ಬೆಂಗಳೂರು:- ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್ಎಸ್ಎಲ್ಸಿ ಟೈಮ್ ಟೇಬಲ್ ಸಹ ಬಿಡುಗಡೆ ಮಾಡಿದೆ. ಮಾರ್ಚ್ 25ರಿಂದ ಏಪ್ರಿಲ್ 3ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯಲಿವೆ. ಇನ್ನು ಪರೀಕ್ಷೆಗಳು ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ನಡೆಯಲಿವೆ.
ಪರೀಕ್ಷಾ ವೇಳಾಪಟ್ಟಿ ಹೀಗಿದೆ
ಮಾರ್ಚ್ 25ರ ಸೋಮವಾರ ಪ್ರಥಮ ಭಾಷೆ ಪರೀಕ್ಷೆ( ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್(NCERT).
ಮಾರ್ಚ್ 27ರಂದು ಸಮಾಜ ವಿಜ್ಞಾನ .
ಮಾರ್ಚ್ 30ರಂದು ವಿಜ್ಞಾನ, ರಾಜ್ಯಶಾಸ್ತ್ರ.
ಏಪ್ರಿಲ್ 3ರಂದು ಅರ್ಥಶಾಸ್ತ್ರ ಪರೀಕ್ಷೆ
ಈ ವರ್ಷ ಎಸ್ಎಸ್ಎಲ್ಸಿ ಪರೀಕ್ಷೆ ಓದುತ್ತಿರುವವರು ಹಾಗೂ ಖಾಸಗಿ ವಿದ್ಯಾರ್ಥಿಗಳು 2023-24ನೇ ಸಾಲಿನ ವಾರ್ಷಿಕ ಪರೀಕ್ಷೆಯನ್ನು ಮೂರು ಬಾರಿ ಬರೆಯಬಹುದು. ಈ ಹಿಂದೆ ಒಂದು ಬಾರಿ ವಾರ್ಷಿಕ ಪರೀಕ್ಷೆ ಬರೆದು, ಅನುತ್ತೀರ್ಣರಾದವರು ಪೂರಕ ಪರೀಕ್ಷೆ ಬರೆಯಬೇಕಿತ್ತು. ಆದರೆ ಈ ಬಾರಿ ವಿದ್ಯಾರ್ಥಿಗಳು ತಾವು ಪಾಸಾಗಲಿ, ಫೇಲಾಗಲಿ ಮೂರು ಬಾರಿ ಪರೀಕ್ಷೆ ಬರೆಯಬಹುದು. ಮೂರರಲ್ಲಿ ಅತಿಹೆಚ್ಚು ಅಂಕಗಳನ್ನು ಪಡೆದ ಪರೀಕ್ಷೆಯನ್ನು ಮುಂದಿನ ಅನುಕೂಲಗಳಿಗಾಗಿ ಆಯ್ಕೆ ಮಾಡುವ ಅವಕಾಶ ನೀಡಲಾಗಿದೆ.