ಬೆಂಗಳೂರು:– ಮೈಸೂರು ರಸ್ತೆಯಲ್ಲಿ ಸವಾರರಿಗೆ ಮಾರ್ಗ ಬದಲಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಗಾಳಿ ಆಂಜನೇಯ ಸ್ವಾಮಿ ರಥೋತ್ಸವಕ್ಕೆ ಸಾವಿರಾರು ಭಕ್ತರು ಸೇರುವ ಹಿನ್ನೆಲೆ ಮುಂಜಾಗ್ರತ ಕ್ರಮಕೈಗೊಳ್ಳಲಾಗಿದೆ. ಕೆಂಗೇರಿ ಕಡೆಯಿಂದ ಮೈಸೂರು ರಸ್ತೆ ಮುಖಾಂತರ ಮಜೆಸ್ಟಿಕ್ ಮತ್ತು ಸಿಟಿ ಮಾರ್ಕೆಟ್ ಕಡೆಗೆ ಸಾಗುವ ಎಲ್ಲಾ ಮಾದರಿಯ ವಾಹನಗಳಿಗೆ ಎಂದಿನಂತೆ ಮೈಸೂರು ಮುಖ್ಯರಸ್ತೆಯಲ್ಲಿ ಚಲಿಸಲು ಅನುಮತಿಸಲಾಗಿದೆ
Rama Navami 2024: ರಾಮ ನವಮಿ ಯಾವಾಗ.? ಪೂಜಾ ವಿಧಿ ವಿಧಾನ, ಮಹತ್ವ ತಿಳಿಯಿರಿ
ಸಂಚಾರ ನಿಷೇಧ:
ಮೆಜೆಸ್ಟಿಕ್ ಮತ್ತು ಸಿಟಿ ಮಾರ್ಕೆಟ್ ಕಡೆಯಿಂದ ಮೈಸೂರು ರಸ್ತೆ ಮುಖಾಂತರ ಮೈಸೂರು ಕಡೆಗೆ ಹೋಗುವ ಎಲ್ಲಾ ಮಾದರಿಯ ವಾಹನಗಳನ್ನು ಹೊಸಗುಡ್ಡದಹಳ್ಳಿ ಜಂಕ್ಷನ್ ನಿಂದ ಕಿಂಕೋ ಜಂಕ್ಷನ್ ವರೆಗೆ ತಾತ್ಕಾಲಿಕವಾಗಿ ನಿರ್ಬಂಧಿಸಲಾಗುತ್ತದೆ
ಪರ್ಯಾಯ ಮಾರ್ಗಗಳು
ಮೆಜೆಸ್ಟಿಕ್ ಮತ್ತು ಸಿಟಿ ಮಾರ್ಕೆಟ್ ಕಡೆಯಿಂದ ಮೈಸೂರು ಮುಖ್ಯರಸ್ತೆ ಮುಖಾಂತರ ಮೈಸೂರು ಕಡೆಗೆ ಹೋಗುವ ಎಲ್ಲಾ ಮಾದರಿಯ ವಾಹನಗಳು ಹೊಸಗುಡ್ಡದಹಳ್ಳಿ ಜಂಕ್ಷನ್ನಲ್ಲಿ ಎಡತಿರುವು ಪಡೆದು, ಅವಲಹಳ್ಳಿ ಮುಖ್ಯ ರಸ್ತೆ ಮೂಲಕ, ಬೆಂಗಳೂರು ಒನ್ ಜಂಕ್ಷನ್ ಬಳಿ ಎಡ ತಿರುವು ಪಡೆದು ಕೆ.ಇ.ಬಿ ಜಂಕ್ಷನ್ ಬಳಿ ಬಲ ತಿರುವು ಪಡೆದು ಪಿ.ಇ.ಎಸ್.ಐ.ಟಿ. ಕಾಲೇಜು ದೇವೆಗೌಡ ಸರ್ಕಲ್ ಮುಖಾಂತರ ನಾಯಂಡಹಳ್ಳಿ ಹತ್ತಿರ ಎಡತಿರುವು ಪಡೆದು ಮೈಸೂರು ರಸ್ತೆ ತಲುಪುವುದು.
ಏ. 18 ರ ಬೆಳಿಗ್ಗೆ 6 ಗಂಟೆಯಿಂದ ದಿ 19ರ ಬೆಳಿಗ್ಗೆ 10 ಗಂಟೆವರೆಗೆ
ಸಂಚಾರ ನಿಷೇಧ
ಕೆಂಗೇರಿ ಕಡೆಯಿಂದ ಮೈಸೂರು ರಸ್ತೆ ಮುಖಾಂತರ ನಗರಕ್ಕೆ ಪ್ರವೇಶಿಸುವ ಎಲ್ಲಾ ಮಾದರಿಯ ವಾಹನಗಳನ್ನು ಕಿಂಕೋ ಜಂಕ್ಷನ್ನಿಂದ ಹೊಸಗುಡ್ಡದಹಳ್ಳಿ ಜಂಕ್ಷನ್ವರೆಗೆ ರಸ್ತೆಯ ಎರಡೂ ಕಡೆ ತಾತ್ಕಾಲಿಕವಾಗಿ ನಿರ್ಬಂಧಿಸಲಾಗುತ್ತದೆ.
ಮೆಜೆಸ್ಟಿಕ್ ಮತ್ತು ಸಿಟಿ ಮಾರ್ಕೆಟ್ ಕಡೆಯಿಂದ ಮೈಸೂರು ರಸ್ತೆ ಮುಖಾಂತರ ಕೆಂಗೇರಿ ಮತ್ತು ಮೈಸೂರು ಕಡೆಗೆ ಹೋಗುವ ಎಲ್ಲಾ ಮಾದರಿಯ ವಾಹನಗಳನ್ನು ಹೊಸಗುಡ್ಡದಹಳ್ಳಿ ಜಂಕ್ಷನ್ ನಿಂದ ಕಿಂಕೋ ಜಂಕ್ಷನ್ ವರೆಗೆ ತಾತ್ಕಾಲಿಕವಾಗಿ ನಿರ್ಬಂಧಿಸಲಾಗುತ್ತದೆ.
ಕೆಂಗೇರಿ ಕಡೆಯಿಂದ ಮೈಸೂರು ರಸ್ತೆ ಮುಖಾಂತರ ನಗರ ಪ್ರವೇಶಿಸುವ ಎಲ್ಲಾ ಮಾದರಿಯ ವಾಹನಗಳು ನಾಯಂಡಹಳ್ಳಿ ಜಂಕ್ಷನ್ ನಲ್ಲಿ ಎಡ ತಿರುವು ಪಡೆದು, ನಾಗರಭಾವಿ ಜಂಕ್ಷನ್ ಹತ್ತಿರ ಬಲತಿರುವು ಪಡೆದು ಚಂದ್ರಾಲೇಔಟ್ 80 ಅಡಿ ರಸ್ತೆಯಲ್ಲಿ ಚಲಿಸಿ ವೆಸ್ಟ್ ಆಫ್ ಕಾರ್ಡ್ ರಸ್ತೆಯ ಮುಖಾಂತರ ಮುಂದೆ ಸಾಗಿ ಎಂ.ಸಿ. ಸರ್ಕಲ್ ಬಳಿ ಬಲತಿರುವು ಪಡೆದು ಮಾಗಡಿ ರಸ್ತೆ ಮುಖಾಂತರ ಸಾಗಬಹುದಾಗಿದೆ.