ಆಸ್ಟ್ರೇಲಿಯಾದ ದಂತಕಥೆಯಾಗಿರುವ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ 2025 ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾಗವಹಿಸುವುದಿಲ್ಲ. ಈ ಸುದ್ದಿಯನ್ನು ಕ್ರಿಕೆಟ್ ಆಸ್ಟ್ರೇಲಿಯಾ ಇಂದು ಬೆಳಿಗ್ಗೆ ದೃಢಪಡಿಸಿದೆ.
35 ವರ್ಷದ ಎಡಗೈ ವೇಗಿ, ಕಳೆದ ವಾರ ತಂಡದಿಂದ ಹೊರಗುಳಿದಿದ್ದ ಪ್ಯಾಟ್ ಕಮ್ಮಿನ್ಸ್ ಮತ್ತು ಜೋಶ್ ಹ್ಯಾಜಲ್ವುಡ್ ಅನುಪಸ್ಥಿತಿಯಲ್ಲಿ ಪಾಕಿಸ್ತಾನದಲ್ಲಿ 2006 ಮತ್ತು 2009 ರ ಚಾಂಪಿಯನ್ಸ್ ಟ್ರೋಫಿ ವಿಜೇತರ ಬೌಲಿಂಗ್ ದಾಳಿಯನ್ನು ಮುನ್ನಡೆಸುವ ನಿರೀಕ್ಷೆಯಿತ್ತು, ಆದರೆ ಈಗ ಅವರು ಕೂಡ ಅವರೊಂದಿಗೆ ಸೇರಿಕೊಂಡಿದ್ದಾರೆ.
10th, PUC ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ..! ಇಂದೇ ಅಪ್ಲೈ ಮಾಡಿ
2025ರ ಚಾಂಪಿಯನ್ಸ್ ಟ್ರೋಫಿಟೂರ್ನಿಗೆ 7 ದಿನಗಳು ಬಾಕಿಯಿದೆ. ಈಗಾಗಲೇ ನಾಯಕ ಪ್ಯಾಟ್ ಕಮ್ಮಿನ್ಸ್, ವೇಗಿ ಜೋಶ್ ಹ್ಯಾಜಲ್ವುಡ್, ಮಿಚೆಲ್ ಮಾರ್ಷ್ ಗಾಯದ ಸಮಸ್ಯೆಯಿಂದ ಹೊರಗುಳಿದಿದ್ದಾರೆ. ಅಲ್ಲದೇ ಏಕದಿನ ಕ್ರಿಕೆಟ್ಗೆ ಮಾರ್ಕಸ್ ಸ್ಟೋಯ್ನಿಸ್ ಏಕದಿನ ಕ್ರಿಕೆಟ್ಗೆ ಗುಡ್ಬೈ ಹೇಳಿದ್ದಾರೆ. ಈ ಬೆನ್ನಲ್ಲೇ ಮಿಚೆಲ್ ಸ್ಟಾರ್ಕ್ ವೈಯಕ್ತಿಕ ಕಾರಣಗಳಿಂದ ಹೊರಗುಳಿದಿದ್ದಾರೆ. ಇದು ಅಸ್ಟ್ರೇಲಿಯಾ ತಂಡಕ್ಕೆ ನುಂಗಲಾರದ ತುತ್ತಾಗಿದೆ.
ಪ್ಯಾಟ್ ಕಮ್ಮಿನ್ಸ್ ಹೊರಬಿದ್ದ ಬೆನ್ನಲ್ಲೇ ಸ್ಟೀವ್ ಸ್ಮಿತ್ಗೆ ಚಾಂಪಿಯನ್ಸ್ ಟ್ರೋಫಿ ನಾಯಕತ್ವ ನೀಡಲಾಗಿದೆ. ಆದ್ರೆ ಮೂವರು ಸ್ಟಾರ್ ಬೌಲರ್ (ಸ್ಟಾರ್ಕ್, ಕಮ್ಮಿನ್ಸ್, ಹ್ಯಾಜಲ್ವುಡ್), ಆಲ್ರೌಂಡರ್ ಸ್ಟೋಯ್ನಿಸ್ ಹೊರಗುಳಿದಿರುವುದು ಆಸೀಸ್ಗೆ ಆಘಾತವಾಗಿದೆ. ಈ ಐವರಿ ಬದಲೀ ಆಟಗಾರರಾಗಿ ಯಾರನ್ನ ಆಯ್ಕೆ ಮಾಡಬೇಕೆಂಬುದು ಚಿಂತೆಯಾಗಿದೆ.