ತಿಳಿಯಿರಿ.
ಮದುವೆ ಆಗುವಂತೆ ಪೀಡಿಸುತ್ತಿದ್ದ ಮಾವ: ವಲ್ಲೆ ಎಂದ ಅಪ್ರಾಪ್ತೆ ದುರಂತ ಸಾವು!
ವೈಟ್ ಟಾಪಿಂಗ್ ಕಾಮಗಾರಿ ಕೈಗೊಳ್ಳುವ ಹಿನ್ನಲೆಯಲ್ಲಿ ಬೆಂಗಳೂರಿನ ಈ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ದೇವರಬೀಸನಹಳ್ಳಿ ಸಕ್ತಾ ಆಸ್ಪತ್ರೆ ಮುಖ್ಯರಸ್ತೆಯಲ್ಲಿ ವಾಹನ ಸಂಚಾರ 60 ದಿನಗಳ ಕಾಲ ನಿರ್ಬಂಧಿಸಲಾಗಿದೆ. ಬೆಂಗಳೂರು ಸಂಚಾರಿ ಪೊಲೀಸ್ ಸಾಮಾಜಿಕ ಮಾಧ್ಯಮ ಎಕ್ಸ್ ಮುಖಾಂತರ ಮಾಹಿತಿ ನೀಡಿದೆ.
ದೇವರಬೀಸನಹಳ್ಳಿ ಸಕ್ತಾ ಆಸ್ಪತ್ರೆ ಮುಖ್ಯರಸ್ತೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ.
ಪರ್ಯಾಯ ಮಾರ್ಗ:
ಯಮಲೂರು ಕಡೆಯಿಂದ ದೇವರಬೀಸನಹಳ್ಳಿ ಮತ್ತು ಬೆಳ್ಳಂದೂರು ಕಡೆಗೆ ಸಂಚರಿಸುವವರು ಹಳೆ ವಿಮಾನ ನಿಲ್ದಾಣ ರಸ್ತೆ – ಯಮಲೂರು ಜಂಕ್ಷನ್ – ಮಾರತ್ತಹಳ್ಳಿ ಬ್ರಿಡ್ಜ್ – ಕಾಡುಬೀಸನಹಳ್ಳಿ ಬ್ರಿಡ್ಜ್ – ಹೊರವರ್ತುಲ ರಸ್ತೆ ಮಾರ್ಗವಾಗಿ ದೇವರಬೀಸನಹಳ್ಳಿ ಮತ್ತು ಬೆಳ್ಳಂದೂರು ಕಡೆಗೆ ಸಂಚರಿಸಬಹುದಾಗಿದೆ.
ಯಮಲೂರು ಕಡೆಯಿಂದ ಕಾಡುಬೀಸನಹಳ್ಳಿ ಮತ್ತು ದೇವರಬೀಸನಹಳ್ಳಿ ಕಡೆಗೆ ಸಂಚರಿಸುವವರು ಹಳೆ ವಿಮಾನ ನಿಲ್ದಾಣ ರಸ್ತೆ ಮಾರ್ಗವಾಗಿ ಯಮಲೂರು ಜಂಕ್ಷನ್ – ಯಮಲೂರು ವಿಲೇಜ್ ಮಾರ್ಗವಾಗಿ ಯಮಲೂರು ಕೋಡಿಯಲ್ಲಿ ಎಡ ತಿರುವು ಪಡೆದು ಕರಿಯಮ್ಮನ ಅಗ್ರಹಾರ ಮೂಲಕ ಕಾಡುಬೀಸನಹಳ್ಳಿ ಮತ್ತು ದೇವರಬೀಸನಹಳ್ಳಿ ಕಡೆಗೆ ಸಂಚರಿಸಬಹುದಾಗಿದೆ.
ಯಮಲೂರು ಕಡೆಯಿಂದ ಹೊರವರ್ತುಲ ರಸ್ತೆ ಕಡೆಗೆ ಸಂಚರಿಸುವವರು ಹಳೆ ವಿಮಾನ ನಿಲ್ದಾಣ ರಸ್ತೆ – ಯಮಲೂರು ಜಂಕ್ಷನ್ – ಯಮಲೂರು ವಿಲೇಜ್ ಮೂಲಕ ಯಮಲೂರು ಕೋಡಿ – ಬೆಳ್ಳಂದೂರು ಕೋಡಿ ಬಲ ತಿರುವು ಪಡೆದು ಬೆಳ್ಳಂದೂರು ವಿಲೇಜ್ ಮಾರ್ಗವಾಗಿ ಹೊರವರ್ತುಲ ರಸ್ತೆ ಕಡೆಗೆ ಸಂಚರಿಸಬಹುದಾಗಿದೆ.
ದೇವರಬೀಸನಹಳ್ಳಿ ಮತ್ತು ಬೆಳ್ಳಂದೂರು ಕಡೆಯಿಂದ ನಗರದ ಕಡೆಗೆ ಸಂಚರಿಸುವವರು ಹೊರವರ್ತುಲ ರಸ್ತೆ ಕಾಡುಬೀಸನಹಳ್ಳಿ ಬ್ರಿಡ್ಜ್ ಮಾರತ್ತಹಳ್ಳಿ ಬ್ರಿಡ್ಜ್ ಮೇಲೆ ಎಡ ತಿರುವು ಪಡೆದು ಯಮಲೂರು ಜಂಕ್ಷನ್ ಹಳೆ ವಿಮಾನ ನಿಲ್ದಾಣ ರಸ್ತೆ ಮೂಲಕ ನಗರದ ಕಡೆಗೆ ಸಂಚರಿಸಬಹುದಾಗಿದೆ.