2023ರ ವಿಶ್ವಕಪ್ನ ಫೈನಲ್ ಪಂದ್ಯ ಇಂದು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಎರಡು ಬಾರಿಯ ಚಾಂಪಿಯನ್ ಭಾರತ, ಐದು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾವನ್ನು ಎದುರಿಸುತ್ತಿದೆ.
ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಅದ್ಭುತ ಪ್ರದರ್ಶನ ನೀಡಿ ಎಲ್ಲಾ 10 ಪಂದ್ಯಗಳನ್ನು ಗೆಲ್ಲುವ ಮೂಲಕ ಫೈನಲ್ಗೆ ಲಗ್ಗೆ ಇಟ್ಟಿದ್ದರೆ, ಭಾರತ ಸೇರಿದಂತೆ ಮೊದಲ 2 ಪಂದ್ಯಗಳನ್ನು ಸೋತ ಆಸ್ಟ್ರೇಲಿಯಾ, ಸತತ 8 ಪಂದ್ಯಗಳನ್ನು ಗೆದ್ದು ಫೈನಲ್ ಪ್ರವೇಶಿದೆ. ಇನ್ನು ಈ ಪಂದ್ಯದ ಟಾಸ್ ಕೂಡ ಮುಗಿದಿದ್ದು, ಟಾಸ್ ಗೆದ್ದ ಆಸೀಸ್ ನಾಯಕ ಪ್ಯಾಟ್ ಕಮ್ಮಿನ್ಸ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ


