ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಚಾರ್ಜ್ ಶೀಟ್ ನಲ್ಲಿ ದರ್ಶನ್ ಕ್ರೂರತ್ವ ಬಯಲಾಗಿದ್ದು ಅವರಿಗೆ ಕಾನೂನಿನ ಸಂಕಷ್ಟ ಹೆಚ್ಚಾಗುತ್ತಿದೆ. ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಎ2 ಆಗಿದ್ದು, ಅವರ ವಿರುದ್ಧ ನೂರಾರು ಸಾಕ್ಷಿಗಳು ಪೊಲೀಸರಿಗೆ ಸಿಕ್ಕಿವೆ. ಬೆಂಗಳೂರಿನಲ್ಲಿ ಚಾರ್ಜ್‌ಶೀಟ್ ಸಲ್ಲಿಕೆ ಆಗುತ್ತಿದ್ದಂತೆಯೇ ಬಳ್ಳಾರಿ ಜೈಲಿನಲ್ಲಿ ಇರುವ ದರ್ಶನ್ ಅವರು ಕುಟುಂಬದವರ ಭೇಟಿಗೆ ಮನವಿ ಮಾಡಿದ್ದಾರೆ. ಮುಂದಿನ ಕಾನೂನು ಪ್ರಕ್ರಿಯೆಗಳ ಬಗ್ಗೆ ಫ್ಯಾಮಿಲಿ ಜೊತೆ ಚರ್ಚಿಸಲು ದರ್ಶನ್ ಬಯಸಿದ್ದಾರೆ ಎನ್ನಲಾಗುತ್ತಿದೆ. ಬಳ್ಳಾರಿ ಜೈಲಿನಲ್ಲಿ ಇರುವ ದರ್ಶನ್ ಅವರು ಪ್ರಿಸನ್ ಕಾಲ್ ಸಿಸ್ಟಮ್ ಮೂಲಕ ಕುಟುಂಬದವರಿಗೆ ದೂರವಾಣಿ ಕರೆ ಮಾಡಿದ್ದಾರೆ. ಪತ್ನಿ ವಿಜಯಲಕ್ಷ್ಮಿ ಜೊತೆ ಸುಮಾರು 5 ನಿಮಿಷಗಳ ಕಾಲ ಮಾತನಾಡಿದ್ದಾರೆ. ಮುಂದಿನ ಕಾನೂನು ಹೋರಾಟದ ಬಗ್ಗೆಯೇ ಪತ್ನಿ ಜೊತೆ ಅವರು ಚರ್ಚೆ ಮಾಡಿದ್ದಾರೆ. ಪತ್ನಿ ಜೊತೆ ಮಾತನಾಡುವಾಗ ಅವರು ಭಾವುಕರಾಗಿದ್ದಾರೆ ಎಂದು ಜೈಲು ಮೂಲಗಳು ತಿಳಿಸಿವೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಮುಗಿದಿದೆ. 3991 ಪುಟಗಳು…
Author: Author AIN
ಕ್ಯಾಲಿಫೋರ್ನಿಯಾ ರಾಜ್ಯ ಸೆನೆಟ್ ಸದಸ್ಯೆ ಮೇರಿ ಅಲ್ವರಡೊ ಗಿಲ್ ವಿರುದ್ಧ ಅನಪೇಕ್ಷಿತ ಲೈಂಗಿಕತೆ ಹಾಗೂ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ. ಗಿಲ್ ಅವರ ಸಿಬ್ಬಂದಿ ಮುಖ್ಯಸ್ಥರಾಗಿ ಸೇವೆಯಲ್ಲಿದ್ದ ಅವಧಿಯಲ್ಲಿ ಚಡ್ ಕಾಂಡಿಟ್ ಎಂಬ ವ್ಯಕ್ತಿ ಈ ದಾವೆ ಹೂಡಿದ್ದು, ಅನಪೇಕ್ಷಿತ ಲೈಂಗಿಕತೆ ಮತ್ತು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದು ಈ ಬಗ್ಗೆ ದೂರು ದಾಖಲಿಸಿದ್ದಾರೆ. “ನನ್ನ ಉದ್ಯೋಗ ಭದ್ರತೆಯನ್ನು ಖಾತರಿಪಡಿಸಿಕೊಳ್ಳುವ ಸಲುವಾಗಿ ಹಲವು ವರ್ಷಗಳಿಂದ ಅನಪೇಕ್ಷಿತ ಲೈಂಗಿಕ ಚಟುವಟಿಕೆಗಳಲ್ಲಿ ನನ್ನನ್ನು ತೊಡಗಿಸಿಕೊಳ್ಳಲಾಗಿದ್ದು, ಈ ಬಗ್ಗೆ ತೀರಾ ಒತ್ತಡದ ಅನುಭವ ನನಗಾಗುತ್ತಿತ್ತು. ಮುಖ ಮೈಥುನ (ಓರಲ್ ಸೆಕ್ಸ್) ಬಗ್ಗೆ ಒಲವು ಹೊಂದಿದ್ದ ಗಿಲ್, ಇದನ್ನು ಅಧಿಕಾರದ ದರ್ಪವಾಗಿ ಬಳಸಿಕೊಂಡಿದ್ದರು ಎಂದು ಆಪಾದಿಸಿದ್ದಾರೆ. ಉದ್ಯೋಗಿ ಕಳೆದುಕೊಂಡ ವೇತನ, ದುಡಿಯುವ ಸಾಮರ್ಥ್ಯ ನಷ್ಟ, ಉದ್ಯೋಗಿ ಪ್ರಯೋಜನಗಳು ಮತ್ತು ಭಾವನಾತ್ಮಕ ಒತ್ತಡಗಳಿಗೆ ಹಣಕಾಸು ಪರಿಹಾರವನ್ನು ಕೋರಿದ್ದಾರೆ. ಅಧಿಕಾರ ಮತ್ತು ಪ್ರಭುತ್ವವನ್ನು ದುರುಪಯೋಗಪಡಿಸಿಕೊಂಡ ಗಿಲ್, ಅಶ್ಲೀಲ, ನಿಯಂತ್ರಣ ಮತ್ತು ಲೈಂಗಿಕ ಪ್ರಾಬಲ್ಯದ ಕಿರುಕುಳ ನೀಡುತ್ತಿದ್ದರು ಎಂದು ಸೆಕ್ರೆಮೆಂಟೊ…
ಭಾರತದ ಅದಾನಿ ಏರ್ಪೋರ್ಟ್ ಹೋಲ್ಡಿಂಗ್ಸ್ ಲಿಮಿಟೆಡ್ ಮತ್ತು ಕೀನ್ಯಾ ಸರಕಾರದ ನಡುವಿನ 1.85 ಬಿಲಿಯನ್ ಮೌಲ್ಯದ ಒಪ್ಪಂದಕ್ಕೆ ಕೀನ್ಯಾದ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ಈ ಒಪ್ಪಂದದಲ್ಲಿ ಅದಾನಿಯ ಸಂಸ್ಥೆಗೆ ನೈರೋಬಿಯ ಜೊಮೊ ಕೆನ್ಯಾಟ್ಟಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು 30 ವರ್ಷಗಳವರೆಗೆ ನಿರ್ವಹಿಸಲು ಗುತಿಗೆ ನೀಡುವ ಬಗ್ಗೆ ಪ್ರಸ್ತಾಪಿಸಲಾಗಿತ್ತು. ಬ್ಲೂಮ್ಬರ್ಗ್ ವರದಿಯ ಪ್ರಕಾರ, ನೈರೋಬಿಯ ಜೋಮೊ ಕೆನ್ಯಾಟ್ಟಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು(ಜೆಕೆಐಎ) ಅದಾನಿ ವಿಮಾನ ನಿಲ್ದಾಣಕ್ಕೆ ಗುತ್ತಿಗೆ ನೀಡುವ ಕೀನ್ಯಾ ಸರ್ಕಾರದ ವಿರುದ್ಧ ನಿರ್ಧಾರದ ವಿರುದ್ಧ ಕಾನೂನು ತಕರಾರು ಎದುರಾಗಿದೆ. ಕೀನ್ಯಾ ಮಾನವ ಹಕ್ಕುಗಳ ಆಯೋಗ, ವಕೀಲರ ಸಂಘವು ಈ ಕ್ರಮವು ಅಸಂವಿಧಾನಿಕ ಎಂದು ವಾದಿಸಿದೆ. ಕೀನ್ಯಾದ ವಿಮಾನಯಾನ ಕಾರ್ಮಿಕರ ಒಕ್ಕೂಟವು ಕಳೆದ ತಿಂಗಳು ಈ ಬಗ್ಗೆ ಮುಷ್ಕರವನ್ನು ನಡೆಸಿತ್ತು. ಈ ನಿರ್ಧಾರದಿಂದ ಉದ್ಯೋಗ ಕಡಿತ ಉಂಟಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದರು. ಪ್ರಕರಣದಲ್ಲಿ ಅರ್ಜಿದಾರರಾದ ಕೀನ್ಯಾದ ಲಾ ಸೊಸೈಟಿಯ ಅಧ್ಯಕ್ಷ ಫೇಯ್ತ್ ಒಡಿಯಾಂಬೊ ಈ ಒಪ್ಪಂದವು ಉದ್ಯೋಗ ನಷ್ಟಗಳಿಗೆ ಕಾರಣವಾಗುತ್ತದೆ ಮತ್ತು…
ಕೆಲವು ಧರ್ಮ, ಭಾಷೆ ಮತ್ತು ಸಮುದಾಯಗಳನ್ನು ಆರ್ಎಸ್ಎಸ್ ಕೀಳಾಗಿ ಕಾಣುತ್ತದೆ. ಇದೇ ಕಾರಣಕ್ಕೆ ನಮ್ಮ ಹೋರಾಟ ಇವುಗಳ ಬಗ್ಗೆಯೇ ಹೊರತು, ರಾಜಕೀಯವಾಗಿ ಅಲ್ಲ ಎಂದು ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ ವಾಷಿಂಗ್ಟನ್ ಡಿಸಿಯ ವರ್ಜೀನಿಯಾದ ಹೆರ್ಂಡನ್‌ನಲ್ಲಿ ಭಾರತೀಯ-ಅಮೆರಿಕನ್ನರನ್ನು ಉದ್ದೇಶಿಸಿ ಮಾತನಾಡಿದ ಅವರು, ಹೋರಾಟ ಎಂದರೇನು ಎಂಬುದನ್ನು ನೀವು ಅರ್ಥಮಾಡಿಕೊಳ್ಳಬೇಕು. ಮೇಲ್ನೋಟಕ್ಕೆ ಇದು ರಾಜಕೀಯ ಎನಿಸಿದರೂ, ಅದಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಇದೇ ವೇಳೆ ಸ್ಥಳದಲ್ಲಿ ನೆರೆದಿದ್ದ ಸಿಖ್ ವ್ಯಕ್ತಿಯನ್ನು ಉಲ್ಲೇಖಿಸಿ ಮಾತನಾಡಿದ ಅವರು, ಸಿಖ್ಖರು ಭಾರತದಲ್ಲಿ ಟರ್ಬನ್ ಅಥವಾ ಕಡ ಧರಿಸಲು ಅವಕಾಶ ನೀಡುವುದು, ಮುಕ್ತವಾಗಿ ಗುರುದ್ವಾರ ಪ್ರವೇಶಿಸಲು ಅವಕಾಶ ನೀಡುವುದು ಇದು ಹೋರಾಟ. ಇದು ವ್ಯಕ್ತಿಗತವಾಗಿ ನಡೆಯುವ ಹೋರಾಟವಲ್ಲ. ಧರ್ಮಕ್ಕಾಗಿ ನಡೆಯುವ ಹೋರಾಟ ಎಂದರು. ಆರ್ಎಸ್ಎಸ್ ಕೆಲವು ರಾಜ್ಯಗಳನ್ನು ಇತರೆ ರಾಜ್ಯಗಳಿಗಿಂತ ಕೀಳಾಗಿ ನೋಡುತ್ತದೆ. ಕೆಲವು ಭಾಷೆಗಳು, ಧರ್ಮ, ಸಮುದಾಯವನ್ನೂ ಇದೇ ದೃಷ್ಟಿಯಿಂದ ನೋಡುತ್ತದೆ. ತಮಿಳು, ಮರಾಠಿ, ಬಂಗಾಳಿ, ಮಣಿಪುರಿ ಅವರು ಕೀಳಾಗಿ ನೋಡುವ ಭಾಷೆಗಳು. ಇದೇ…
ರೇಣುಕಾಸ್ವಾಮಿ ಕೊಲೆ ನಡೆದು ಮೂರು ತಿಂಗಳ ಕಳೆದಿದ್ದು ಪೊಲೀಸರು ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಈ ಮಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಮಾಹಿತಿಗಳು ಹೊರ ಭೀಳುತ್ತಿದೆ.ರೇಣುಕಾಸ್ವಾಮಿ ಪವಿತ್ರಾ ಗೌಡಗೆ ಮಾತ್ರವಲ್ಲ ರಾಗಿಣಿ, ಶುಭ ಪೂಂಜಾಗೂ ಮೆಸೇಜ್ ಮಾಡಿದ್ದ ಎಂದು ಜಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ. ಈ ಬಗ್ಗೆ ನಟಿ ಶುಭ ಪೂಂಜಾ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ಎಲ್ಲಾ ಮಾಧ್ಯಮ ಮಿತ್ರರೇ ಬೆಳಗ್ಗೆಯಿಂದ ರೇಣುಕಾಸ್ವಾಮಿ ಪ್ರಕರಣದ ಕುರಿತು ನನಗೆ ಕರೆ ಮಾಡುತ್ತಿದ್ದೀರಾ, ಅದಕ್ಕೆಲ್ಲಾ ನಾನು ಸ್ಪಷ್ಟನೆ ನೀಡಲು ಬಯಸುತ್ತೇನೆ. ನನ್ನ ವೈಯಕ್ತಿಕ ಖಾತೆಯಲ್ಲಿ ಅಂತಹ ಯಾವುದೇ ಮೆಸೇಜ್‌ಗಳು ಬಂದಿಲ್ಲ ಎಂದು ನಟಿ ಸ್ಪಷ್ಟನೆ ನೀಡಿದ್ದಾರೆ. ಕನ್ನಡದ ಹೆಸರಾಂತ ನಟಿಯರಾದ ರಾಗಿಣಿ ದ್ವಿವೇದಿ, ಶುಭಾ ಪೂಂಜಾ ಸೇರಿದಂತೆ ಅನೇಕ ನಟಿಯರಿಗೆ ರೇಣುಕಾಸ್ವಾಮಿ ತನ್ನ ನಕಲಿ ಅಕೌಂಟ್ ನಿಂದ ಅಶ್ಲೀಲ ಸಂದೇಶ ಕಳುಹಿಸಿದ್ದನಂತೆ. ಪೊಲೀಸರ ವಿಚಾರಣೆ ವೇಳೆಯಲ್ಲಿ ಇಬ್ಬರು ಆರೋಪಿಗಳು ಒಪ್ಪಿಕೊಂಡಿದ್ದಾರೆ. ಪ್ರದೋಶ್ ಮತ್ತು ವಿನಯ್ ನೀಡಿರುವ ಹೇಳಿಕೆಯಲ್ಲಿ ರೇಣುಕಾಸ್ವಾಮಿ ಈ ನಟಿಯರಿಗೆ ಮಾತ್ರವಲ್ಲ,…
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ದಿನದಿಂದ ದಿನಕ್ಕೆ ಹೊಸ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಘಟನೆ ನಡೆದು ಮೂರು ತಿಂಗಳು ಕಳೆದಿದ್ದು ನಿತ್ಯ ಸಾಕಷ್ಟು ಮಾಹಿತಿಗಳು ಹೊರ ಭೀಳುತ್ತಿದೆ. ಮೃತ ರೇಣುಕಾಸ್ವಾಮಿ ನಟಿ ಪವಿತ್ರಾ ಗೌಡಗೆ ಮಾತ್ರವಲ್ಲ ರಾಗಿಣಿಗೂ ಮೆಸೇಜ್ ಮಾಡಿದ್ದ ಎನ್ನಲಾಗುತ್ತಿದೆ. ಈ ಬಗ್ಗೆ ನಟಿ ರಾಗಿಣಿ ದ್ವಿವೇದಿ ಪ್ರತಿಕ್ರಿಯೆ ನೀಡಿದ್ದಾರೆ. ನಟಿ ರಾಗಿಣಿ ದ್ವಿವೇದಿ ಅವರಿಗೂ ರೇಣುಕಾಸ್ವಾಮಿ ಮೆಸೇಜ್ ಕಳುಹಿಸಿದ್ದ ಎಂಬ ವಿಚಾರ ಜಾರ್ಜ್‌ಶೀಟ್ ಉಲ್ಲೇಖವಾಗಿತ್ತು. ಇದಕ್ಕೆ ರಾಗಿಣಿ ಪ್ರತಿಕ್ರಿಯಿಸಿ, ಅಶ್ಲೀಲ ಸಂದೇಶಗಳು ನನಗೆ ಬಂದಿರುವ ಮಾಹಿತಿ ಇಲ್ಲ ಎಂದಿದ್ದಾರೆ. ನನ್ನ ಪ್ರೊಫೈಲ್ ಅನ್ನು ಏಜೆನ್ಸಿ ಹ್ಯಾಂಡಲ್ ಮಾಡುತ್ತದೆ. ಹೀಗಾಗಿ ಅಶ್ಲೀಲ ಸಂದೇಶಗಳು ನನಗೆ ಬಂದಿರುವ ಮಾಹಿತಿ ಇಲ್ಲ. ಬಂದಿದ್ದರೂ ನಾನು ಅದನ್ನ ಓದುವುದಿಲ್ಲ ಎಂದಿದ್ದಾರೆ. ನನ್ನ ಗಮನಕ್ಕೆ ಬಂದಂತೆ ಯಾವುದೇ ಕೆಟ್ಟ ಸಂದೇಶ ಬಂದಿಲ್ಲ ಎಂದು ರಾಗಿಣಿ ಸ್ಪಷ್ಟನೆ ನೀಡಿದ್ದಾರೆ. ನಕಲಿ ಅಕೌಂಟ್ ಹೊಂದಿದ್ದ ರೇಣುಕಾಸ್ವಾಮಿ ಅದರಿಂದ ಖ್ಯಾತ ನಟಿಯರಿಗೆ ಮೆಸೇಜ್ ಮಾಡುತ್ತಿದ್ದ ಎನ್ನಲಾಗುತ್ತಿದೆ. ರಾಗಿಣಿ ದ್ವಿವೇದಿ, ಶುಭಾ ಪೂಂಜಾ…
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ದರ್ಶನ್ ಜೈಲು ಸೇರಿದ್ದಾರೆ. ಸದ್ಯ ಬಳ್ಳಾರಿ ಜೈಲಿನಲ್ಲಿರುವ ದರ್ಶನ್ ನಿತ್ಯ ನರಕ ಅನುಭವಿಸುತ್ತಿದ್ದಾರೆ. ಹತ್ಯೆ ಪ್ರಕರಣದ ವಿರುದ್ಧ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಚಾರ್ಜ್ ಶೀಟ್‌ನಲ್ಲಿ ದರ್ಶನ್ ಬಗ್ಗೆ ಒಂದೊಂದೇ ಸುದ್ದಿ ಹೊರಬೀಳುತ್ತಿದೆ. ಇತ್ತ ಪತ್ನಿ ವಿಜಯಲಕ್ಷ್ಮಿ ಗೆಳತಿಯೊಬ್ಬರ ಬರ್ತ್‌ಡೇ ಪಾರ್ಟಿಯಲ್ಲಿ ಭಾಗಿಯಾಗಿರುವ ಫೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ನಟ ದರ್ಶನ್‌ಗೆ ಪೊಲೀಸರು ಸಲ್ಲಿಸಿರುವ ಚಾರ್ಜ್‌ಶೀಟ್ ಟೆನ್ಷನ್ ಹುಟ್ಟಾಕಿದೆ ಎಂದು ವರದಿಯಾಗಿತ್ತು. ಜಾಮೀನು ಸಿಗುತ್ತೋ ಇಲ್ಲವೋ ಅನ್ನುವ ಆತಂಕದಲ್ಲಿ ಇದ್ದಾರೆ ಎಂದೂ ಹೇಳಲಾಗುತ್ತಿದೆ. ಇದೇ ವೇಳೆ ಪತಿಯನ್ನು ಜೈಲಿನಿಂದ ಹೊರ ತರಲು ವಿಜಯಲಕ್ಷ್ಮಿ ಕೂಡ ಹರಸಾಹಸ ಪಡುತ್ತಿದ್ದಾರೆ ಎಂಬ ಮಾತು ಕೇಳಿ ಬಂದಿತ್ತು. ಈ ಮಧ್ಯೆ ಗೆಳತಿಯೊಬ್ಬರ ಪಾರ್ಟಿಯಲ್ಲಿ ವಿಜಯಲಕ್ಷ್ಮಿ ಮಸ್ತ್ ಆಗಿ ಎಂಜಾಯ್ ಮಾಡಿದ್ದು ಫೋಟೋ ಹರಿದಾಡುತ್ತಿದೆ. ವಿಜಯಲಕ್ಷ್ಮಿ ಗೆಳತಿಯ ಬರ್ತ್‌ಡೇ ಪಾರ್ಟಿಯಲ್ಲಿ ಭಾಗಿಯಾಗಿದ್ದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದೆ. ಗೆಳತಿಯ ಬರ್ತ್‌ಡೇಯಲ್ಲಿ ಕೇಕ್ ಮಾಡಿರುವ ಫೋಟೋಗಳನ್ನು ಅವರೇ ಹಂಚಿಕೊಂಡಿದ್ದಾರೆ. ಅಂದ್ಹಾಗೆ, ಶ್ರುತಿ…
ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲು ಸೇರಿರುವ ನಟ ದರ್ಶನ್ ಬಿಡುಗಡೆಗಾಗಿ ಪತ್ನಿ ವಿಜಯಲಕ್ಷ್ಮಿ ಸಾಕಷ್ಟು ದೇವರುಗಳ ಮೊರೆ ಹೋಗುತ್ತಿದ್ದಾರೆ. ಅಂತೆಯೇ ಇದೀಗ ಅಸ್ಸಾಂನ ಗುವ್ಹಾಟಿಯಲ್ಲಿರುವ ಕಾಮಾಕ್ಯ ದೇಗುಲಕ್ಕೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಭೇಟಿ ನೀಡಿ ಪತಿಯ ಬಿಡುಗಡೆಗಾಗಿ ಪ್ರಾರ್ಥಿಸಿದ್ದಾರೆ. ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮಿ ಕಾನೂನು ಹೋರಾಟ ಮುಂದುವರೆಸಿದ್ದಾರೆ. ಅದಕ್ಕೆ ಸಿದ್ಧತೆ ಮಾಡಿಕೊಂಡಿರೋ ಬೆನ್ನಲ್ಲೇ ದರ್ಶನ್ ಪತ್ನಿ 51 ಶಕ್ತಿಪೀಠಗಳಲ್ಲಿ ಒಂದಾಗಿರುವ ಕಾಮಾಕ್ಯ ದೇವಿಯ ಸನ್ನಿಧಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಭೇಟಿ ನೀಡಿರುವ ಫೋಟೋ ಶೇರ್ ಮಾಡಿ Prayer is Powerfull ಎಂದು ವಿಜಯಲಕ್ಷ್ಮಿ ಅಡಿಬರಹ ನೀಡಿದ್ದಾರೆ. ಆದರೆ ಎಲ್ಲೂ ದೇವಸ್ಥಾನ ಹೆಸರನ್ನು ಅವರು ಉಲ್ಲೇಖಿಸಿಲ್ಲ. ದರ್ಶನ್ ವಿರುದ್ಧ ಪೊಲೀಸರು ಸಲ್ಲಿಸಿರುವ ದೋಷಾರೋಪ ಪಟ್ಟಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಅದರಲ್ಲಿ ದರ್ಶನ್ ಕೊಟ್ಟಿರುವ ಹೇಳಿಕೆಗಳು ಸಿಕ್ಕಾಪಟ್ಟೆ ಸದ್ದು ಮಾಡುತ್ತಿವೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣ ದೇಶಾದ್ಯಂತ ಚರ್ಚೆಯಾಗುತ್ತಿದೆ. ಈ ವೇಳೆ ಬಳ್ಳಾರಿಯಲ್ಲಿರುವ ದರ್ಶನ್ ಅವರನ್ನು ಇತ್ತೀಚೆಗೆ ವಿಜಯಲಕ್ಷ್ಮಿ ಹೋಗಿ ಆಗಾಗ…
ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದ ಎಂಬ ಕಾರಣಕ್ಕೆ ರೇಣುಕಾಸ್ವಾಮಿಯನ್ನು ದರ್ಶನ್ ಎಂಡ್ ಗ್ಯಾಂಗ್ ಭೀಕರವಾಗಿ ಹತ್ಯೆ ಮಾಡಿದೆ. ಮರಣೋತ್ತರ ಪರೀಕ್ಷೆಯಲ್ಲಿ ದರ್ಶನ್ ಎಂಡ್ ಗ್ಯಾಂಗ್ ಸದಸ್ಯರ ಭೀಕರತೆ ಬಗ್ಗೆ ಬಯಲಾಗಿದೆ. ಜೂನ್ 13ರಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯಾಧಿಕಾರಿಗಳು ನೀಡಿದ ಮೃತನ ಶವಪರೀಕ್ಷಾ ವರದಿಯನ್ನು ಪಡೆದು ಪರಿಶೀಲಿಸಿದ ನಂತರ, ವೈದ್ಯಾಧಿಕಾರಿಗಳು, ‘ಮೃತ್ಯುವು ಶಾಕ್ ಮತ್ತು ಅನೇಕ ಕಟು ಗಾಯಗಳ ಕಾರಣದಿಂದ ಸಂಭವಿಸಿದೆ’ ಎಂಬ ಅಭಿಪ್ರಾಯವನ್ನು ನೀಡಿರುತ್ತಾರೆ. ವೈದ್ಯರು ಮರಣೋತ್ತರ ಪರೀಕ್ಷಾ ವರದಿಯಲ್ಲಿ ನಮೂದಿಸಿರುವ ಮೃತನ ದೇಹದ ಮೇಲಿನ ಗಾಯಗಳ ವಿವರಗಳು ಬೆಚ್ಚಿ ಬೀಳಿಸುವಂತಿವೆ. ಎಡ ತಾತ್ಕಾಲಿಕ ಪಾರೈಟಲ್ ಪ್ರದೇಶದ ಮೇಲೆ 2.5cm x 1cm ಗಾತ್ರದ ಮಗ್ಗುಲು ಗಾಯವು ಬೋನ್ ಡೀಪ್ ಇದ್ದು, ಅದು ಪತ್ತೆಯಾಗಿದೆ. ಬಲಗಡೆಯ ಕುತ್ತಿಗೆಯ ಹಿಂಭಾಗದಲ್ಲಿ, ಹಿಂದಿನ ಕೂದಲು ಸಾಲಿನ ಕೆಳಗಿರುವ 3cm x 2cm ಗಾತ್ರದ ಕಾಟು (ಗಾಯ) ಪತ್ತೆಯಾಗಿದೆ. ಬಲಗಡೆಯ ಕುತ್ತಿಗೆಯ ಕೆಳಭಾಗದ ಹಿಂಭಾಗದಲ್ಲಿ, ಹಿಂದಿನ ಕೂದಲು ಸಾಲಿನಿಂದ 10cm ಕೆಳಗಿರುವ 5cm…
ಸುದೀಪ್ ರನ್ನು ಮತ್ತೆ ಸ್ಮಾಲ್ ಸ್ಕ್ರೀನ್ ನಲ್ಲಿ ನೋಡಲು ಅಭಿಮಾನಿಗಳು ಕಾಯ್ತಿದ್ದಾರೆ. ಯಾವಾಗ ಬಿಗ್ ಬಾಸ್ ಕನ್ನಡ ಸೀಸನ್ 11 ಶುರುವಾಗುತ್ತೆ, ಯಾವಾಗ ಸುದೀಪ್ ರನ್ನು ನೋಡ್ತೇವೆ ಎಂದು ಸಾಕಷ್ಟು ಮಂದಿ ಕಾಯ್ತಿದ್ದಾರೆ. ಆದ್ರೆ ಸುದೀಪ್ ಈ ಬಾರಿ ಬಿಗ್ ಬಾಸ್ ಹೋಸ್ಟ್ ಮಾಡೋದು ಸಾಕಷ್ಟು ಅನುಮಾನವೇ ಆಗಿದೆ. ಇದೀಗ ಸುದೀಪ್ ಬರುತ್ತಾರೆ ಎಂದು ಕಾದು ಕೂತವರಿಗೆ ಕಲರ್ಸ್ ಕನ್ನಡ ಬಿಗ್ ಶಾಕ್ ನೀಡಿದೆ. ಸುದೀಪ್ ಬರೋದು ಅನುಮಾನವಾ ಎನ್ನುವ ಪ್ರಶ್ನೆಯನ್ನು ಹುಟ್ಟುಹಾಕಿದೆ. ವಾರದ ಹಿಂದೆ ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಪ್ರೋಮೋ ರಿಲೀಸ್ ಆಗಿತ್ತು. ಈ ಪ್ರೋಮೋದಲ್ಲಿ ಕೇವಲ ಲೋಗೋ ಮಾತ್ರವೇ ಇತ್ತು. ಅಲ್ಲದೆ, ಹೊಸ ಸೀಸನ್ ಶೀಘ್ರವೇ ಆರಂಭ ಆಗಲಿದೆ ಎಂದು ಬರೆಯಲಾಗಿತ್ತು. #KichchaSudeep ಎಂದು ಬರೆಯುವ ಮೂಲಕ ಎಲ್ಲರಿಗೂ ಸರ್ಪ್ರೈಸ್ ನೀಡಲಾಗಿತ್ತು. ಸುದೀಪ್ ಈ ಸೀಸನ್ನಲ್ಲಿ ಇರುತ್ತಾರೆ ಅನ್ನೋದು ಬಹುತೇಕ ಖಚಿತವಾಯಿತು. ಆದರೆ, ಈಗ ಈ ಹ್ಯಾಶ್ಟ್ಯಾಗ್ ತೆಗೆದು ಹಾಕಲಾಗಿದೆ. ಬಿಗ್ ಬಾಸ್ ಪ್ರೋಮೋನ ಕಲರ್ಸ್…