ಕಿಂಗ್ ಕೊಹ್ಲಿ ವಿಶ್ವ ದಾಖಲೆಯನ್ನು ಡೇವಿಡ್ ವಾರ್ನರ್ ಸರಿಗಟ್ಟಿದ್ಜಾರೆ.
ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಡೇವಿಡ್ ವಾರ್ನರ್ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ಹೆಸರಿನಲ್ಲಿರುವ ವಿಶೇಷ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.
![Demo](https://ainlivenews.com/wp-content/uploads/2023/12/spoorthi-1.jpg)
ಅಂದರೆ ಈ ಪಂದ್ಯದ ಮೂಲಕ ಡೇವಿಡ್ ವಾರ್ನರ್ ಟಿ20 ಕ್ರಿಕೆಟ್ನಲ್ಲಿ 100 ಪಂದ್ಯಗಳನ್ನು ಪೂರೈಸಿದ್ದಾರೆ. ಇದರೊಂದಿಗೆ ಮೂರು ಸ್ವರೂಪಗಳಲ್ಲೂ 100 ಪಂದ್ಯಗಳನ್ನಾಡಿರುವ ವಿಶ್ವದ ಮೂರನೇ ಆಟಗಾರ ಎನಿಸಿಕೊಂಡಿದ್ದಾರೆ.
ಇದಕ್ಕೂ ಮುನ್ನ ವಿರಾಟ್ ಕೊಹ್ಲಿ ಮತ್ತು ನ್ಯೂಝಿಲೆಂಡ್ನ ರಾಸ್ ಟೇಲರ್ ಮಾತ್ರ ಈ ಸಾಧನೆ ಮಾಡಿದ್ದರು. ಇದೀಗ ಈ ಪಟ್ಟಿಗೆ ಮೂರನೇ ಆಟಗಾರನಾಗಿ ಡೇವಿಡ್ ವಾರ್ನರ್ ಎಂಟ್ರಿ ಕೊಟ್ಟಿದ್ದಾರೆ. ಅಲ್ಲದೆ ಆಸ್ಟ್ರೇಲಿಯಾ ಪರ ಈ ಸಾಧನೆ ಮಾಡಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೂ ವಾರ್ನರ್ ಪಾತ್ರರಾಗಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)