Author: Author AIN

ಲೆಬನಾನ್‌ನಲ್ಲಿ ನಡೆದ ಭೀಕರ ಪೇಜರ್ ಸ್ಫೋಟಗಳಲ್ಲಿ ಲೆಬನಾನ್ ಸಶಸ್ತ್ರ ಉಗ್ರಗಾಮಿ ಸಂಘಟನೆ ಹಿಜ್ಬುಲ್ಲಾ ಸೇರಿದಂತೆ 9 ಮಂದಿ ಸಾವನ್ನಪ್ಪಿ ಸುಮಾರು 3,000 ಮಂದಿ ಗಾಯಗೊಂಡಿದ್ದಾರೆ. ಇರಾನ್ ಈ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದು, ಇಸ್ರೇಲ್ ಲೆಬನಾನ್‌ನಲ್ಲಿ ಸಾಮೂಹಿಕ ಹತ್ಯೆ ಮಾಡಿದೆ ಎಂದು ಆರೋಪಿಸಿದೆ. ಘಟನೆಯನ್ನು ಲೆಬನಾನ್‌ನಲ್ಲಿ ನಡೆದ ಭಯೋತ್ಪಾದಕ ಕಾರ್ಯಾಚರಣೆ ಎಂದು ಇರಾನ್‌ನ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ನಾಸರ್ ಕನಾನಿ ಹೇಳಿದ್ದಾರೆ. “ಈ ಭಯೋತ್ಪಾದಕ ಕೃತ್ಯವು ವಾಸ್ತವವಾಗಿ ಸಾಮೂಹಿಕ ಹತ್ಯೆಯ ಒಂದು ರೂಪವಾಗಿದೆ. ಝಿಯೋನಿಸ್ಟ್ ಆಡಳಿತವು ಪ್ಯಾಲೇಸ್ತೀನಿಯನ್ ಜನರ ವಿರುದ್ಧ ಯುದ್ಧ ಅಪರಾಧಗಳು ಮತ್ತು ನರಮೇಧವನ್ನು ಮಾಡುವುದರ ಜೊತೆಗೆ ಪ್ರಾದೇಶಿಕ ಮತ್ತು ಅಂತಾರಾಷ್ಟ್ರೀಯ ಶಾಂತಿ ಮತ್ತು ಭದ್ರತೆಯ ಅಪಾಯವನ್ನು ಗಂಭೀರ ಸ್ಥಿತಿಯಲ್ಲಿ ಇರಿಸಿದೆ ಎಂದು ಮತ್ತೊಮ್ಮೆ ಸ್ಪಷ್ಟವಾಗಿ ಸಾಬೀತುಪಡಿಸುತ್ತದೆ ಎಂದು ಹೇಳಿದೆ. ಮಂಗಳವಾರ ಲೆಬನಾನ್‌ನಾದ್ಯಂತ ಸಾವಿರಾರು ಪೇಜರ್‌ಗಳು ಏಕಕಾಲದಲ್ಲಿ ಸ್ಫೋಟಗೊಂಡವು. ಇದರಿಂದ 9 ಜನ ಸಾವನ್ನಪ್ಪಿದರು. ಹೋರಾಟಗಾರರು ಮತ್ತು ವೈದ್ಯರು ಸೇರಿದಂತೆ ಇರಾನ್ ಬೆಂಬಲಿತ ಸಶಸ್ತ್ರ ಗುಂಪಿನ ಹಿಜ್ಬುಲ್ಲಾದ ಸುಮಾರು 3,000…

Read More

ಕೆಲವೊಂದು ತಾಂತ್ರಿಕ ದೋಷದ ಕಾರಣದಿಂದಾಗಿ ನಾಸಾ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅಂತಾರಾಷ್ಟ್ರೀಯ ಬಾಹ್ಯಾಕಾಶದಲ್ಲಿಯೇ ಉಳಿದಿದ್ದಾರೆ.ಇದೀಗ ಸುನೀತಾ ವಿಲಿಯಮ್ಸ್ ಮುಂದಿನ 2024ರ ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದಲೇ ಮತ ಚಲಾಯಿಸುವ ಇಚ್ಛೆ ವ್ಯಕ್ತಪಡಿಸಿದ್ದಾರೆ. ಸುನೀತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್  2025ರ ಫೆಬ್ರವರಿ ತಿಂಗಳವರೆಗೆ ಬಾಹ್ಯಾಕಾಶದಲ್ಲಿಯೇ ಉಳಿಯಬೇಕಾದ ಪರಿಸ್ಥಿತಿ ಇದೆ. ಹೀಗಾಗಿ ಮುಂದಿನ ತಿಂಗಳು ನಡೆಯಲಿರುವ ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಅಲ್ಲಿಂದಲೇ ಮತ ಚಲಾಯಿಸಲು ಮುಂದಾಗಿದ್ದಾರೆ. ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರು ಜೂನ್‌ ತಿಂಗಳಿನಿಂದ ಇಬ್ಬರು ಗಗನಯಾತ್ರಿಗಳು ಇರುವ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಭೂಮಿಯಿಂದ 250 ಮೈಲುಗಳ ದೂರದಲ್ಲಿ ಅಂತರಿಕ್ಷದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ವಿಡಿಯೊಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸ್ಟಾರ್‌ಲೈನರ್ ಭೂಮಿಗೆ ಮರಳಿದ ಒಂದು ವಾರದ ನಂತರ ಸುದ್ದಿಗೋಷ್ಠಿ ನಡೆಸಿದ್ದಾರೆ. ಇವರಿಬ್ಬರೂ ಜೂನ್ 5 ರಂದು ಬೋಯಿಂಗ್‌ನ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆಯಲ್ಲಿ ತನ್ನ ಮೊದಲ ಸಿಬ್ಬಂದಿ ಹಾರಾಟಕ್ಕಾಗಿ ಉಡಾವಣೆ ಮಾಡಿತು,…

Read More

ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಸದ್ಯ ಹಾಲಿವುಡ್ ನಲ್ಲಿ  ಸೆಟಲ್ ಆಗಿದ್ದಾರೆ. ಪತಿ ನಿಕ್ ಜೋನಾಸ್ ಹಾಗೂ ಮಗಳೂ ಮಾಲ್ತಿ ಜೊತೆ ವಿದೇಶದಲ್ಲಿ ಸೆಟಲ್ ಆಗಿರುವ ಪಿಗ್ಗಿ ಇತ್ತೀಚೆಗೆ ನಿಕ್ ಅವರ ಬರ್ತಡೇ ಸೆಲೆಬ್ರೇಟ್ ಮಾಡಿದ್ದಾರೆ. ನಿಕ್ ಅವರ ಸಂಗೀತ ಕಾರ್ಯಕ್ರಮದಲ್ಲಿ ಮಗಳ ಜೊತೆ ಸೇರಿಕೊಂಡು ಪ್ರಿಯಾಂಕ ಪತಿಯ ಬರ್ತಡೇ ಸೆಲೆಬ್ರೇಟ್ ಮಾಡಿದ್ದಾರೆ. ಅಪ್ಪನ ಹುಟ್ಟುಹಬ್ಬಕ್ಕೆ ಮಗಳು ಕೂಡ ಕೈಗೆ ಮೈಕ್ ಹಿಡಿದುಕೊಂಡು ಹಾಡಿದ್ದಾಳೆ. ಅಪ್ಪನ ಸಂಗೀತ ಕಾರ್ಯಕ್ರಮದಲ್ಲಿ ಮಗಳು ಅಷ್ಟೇ ಉತ್ಸಾಹದಲ್ಲಿಯೇ ಕಾಣಿಸಿಕೊಂಡಿದ್ದಳು. ಸ್ಟೇಜ್ ಹತ್ತಿ ಮೈಕ್ ಹಿಡಿದು ಏನೋ ಹೇಳೋ ಪ್ರಯತ್ನ ಮಾಡಿದ್ದಾಳೆ ಮಾಲ್ತಿ. ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಾಸ್ ಅಂತೂ ತಮ್ಮದೇ ರೀತಿಯಲ್ಲಿಯೇ ಇಲ್ಲಿ ಗಮನ ಸೆಳೆದಿದ್ದಾರೆ. ನಿಕ್ ಜೋನಾಸ್ ಜನ್ಮ ದಿನದ ಹಿನ್ನೆಲೆಯಲ್ಲಿ ಪ್ರಿಯಾಂಕಾ ಮತ್ತು ನಿಕ್ ಪರಸ್ಪರ ಲಿಪ್ ಕಿಸ್ ಮಾಡಿದ್ದಾರೆ. ಈ ವೇಳೆ ಪ್ರಿಯಾಂಕಾ ಮಗಳನ್ನ ಎತ್ತುಕೊಂಡಿದ್ದರು. ಆದರೆ ಅಪ್ಪ ಮತ್ತು ಅಮ್ಮನ ಕಿಸಿಂಗ್ ನೋಡಿದ ಮಗಳು ತನ್ನ ಎರಡು ಕೈಗಳನ್ನ…

Read More

ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಸಿನಿಮಾಗಳ ಜೊತೆಗೆ ರಾಜಕೀಯದಲ್ಲೂ ಬ್ಯುಸಿಯಾಗಿದ್ದಾರೆ. ಸದ್ಯ ಕಂಗನಾ ನಿರ್ದೇಶಿಸಿ, ನಟಿಸಿ, ನಿರ್ಮಾಣ ಮಾಡಿರುವ ಭಾರತದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ಸಂಬಂಧಿಸಿದ ‘ಎಮರ್ಜೆನ್ಸಿ’ ಸಿನಿಮಾವನ್ನು ಬಿಡುಗಡೆಗೆ ರೆಡಿಯಾಗಿದೆ. ಆದರೆ ಅಂದುಕೊಂಡ ಸಮಯಕ್ಕೆ ಸಿನಿಮಾ ರಿಲೀಸ್ ಮಾಡಲು ಸಾಧ್ಯವಾಗುತ್ತಿಲ್ಲ. ಈ ಚಿತ್ರ ಒಂದಿಲ್ಲೊಂದು ಕಾರಣಗಳಿಂದ ವಿವಾದಗಳ ಸುಳಿಗೆ ಸಿಲುಕುತ್ತಲೇ ಇದೆ. ಈ ನಡುವೆ ಹೊಸದೊಂದಿ ಸಮಸ್ಯೆ ಶುರುವಾಗಿದೆ. ವಿವಾದಾತ್ಮಕ ಚಿತ್ರ ʻಎಮರ್ಜೆನ್ಸಿʼಗೆ ಸಂಬಂಧಿಸಿದಂತೆ ಕಂಗನಾ ಅವರಿಗೆ ಚಂಡೀಗಢದ ಜಿಲ್ಲಾ ನ್ಯಾಯಾಲಯನೋಟಿಸ್ ಜಾರಿ ಮಾಡಿದೆ. ಜಿಲ್ಲಾ ವಕೀಲರ ಸಂಘದ ಮಾಜಿ ಅಧ್ಯಕ್ಷ ವಕೀಲ ರವೀಂದರ್ ಸಿಂಗ್ ಬಸ್ಸಿ ಅವರು, ಈ ಚಿತ್ರದಲ್ಲಿ ಸಿಖ್ಖರ ಪ್ರತಿಷ್ಠೆಯನ್ನು ಹಾಳು ಮಾಡಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಸಿಖ್ಖರ ಚಿತ್ರಣವನ್ನು ತಪ್ಪಾಗಿ ಪ್ರದರ್ಶಿಸಲಾಗಿದೆ. ಜೊತೆಗೆ ಸಿಖ್‌ ಸಮುದಾಯದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಲಾಗಿದೆ. ಹಾಗಾಗಿ ಕಂಗನಾ ವಿರುದ್ಧ ಕೇಸ್‌ ದಾಖಲಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.…

Read More

ಅಭಿಮಾನ್‌ ಸ್ಟುಡಿಯೋದಲ್ಲಿರೋ ವಿಷ್ಣುವರ್ಧನ್ ಸ್ಮಾರಕಕ್ಕೆ ಪೂಜೆ ಸಲ್ಲಿಸದಂತೆ ನಟ ಬಾಲಣ್ಣ ಅವರ ಮಕ್ಕಳು ತಡೆ ನೀಡಿದ ಹಿನ್ನೆಲೆಯಲ್ಲಿ ಅಭಿಮಾನ್‌ ಸ್ಟುಡಿಯೋ ಮುಂದೆ ದಿ. ಡಾ.ವಿಷ್ಣುವರ್ಧನ್‌ ಅಭಿಮಾನಿಗಳು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಇಂದು ದಿ. ಡಾ.ವಿಷ್ಣುವರ್ಧನ್ ಅವರ 74ನೇ ಜನ್ಮದಿನದ ಹಿನ್ನೆಲೆಯಲ್ಲಿ ಸಾವಿರಾರು ಅಭಿಮಾನಿಗಳು ಬೆಂಗಳೂರಿನ ಅಭಿಮಾನ್‌ ಸ್ಟುಡಿಯೋ ಸ್ಮಾರಕಕ್ಕೆ ಪೂಜೆ ಸಲ್ಲಿಸಲು ಆಗಮಿಸಿದ್ದಾರೆ. ದೂರದೂರುಗಳಿಂದ ಬೆಳ್ಳಂಬೆಳಗ್ಗೆಯೇ ಬಂದು ಸಾಲುಗಟ್ಟಿ ನಿಂತಿದ್ದಾರೆ. ಆದ್ರೆ ವಿಷ್ಣು ಸ್ಮಾರಕಕ್ಕೆ ಪೂಜೆ ಸಲ್ಲಿಸದಂತೆ ನಟ ಬಾಲಣ್ಣ ಅವರ ಮಕ್ಕಳು ತಡೆಯೊಡ್ಡಿದ್ದಾರೆ. ಸ್ಟುಡಿಯೋ ಗೇಟ್‌ ಬೀಗ ಹಾಕಿ ಸ್ಮಾರಕ ಮೈಸೂರಿನಲ್ಲಿ ಆಗಿರುವುದರಿಂದ ಅಲ್ಲಿಗೇ ಹೋಗಿ ಪೂಜೆ ಮಾಡುವಂತೆ ಹೇಳಿದ್ದಾರೆ. ಇದರಿಂದ ಆಕ್ರೋಶಗೊಂಡ ಅಭಿಮಾನಿಗಳು ಸ್ಮಾರಕದ ಗೇಟ್‌ ಬಳಿ ಪ್ರತಿಭಟನೆಗೆ ನಿರ್ಧರಿಸಿದ್ದಾರೆ. ವಿಷ್ಣುವರ್ಧನ್ ಹೆಸರಿನಲ್ಲಿ ಅಭಿಮಾನಿ ಸ್ಟುಡಿಯೋದಲ್ಲಿ ಯಾವುದೇ ಕಾರ್ಯಕ್ರಮ, ಸಂಭ್ರಮಾಚಾರಣೆ ಮಾಡದಂತೆ ನಟ ಬಾಲಣ್ಣ ಅವರ ಮಕ್ಕಳು ಕೋರ್ಟಿನಿಂದ ತಡೆಯಾಜ್ಞೆ ತಂದಿದ್ದಾರೆ. ಆದ್ರೆ ಅಭಿಮಾನಿಗಳು ಪೂಜೆ ಸಲ್ಲಿಸೋಕೆ ಜಿಲ್ಲಾಧಿಕಾರಿ ಅನುಮತಿ ನೀಡಿದ್ದಾರೆ. ಇದರ ಹೊರತಾಗಿಯೂ ಕೋರ್ಟ್ ತಡೆಯಾಜ್ಞೆ ನೆಪ…

Read More

ಜೈಲಿನಲ್ಲಿ ಪದೇ ಪದೇ ಕಿರಿಕ್ ಮಾಡಿಕೊಳ್ತಿದ್ದ ನಟ ದರ್ಶನ್ ಗೆ ವಕೀಲರು ಪತ್ರ ಬರೆದಿದ್ದು ಸಮಸ್ಯೆ ಎದುರು ಹಾಕಿಕೊಳ್ಳದಂತೆ ಎಚ್ಚರಿಕೆ ನೀಡಿದ್ದರು. ಪದೇ ಪದೇ ಕಿರಿಕ್ ಮಾಡಿಕೊಳ್ತಿದ್ರೆ ಮುಂದೆ ಜಾಮೀನಿಗೆ ಸಮಸ್ಯೆಯಾಗುತ್ತದೆ ಎಂದು ತಿಳಿಸಿದ್ದರು. ಇದೀಗ ವಕೀಲರ ಎಚ್ಚಿಕೆಯ ಬಳಿಕ ನಟ ದರ್ಶನ್ ಎಚ್ಚೆತ್ತುಕೊಂಡಂತೆ ಕಾಣುತ್ತಿದೆ. ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿರುವ ಕೊಲೆ ಆರೋಪಿ ದರ್ಶನ್ ಪದೇ ಪದೇ ದುರ್ನಡತೆ ತೋರುತ್ತಿದ್ದ ಕಾರಣ ವರ್ತನೆ ಬದಲಾಯಿಸುವ ಕುರಿತು ವಕೀಲರು ಪತ್ರ ಬರೆದಿದ್ದರು. ಇದೀಗ ಆರೋಪಿ ದರ್ಶನ್ ವರ್ತನೆಯಲ್ಲಿ ಸಾಕಷ್ಟು ಬದಲಾವಣೆ ಕಾಣಿಸಿದೆ ಎಂದು ಜೈಲಿನ ಮೂಲಗಳು ತಿಳಿಸಿವೆ. ವಕೀಲರು ದರ್ಶನ್‌ಗೆ ಬರೆದ ಪತ್ರದಲ್ಲಿ ಅನಗತ್ಯ ಕಿರಿಕ್ ಮಾಡಿಕೊಳ್ಳಬೇಡಿ. ಮಾಧ್ಯಮಗಳ ಮೇಲೆ ದುರ್ನಡತೆ ತೋರುವ ಕುರಿತು, ಜೈಲಿನಲ್ಲಿ ಕಿರಿ ಕಿರಿ ಮಾಡಬೇಡಿ. ವರ್ತನೆ ಬದಲಿಸಿಕೊಳ್ಳದಿದ್ದರೇ ಜಾಮೀನು ಅರ್ಜಿ ಹಾಕಿದಾಗ ಸಮಸ್ಯೆ ಆಗುತ್ತದೆ ಎಂದು ಉಲ್ಲೇಖಿಸಿದ್ದರು. ವಕೀಲರು ದರ್ಶನ್‌ಗೆ ಬರೆದ ಪತ್ರದಲ್ಲಿ ಅನಗತ್ಯ ಕಿರಿಕ್ ಮಾಡಿಕೊಳ್ಳಬೇಡಿ. ಮಾಧ್ಯಮಗಳ ಮೇಲೆ ದುರ್ನಡತೆ ತೋರುವ ಕುರಿತು, ಜೈಲಿನಲ್ಲಿ ಕಿರಿ…

Read More

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್ ಬಳ್ಳಾರಿ ಜೈಲು ಸೇರಿ 20 ದಿನ ಕಳೆದಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಅರಾಮಾಗಿದ್ದ ದರ್ಶನ್ ಗೆ ಬಳ್ಳಾರಿ ಜೈಲಿನ ವಾಸ ನಿತ್ಯ ನರಕವಾಗಿದೆ. ಈ ಮಧ್ಯೆ ದರ್ಶನ್ ರ ನ್ಯಾಯಾಂಗ ಬಂಧನದ ಅವಧಿ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ. ಈ ಬೆನಲ್ಲೇ ಪತ್ನಿ ವಿಜಯಲಕ್ಷ್ಮಿ, ನಟ ಧನ್ವೀರ್​ ಜೈಲಿಗೆ ಭೇಟಿ ನೀಡಿ ಮಹತ್ವದ ಚರ್ಚೆ ನಡೆಸಿದ್ದಾರೆ. ಬಳ್ಳಾರಿ ಜೈಲಿನಲ್ಲಿರೋ ದರ್ಶನ್ ಕಂಡು ನಟ ಧನ್ವೀರ್ ಕಣ್ಣೀರು ಹಾಕಿದ್ದಾರೆ. ಪವಿತ್ರಾ ಗೌಡಗೆ ಮೆಸೇಜ್ ಮಾಡಿದ್ದ ಎಂಬ ಕಾರಣಕ್ಕೆ ನಟ ದರ್ಶನ್ ರಿಯಲ್ ಲೈಫ್ ನಲ್ಲಿ ಹೀರೋಯಿಸಂ ತೋರಿಸೋಕೆ ಹೋಗಿದ್ದಾರೆ. ಪರಿಣಾಮ ಕಳೆದ ಮೂರುವರೆ ತಿಂಗಳಿನಿಂದ ಜೈಲಿನ ಕಂಬಿ ಎಣಿಸ್ತಿದ್ದಾರೆ. ಸದ್ಯಕಂತೂ ದರ್ಶನ್ ಗೆ ಬಿಡುಗಡೆ ಅನ್ನೋದು ಮರೀಚಿಕೆಯಾಗಿದೆ. ಈ ಮಧ್ಯೆ ಪತ್ನಿ, ಸ್ನೇಹಿತರು ಬಳ್ಳಾರಿ ಜೈಲಿಗೆ ಭೇಟಿ ನೀಡಿ ಧೈರ್ಯ ತುಂಬಿದ್ದಾರೆ. ಜೊತೆಗೆ ಸೆಂಟ್ರಲ್ ಜೈಲಲ್ಲಿ ಇದ್ರೂ ಕಿರಿಕ್ ಮಾಡಿಕೊಳ್ತಿದ್ದ ಕಾಟೇರನಿಗೆ ಕೆಲವೊಂದಿಷ್ಟು ಬುದ್ಧಿ ಮಾತು ಹೇಳಿದ್ದಾರೆ.…

Read More

ತನ್ನೊಂದಿಗೆ ಕೆಲಸ ಮಾಡುತ್ತಿದ್ದ 21 ವರ್ಷದ ಯುವತಿಯನ್ನು ಖ್ಯಾತಿ ಕೊರಿಯೋಗ್ರಾಫರ್ ಅತ್ಯಾಚಾರ ಮಾಡಿದ್ದಾರೆ ಎಂಬ ಸುದ್ದಿ ಸಖತ್ ಸದ್ದು ಮಾಡುತ್ತಿದೆ. ವಿಷಯ ತಿಳಿಯುತ್ತಿದ್ದಂತೆ ಅನೇಕರು ಜಾನಿ ಮಾಸ್ಟರ್ ವಿರುದ್ಧ ತಿರುಗಿ ಬಿದ್ದಿದ್ದಾರೆ. ಈ ಪ್ರಕರಣದಲ್ಲಿ ಸೂಕ್ತ ತನಿಖೆ ಆಗಬೇಕು, ಯುವತಿಗೆ ನ್ಯಾಯ ಸಿಗಬೇಕು ಎಂದು ಸಾಕಷ್ಟು ಮಂದಿ ಆಗ್ರಹಿಸಿದ್ದಾರೆ. ಈ ಬೆನ್ನಲ್ಲೇ ನಟ ಅಲ್ಲು ಅರ್ಜುನ್ ಅವರು ಸಂತ್ರಸ್ತೆಯ ನೆರವಿಗೆ ಬಂದಿದ್ದು ತಮ್ಮ ಹೋಂ ಬ್ಯಾನರ್ (ಗೀತಾ ಆರ್ಟ್ಸ್​) ಅಡಿ ನಿರ್ಮಾಣ ಆಗುವ ಪ್ರತೀ ಚಿತ್ರದಲ್ಲೂ ಆ ಸಂತ್ರಸ್ತೆಗೆ ಅವಕಾಶ ನೀಡೋದಾಗಿ ಅಲ್ಲು ಅರ್ಜುನ್ ಹೇಳಿದ್ದಾರೆ. ಜಾನಿ ಮಾಸ್ಟರ್ ಹಾಗೂ ಅಲ್ಲು ಅರ್ಜುನ್ ಒಟ್ಟಾಗಿ ಕೆಲಸ ಮಾಡಿದ್ದಾರೆ. ಅಲ್ಲು ಅರ್ಜುನ್ ನಟನೆಯ ‘ಪುಷ್ಪ’ ಚಿತ್ರದ ‘ಶ್ರೀವಲ್ಲಿ..’ ಹಾಡಿಗೆ ಕೊರಿಯೋಗ್ರಫಿ ಮಾಡಿದ್ದು ಇದೇ ಜಾನಿ ಮಾಸ್ಟರ್. ಹೀಗಾಗಿ, ಅಲ್ಲು ಅರ್ಜುನ್​ಗೆ ಅವರ ಜೊತೆ ಒಳ್ಳೆಯ ಗೆಳೆತನ ಇದೆ. ಹಾಗಂದ ಮಾತ್ರಕ್ಕೆ ಅವರು ಸುಮ್ಮನೆ ಕುಳಿತಿಲ್ಲ. ಅವರು ಸಂತ್ರಸ್ತೆಯ ಸಹಾಯಕ್ಕೆ ನಿಂತಿದ್ದಾರೆ. ಜಾನಿ ಮಾಸ್ಟರ್…

Read More

ಮಲಯಾಳಂ ಚಿತ್ರರಂಗದಲ್ಲಿ ಹೇಮಾ ಸಮಿತಿ ರಚಿಸಿರುವಂತೆ ಕನ್ನಡ ಚಿತ್ರರಂಗದಲ್ಲೂ ಅಂಥದ್ದೆ ಸಮಿತಿ ರಚನೆಗೆ ಸಾಕಷ್ಟು ಮಂದಿ ಧ್ವನಿ ಎತ್ತಿದ್ದಾರೆ. ಈ ಬಗ್ಗೆ ಪರ ವಿರೋಧಗಳು ಚರ್ಚೆ ಶುರುವಾಗಿದೆ. ಕನ್ನಡ ಚಿತ್ರರಂಗದಲ್ಲಿ ಕಮಿಟಿ ರಚಿಸುವ ಬಗ್ಗೆ ಸೆ.16ರಂದು ಸಭೆ ಕೂಡ ನಡೆಯಿತು. ಸ್ಯಾಂಡಲ್​​ವುಡ್​ ನಲ್ಲೂ ನಟಿಯರ ರಕ್ಷಣೆಗೆ ಸಮಿತಿ ರಚನೆ ಆಗ್ಬೇಕು ಎಂದು ಅನೇಕರು ಪಟ್ಟು ಹಿಡಿದಿದ್ದಾರೆ. ಈ ಬಗ್ಗೆ ರಿಯಲ್​ ಸ್ಟಾರ್ ಉಪೇಂದ್ರ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಸ್ಯಾಂಡಲ್​ವುಡ್​ ನಟಿಯರ ರಕ್ಷಣೆಗೆ ಕಮಿಟಿ ರಚನೆ ಆಗ್ಬೇಕು ಎನ್ನುವ ಒತ್ತಾಯಕ್ಕೆ ಪ್ರತಿಕ್ರಿಯಿಸಿದ ಉಪೇಂದ್ರ, ಅದು ತುಂಬಾ ಪರ್ಸನಲ್ ವಿಚಾರ ಪಬ್ಲಿಕ್ ಮ್ಯಾಟರಲ್ಲ. ಏನೇನಾಗಿದೆ, ಏನಾಗಿಲ್ಲ ಅನ್ನೋದು ಅವರಿಗಷ್ಟೇ ಗೊತ್ತಿರುತ್ತೆ. ಈಗೇ‌ನೋ ಒಂದು ಕಮಿಟಿ ಮಾಡಿ ಅಲ್ಲಿ ಹೇಳಿಕೊಳ್ಳಬೇಕು ಅಂತಿದ್ದಾರೆ ಎಂದು ಉಪೇಂದ್ರ ಹೇಳಿದ್ದಾರೆ. ಆದ್ರೆ ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಅಲ್ ರೆಡಿ ಅರ್ಟಿಸ್ಟ್ ಅಸೋಸಿಯೇಷನ್ ಇದೆ. ಚೇಂಬರ್ ಇದೆ ಅಂತ ಕೆಲವರು ವಾದ ಮಾಡ್ತಿದ್ದಾರೆ. ಕಮಿಟಿ ಬರುತ್ತಾ? ಮುಂದೇನಾಗುತ್ತೆ ಅನ್ನೋದು ನನಗೂ ಗೊತ್ತಿಲ್ಲ.  ಅನುಕೂಲವಾಗುತ್ತೆ.…

Read More

ಲೆಬನಾನ್‌ ಹಾಗೂ ಸಿರಿಯಾದಲ್ಲಿ ಹಿಜ್ಬುಲ್ಲಾ ಸಂಘಟನೆ ಸದಸ್ಯರ ಮೇಲೆ ರಹಸ್ಯ ದಾಳಿ ನಡೆದಿದ್ದು ಘಟನೆಯಲ್ಲಿ 8 ಮಂದಿ ಸಾವನ್ನಪ್ಪಿದ್ದು, 2 ಸಾವಿರಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಉಗ್ರರು ಸಂವಹನಕ್ಕಾಗಿ ಬಳಸುತ್ತಿದ್ದ ಪೇಜರ್‌ ಸಾಧನ ಸ್ಫೋಟಸಿ ದಾಳಿ ನಡೆಸಲಾಗಿದೆ ಎನ್ನಲಾಗುತ್ತಿದೆ. ಲೆಬನಾನ್‌ನಲ್ಲಿ ಸ್ಥಳೀಯ ಕಾಲಮಾನ ಮಧ್ಯಾಹ್ನ 3:30ಕ್ಕೆ ಭಾರತೀಯ ಕಾಲಮಾನ ಸಂಜೆ 6:30ಕ್ಕೆ ಈ ಸ್ಫೋಟ ಸಂಭವಿಸಿದೆ. ದಾಳಿಯ ಪರಿಣಾಮ ರಸ್ತೆಯಲ್ಲಿ, ತರಕಾರಿ ಮಾರುಕಟ್ಟೆ, ಕಾರಿನಲ್ಲಿದ್ದ ಸದಸ್ಯರು ಅಲ್ಲೇ ಕುಸಿದು ಬಿದ್ದಿದ್ದಾರೆ. ಘಟನೆಯಲ್ಲಿ ಲೆಬನಾನ್‌ನಲ್ಲಿದ್ದ ಇರಾನ್‌ ರಾಯಭಾರಿ ಸಹ ಗಾಯಗೊಂಡಿದ್ದಾರೆ. ಅಮೆರಿಕ ಮತ್ತು ಯುರೋಪಿಯನ್ ಯೂನಿಯನ್ ಎರಡರಿಂದಲೂ ನಿಷೇಧಿಸಲ್ಪಟ್ಟ ಹಿಜ್ಬುಲ್ಲಾ ಸಂಘಟನೆ ಲೆಬನಾನ್‌ನಲ್ಲಿ ರಾಜಕೀಯ ಮತ್ತು ಪ್ಯಾರಾ ಮಿಲಿಟರಿ ಪಡೆಯನ್ನು ಹೊಂದಿದ್ದು ಇರಾನ್‌ನಿಂದ ಬೆಂಬಲಿತವಾಗಿದೆ. ಅಕ್ಟೋಬರ್ 2023 ರಿಂದ ಗಾಜಾದಲ್ಲಿ ಇಸ್ರೇಲ್‌ನೊಂದಿಗೆ ಯುದ್ಧ ಮಾಡುತ್ತಿರುವ ಹಮಾಸ್ ಸಂಘಟನೆಯನ್ನು ಹಿಜ್ಬುಲ್ಲಾ ಬೆಂಬಲಿಸುತ್ತಿದೆ. ಕೆಲ ವರದಿಗಳು ಸೈಬರ್ ದಾಳಿಯಿಂದಾಗಿ ಲಿಥಿಯಂ ಬ್ಯಾಟರಿಗಳಿಂದ ಸ್ಫೋಟಗಳು ಸಂಭವಿಸಿವೆ ಎಂದರೆ ಕೆಲವು ವರದಿಗಳು ಪೇಜರ್‌ಗಳ ಒಳಗೆ ಸ್ಫೋಟಕಗಳ ತೆಳುವಾದ…

Read More