ಬೆಂಗಳೂರು:- ಚೀನಾದಲ್ಲಿ ಆತಂಕಕ್ಕೆ ಕಾರಣವಾಗಿದೆ ಎನ್ನಲಾಗಿರುವ ಹ್ಯೂಮನ್ ಮೆಟಾಪ್ನ್ಯೂಮೋ ವೈರಸ್ ಬೆಂಗಳೂರಿಗೆ ಕಾಲಿಟ್ಟಿದೆ.
ವಾಲ್ಮೀಕಿ ಸಮಾಜದ ಅಭಿವೃದ್ಧಿಗೆ ಮೀಸಲಾತಿ ಕಲ್ಪಿಸಿ: ಶ್ರೀ ಪ್ರಸನ್ನಾನಂದ ಸ್ವಾಮಿಜಿ!
ಬೆಂಗಳೂರಿನಲ್ಲಿ 8 ತಿಂಗಳ ಮಗುವಿನಲ್ಲಿ ಎಚ್ಎಂಪಿವಿ ವೈರಸ್ ದೃಢಪಟ್ಟಿದೆ. ಮಗುವಿಗೆ ಜ್ವರ ಬಂದ ಕಾರಣ ನಗರದ ಖಾಸಗಿ ಆಸ್ಪತ್ರೆಯಲ್ಲಿ ಅಡ್ಮಿಟ್ ಮಾಡಲಾಗಿತ್ತು. ರಕ್ತ ಪರೀಕ್ಷೆ ಮಾಡಿಸಿದಾಗ HMPV ವೈರಸ್ ಇರುವುದು ಪತ್ತೆಯಾಗಿದೆ. ಆದರೆ, ಈ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ಕೊಟ್ಟಿದ್ದಾರೆ.
ಎಚ್ಎಂಪಿವಿ ವೈರಸ್ ಭಾರತದಲ್ಲೂ ಇದೆ. ಆದರೆ, ಅದು ಮ್ಯೂಟೆಷನ್ ಆಗಿದೆಯಾ ಎಂಬ ಬಗ್ಗೆ ಇನ್ನೂ ಸ್ಪಷ್ಟನೆ ಇಲ್ಲ. ನಮಗೆ ಚೀನಾದಲ್ಲಿ ಮ್ಯುಟೇಟ್ ಆಗಿರುವ ವೈರಸ್ ಹೇಗಿದೆ ಎಂದು ತಿಳಿದಿಲ್ಲ. ಹೀಗಾಗಿ ಇಲ್ಲಿ ಪತ್ತೆಯಾಗಿರುವುದು ಸಾಮಾನ್ಯ HMPV ವೈರಸ್ಸೇ ಅಥವಾ ಚೀನಾದ ತಳಿಯಾ ಎಂಬ ಗೊಂದಲ ಇದೆ. ಭಾರತದಲ್ಲೂ ಸಾಮಾನ್ಯ HMPV ವೈರಸ್ ಶೇ 0.78 ರಷ್ಟು ಕಾಣಿಸುತ್ತದೆ ಎಂದು ಅವರು ತಿಳಿಸಿದ್ದಾರೆ.
ಈ ಬಗ್ಗೆ ಬಗ್ಗೆ ಆರೋಗ್ಯ ಇಲಾಖೆ ಕೂಡಾ ಪರಿಶೀಲನೆ ನಡೆಸುತ್ತಿದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಹರ್ಷಗುಪ್ತ ತಿಳಿಸಿದ್ದಾರೆ.