Author: Author AIN

ಸ್ಯಾಂಡಲ್‌ವುಡ್​ನಲ್ಲಿ  ಭಾರೀ ಸಂಚಲನ ಸೃಷ್ಟಿಸಿದ್ದ  ಡ್ರಗ್ಸ್ ಪ್ರಕರಣದಲ್ಲಿ ನಟಿ ಸಂಜನಾ ಗಲ್ರಾನಿ ಹಾಗೂ ಶಿವಪ್ರಕಾಶ್ ಚಿಪ್ಪಿಗೆ ಬಿಗ್ ರಿಲೀಫ್ ಸಿಕ್ಕಿದೆ. ಇಬ್ಬರ ವಿರುದ್ದ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಕರ್ನಾಟಕ ಹೈಕೋರ್ಟ್ ರದ್ದು ಪಡಿಸಿದೆ. ಮಾದಕ ವಸ್ತು ಜಾಲದ ಜತೆ ನಂಟು ಹೊಂದಿದ್ದಾರೆ ಎಂಬ ಆರೋಪದಲ್ಲಿ 2020ರ ಸೆಪ್ಟೆಂಬರ್‌ನಲ್ಲಿ ನಟಿಯರಾದ ಸಂಜನಾ ಗಲ್ರಾನಿ, ರಾಗಿಣಿ ದ್ವಿವೇದಿ, ನಿರ್ಮಾಪಕ ಶಿವಪ್ರಕಾಶ್ ಚಿಪ್ಪಿ ಸೇರಿ ಹಲವರ ಬಂಧನವಾಗಿತ್ತು. ನಂತರ ಜೈಲು ಸೇರಿದ್ದ ಸಂಜನಾಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಡಿಸೆಂಬರ್‌ನಲ್ಲಿ ಜಾಮೀನು ಸಿಕ್ಕಿತ್ತು. ಬಳಿಕ ಎಫ್‌ಐಆರ್ ರದ್ದು ಕೋರಿ ಸಂಜನಾ ಹಾಗೂ ಶಿವಪ್ರಕಾಶ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಆ ಅರ್ಜಿಯ ವಿಚಾರಣೆ ನಡೆಸಿರುವ ಹೈಕೋರ್ಟ್ ಏಕಸದಸ್ಯ ಪೀಠ ಎಫ್‌ಐಆರ್ ರದ್ದುಗೊಳಿಸಿ ಆದೇಶ ಹೊರಡಿಸಿದೆ. 2020ರ ಆಗಸ್ಟ್ 26ರಂದು ಸೆಲಿಬ್ರಿಟಿಗಳು, ಸಿನಿಮಾ ನಟ, ನಟಿಯರು ಹಾಗೂ ಉದ್ಯಮಿಗಳ ಮಕ್ಕಳು ಡ್ರಗ್ಸ್‌ ಪಾರ್ಟಿ ಮಾಡುತ್ತಿದ್ದಾರೆ ಎಂಬ ಮಾಹಿತಿ ಆಧರಿಸಿ ಎನ್‌ಸಿಬಿ ಅಧಿಕಾರಿಗಳು ಬೆಂಗಳೂರಿನ ಕಲ್ಯಾಣ ನಗರದಲ್ಲಿರುವ ರಾಯಲ್ ಸೂಟ್ಸ್ ಹೋಟೆಲ್ ಮೇಲೆ…

Read More

ಸ್ನೇಹಿತೆ ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದ ಎಂಬ ಕಾರಣಕ್ಕೆ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ದರ್ಶನ್ ಎಂಡ್ ಗ್ಯಾಂಗ್ ಕಿಡ್ನ್ಯಾಪ್ ಮಾಡಿ ಭೀಕರವಾಗಿ ಹತ್ಯೆ ಮಾಡಿತ್ತು. ಘಟನೆಯ ಬಳಿಕ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಮಂದಿಯನ್ನು ಬಂಧಿಸಿರೋ ಪೊಲೀಸರು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದಾರೆ. ಇದೀಗ ಪ್ರಕರಣದ ನಾಲ್ವಾರು ಆರೋಪಿಗಳನ್ನು ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಿಂದ ತುಮಕೂರು ಸೆಂಟ್ರಲ್ ಜೈಲಿಗೆ ಸ್ಥಳಾಂತರ ಮಾಡಲಾಗಿದೆ. ರವಿಶಂಕರ್, ಕಾರ್ತಿಕ್, ಕೇಶವಮೂರ್ತಿ, ನಿಖಿಲ್ ಅವರುಗಳನ್ನು ತುಮಕೂರು ಸೆಂಟ್ರಲ್ ಜೈಲಿಗೆ ಸ್ಥಳಾಂತರಿಸಿದ 24ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ. ತುಮಕೂರು ಜೈಲಿಗೆ ಸ್ಥಳಾಂತರಕ್ಕೆ ಆರೋಪಿಗಳ ಪರ ವಕೀಲರ ಆಕ್ಷೇಪ ವ್ಯಕ್ತಪಡಿಸಿದರು. ಆರೋಪಿಗಳ ಸ್ಥಳಾಂತರ ಅಗತ್ಯದ ಬಗ್ಗೆ ಕೋರ್ಟ್​ಗೆ ಎಸ್​ಪಿಪಿ ಪಿ.ಪ್ರಸನ್ನಕುಮಾರ್ ವಿವರಣೆ ನಂತರ ಸ್ಥಳಾಂತರಕ್ಕೆ ಆದೇಶಿಸಲಾಯಿತು. ರೇಣುಕಾಸ್ವಾಮಿಯನ್ನು ನಾವೇ ಕೊಂದಿದ್ದೇವೆಂದು ಹೇಳಿಕೊಂಡು ಮೊದಲು ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರಿಗೆ ಕಾರ್ತಿಕ್, ಕೇಶವಮೂರ್ತಿ, ನಿಖಿಲ್ ಶರಣಾಗಿದ್ದರು. ರೇಣುಕಾಸ್ವಾಮಿ ಕೊಲೆ ಪ್ರಕರಣದ ಬಗ್ಗೆ ಮೂವರು ಬಾಯ್ಬಿಟ್ಟಿದ್ದರಿಂದ ದರ್ಶನ್ ಮತ್ತು…

Read More

ಅಮೆರಿಕದ ಟೆಕ್ಸಾಸ್ ರಾಜ್ಯದ ಕನ್ವೀನಿಯನ್ಸ್ ಸ್ಟೋರ್‌ನಲ್ಲಿ ದರೋಡೆ ವೇಳೆ ದುಷ್ಕರ್ಮಿಗಳ ಗುಂಡೇಟಿನಿಂದ 32 ವರ್ಷದ ಭಾರತೀಯ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಆಂಧ್ರಪ್ರದೇಶದ ಬಾಪಟ್ಲಾ ಜಿಲ್ಲೆಯವರಾದ ದಾಸರಿ ಗೋಪಿಕೃಷ್ಣ ಎಂದು ಗುರುತಿಸಲಾಗಿದ್ದು, ಅವರು ಎಂಟು ತಿಂಗಳ ಹಿಂದಷ್ಟೇ ಅಮೆರಿಕಕ್ಕೆ ತೆರಳಿದ್ದರು.  ಜೂನ್ 21 ರಂದು ಡಲ್ಲಾಸ್‌ನ ಪ್ಲೆಸೆಂಟ್ ಗ್ರೋವ್‌ನಲ್ಲಿರುವ ಗ್ಯಾಸ್ ಸ್ಟೇಷನ್ ಕನ್ವೀನಿಯನ್ಸ್ ಸ್ಟೋರ್‌ನಲ್ಲಿ ಈ ಘಟನೆ ಸಂಭವಿಸಿದೆ. ಭಾನುವಾರ ಯೋಗ ದಿನದ ಕಾರ್ಯಕ್ರಮಕ್ಕಾಗಿ ಡಲ್ಲಾಸ್‌ನಲ್ಲಿದ್ದ ಕಾನ್ಸುಲ್ ಜನರಲ್ ಡಿ ಸಿ ಮಂಜುನಾಥ್, ಈ ಹಿಂದೆ ವಿವಿಧ ಮೂಲಗಳು ವರದಿ ಮಾಡಿದಂತೆ ಅರ್ಕಾನ್ಸಾಸ್‌ನಲ್ಲಿ ನಡೆದ ಗುಂಡಿನ ದಾಳಿಗೂ ಈ ಘಟನೆಗೂ ಯಾವುದೇ ಸಂಬಂಧವಿಲ್ಲ ಎಂದು ಪಿಟಿಐಗೆ ಖಚಿತಪಡಿಸಿದ್ದಾರೆ. ಗೋಪಿಕೃಷ್ಣ ಅವರ ಕುಟುಂಬಕ್ಕೆ ಸಂತಾಪ ಸೂಚಿಸಿದ ಮಂಜುನಾಥ್, “ದಲ್ಲಾಸ್, ಪ್ಲೆಸೆಂಟ್ ಗ್ರೋವ್‌ನಲ್ಲಿ ನಡೆದ ದರೋಡೆ ಘಟನೆಯಲ್ಲಿ ಭಾರತೀಯ ಪ್ರಜೆ ಗೋಪಿ ಕೃಷ್ಣ ದಾಸರಿ ಅವರ ದುರಂತ ನಿಧನದ ಬಗ್ಗೆ ತಿಳಿದು ನಮಗೆ ತುಂಬಾ ದುಃಖವಾಗಿದೆ ಮತ್ತು ಸ್ಥಳೀಯ ಕುಟುಂಬ ಸದಸ್ಯರೊಂದಿಗೆ…

Read More

ದಕ್ಷಿಣ ಕೊರಿಯಾದ ಹ್ವಾಸಿಯೊಂಗ್ ನಲ್ಲಿರುವ ಮೂರು ಅಂತಸ್ತಿನ ಲಿಥಿಯಂ ಬ್ಯಾಟರಿ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಅಗ್ನಿದುರಂತದಲ್ಲಿ ಕನಿಷ್ಠ 21 ಜನರು ಸಾವನ್ನಪ್ಪಿದ್ದು ಸಾಕಷ್ಟು ಮಂದಿ ಕಟ್ಟಡದಲ್ಲಿ ಸಿಕ್ಕಿಬಿದ್ದಿದ್ದಾರೆ ಎಂದು ಶಂಕಿಸಲಾಗಿದೆ. ದೇಶದ ವಾಯುವ್ಯ ಭಾಗದಲ್ಲಿರುವ ಗ್ಯೋಂಗಿ ಪ್ರಾಂತ್ಯದ ಹ್ವಾಸಿಯೊಂಗ್ನಲ್ಲಿ ಈ ಘಟನೆ ನಡೆದಿದೆ. ಬೆಂಕಿಯನ್ನು ನಿಯಂತ್ರಿಸಲು 140 ಕ್ಕೂ ಹೆಚ್ಚು ಅಗ್ನಿಶಾಮಕ ಸಿಬ್ಬಂದಿಯನ್ನು ಕಾರ್ಖಾನೆಗೆ ಕಳುಹಿಸಲಾಗಿದೆ. ಆದಾಗ್ಯೂ, ಬ್ಯಾಟರಿ ಸೆಲ್ ಗಳ ನಿರಂತರ ಸ್ಫೋಟದಿಂದಾಗಿ ಸಿಬ್ಬಂದಿ ಆವರಣವನ್ನು ಪ್ರವೇಶಿಸಲು ಸಾಧ್ಯವಿಲ್ಲ ಎಂದು ಅಗ್ನಿಶಾಮಕ ಮುಖ್ಯಸ್ಥರು ವರದಿ ಮಾಡಿದ್ದಾರೆ. ಸಾವುನೋವುಗಳು ಹೆಚ್ಚಾಗಬಹುದು ಎಂಬ ಆತಂಕದ ನಡುವೆ ಸರ್ಕಾರಿ ಅಧಿಕಾರಿಗಳು ಎರಡನೇ ಅತ್ಯುನ್ನತ ಮಟ್ಟದ ತುರ್ತು ಪರಿಸ್ಥಿತಿಯನ್ನು ಘೋಷಿಸಿದರು. ಕಟ್ಟಡದಲ್ಲಿ ಸಿಲುಕಿರುವ ಜನರನ್ನು ಹುಡುಕಲು ಮತ್ತು ಶವಗಳನ್ನು ಹೊರತೆಗೆಯಲು ರಕ್ಷಣಾ ತಂಡಗಳು ಮತ್ತು ಸಲಕರಣೆಗಳನ್ನು ನಿಯೋಜಿಸಲು ದಕ್ಷಿಣ ಕೊರಿಯಾದ ಅಧ್ಯಕ್ಷ ಯೂನ್ ಸುಕ್ ಯೆಯೋಲ್ ತುರ್ತು ಸೂಚನೆಗಳನ್ನು ನೀಡಿದ್ದಾರೆ. ನಾವು ಇನ್ನೂ ಒಳಗೆ ಹೋಗಿ ರಕ್ಷಣಾ ಕಾರ್ಯಾಚರಣೆ ನಡೆಸಲು ಸಾಧ್ಯವಾಗುತ್ತಿಲ್ಲ. ಬೆಂಕಿಯನ್ನು ನಿಯಂತ್ರಣಕ್ಕೆ ತಂದ…

Read More

ಟಾಲಿವುಡ್ ನಟ ನಾಗಾರ್ಜನ್ ಗೆ ಲಕ್ಷಾಂತರ ಅಭಿಮಾನಿಗಳಿದ್ದಾರೆ. ಅವರ ಜೊತೆ ಒಂದೇ ಒಂದು ಫೋಟೊ ತೆಗೆಸಿಕೊಳ್ಳಬೇಕು ಎಂದು ಕಾದು ಕೂತಿರ್ತಾರೆ. ಅಂತೆಯೇ ಇತ್ತೀಚೆಗೆ ವಿಶೇಷ ಚೇತನ ಅಭಿಮಾನಿಯೋರ್ವ ನಾಗಾರ್ಜುನ್ ವಿಮಾನ ನಿಲ್ದಾಣದಿಂದ ಹೊರಬರುತ್ತಿರುವ ಅವರ ಜೊತೆ ಫೋಟೋ ತೆಗೆಸಿಕೊಳ್ಳಲು ಓಡೋಡಿ ಬಂದಿದ್ದಾರೆ. ಆದರೆ ಅವರನ್ನು ನಾಗಾರ್ಜುನ ಬಾಡಿಗಾರ್ಡ್​ ತಳ್ಳಿ ಬೀಳಿಸಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಈ ವಿಡಿಯೋ ವೈರಲ್​ ಆಗಿದ್ದು, ನೆಟ್ಟಿಗರು ಕ್ಲಾಸ್​ ತೆಗೆದುಕೊಳ್ಳುತ್ತಿದ್ದಾರೆ. ವೈರಲ್​ ಆಗಿರುವ ವಿಡಿಯೋ ನೋಡಿದ ಬಳಿಕ ಸ್ವತಃ ನಾಗಾರ್ಜುನ ಅವರು ಕ್ಷಮೆ ಕೇಳಿದ್ದಾರೆ. ‘ನಿಮ್ಮ ಮಾನವೀಯತೆ ಎಲ್ಲಿ ಹೋಯಿತು ನಾಗಾರ್ಜುನ ಅವರೇ?’ ಎಂಬ ಕ್ಯಾಪ್ಷನ್​ನೊಂದಿಗೆ ಸೋಶಿಯಲ್​ ಮೀಡಿಯಾದಲ್ಲಿ ಈ ವಿಡಿಯೋವನ್ನು ಶೇರ್​ ಮಾಡಿಕೊಳ್ಳಲಾಗಿದೆ. ಇದಕ್ಕೆ ಜನರು ಬಗೆಬಗೆಯಲ್ಲಿ ಕಮೆಂಟ್​ ಮಾಡಿದ್ದು ನಾಗಾರ್ಜುನ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. “ಇದು ನನ್ನ ಗಮನಕ್ಕೆ ಬಂದಿದೆ. ಈ ರೀತಿ ಆಗಬಾರದಿತ್ತು. ಆ ವ್ಯಕ್ತಿಗೆ ನಾನು ಕ್ಷಮೆಯಾಚಿಸುತ್ತೇನೆ. ಮುಂದೆ ಹೀಗಾಗದಂತೆ ಸೂಕ್ತ ಕ್ರಮ ಕೈಗೊಳ್ಳುತ್ತೇನೆʼʼಎಂದು ಬರೆದುಕೊಂಡಿದ್ದಾರೆ. ಈ ವಿಡಿಯೊ ವೈರಲ್‌ ಆಗುತ್ತಿದ್ದಂತೆ ನೆಟ್ಟಿಗರು ನಾಗಾರ್ಜುನ…

Read More

ನಟಿ ಪವಿತ್ರಾ ಗೌಡಗೆ ಅಶ್ಲೀಲ ಪೋಟೋ ಮತ್ತು ಸಂದೇಶ ಕಳುಹಿಸುತ್ತಿದ್ದ ಆರೋಪದ ಹಿನ್ನಲೆಯಲ್ಲಿ ರೇಣುಕಾಸ್ವಾಮಿಯನ್ನು ಕೊಲೆ ಮಾಡಲಾಗಿದೆ. ಈ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಮಂದಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ರೇಣುಕಾಸ್ವಾಮಿ ಫೇಕ್‌ ಅಕೌಂಟ್‌ಗಳ ಮೂಲಕ ಮೆಸೇಜ್‌ ಕಳುಹಿಸುತ್ತಿದ್ದ ಎಂದು ಮತ್ತೊಬ್ಬ ಕಿರುತೆರೆ ನಟಿ ಚಿತ್ರಾಲ್ ರಂಗಸ್ವಾಮಿ ವಿಡಿಯೋ ಮೂಲಕ ತಿಳಿಸಿದ್ದಾರೆ. ‘ರೇಣುಕಾಸ್ವಾಮಿ ಕುಟುಂಬಕ್ಕೆ ದೇವರು ಆದಷ್ಟು ಶಕ್ತಿ ಕೊಡಲಿ. ಮಾರ್ಚ್‌ ತಿಂಗಳಿನಲ್ಲಿ ರೇಣುಕಾಸ್ವಾಮಿ ಎಂಬ ವ್ಯಕ್ತಿ ವಿರುದ್ಧ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು ಏಕೆಂದರೆ ಮೂರ್ನಾಲ್ಕು ಹೆಣ್ಣು ಮಕ್ಕಳಿಗೆ ಅದೇ ರೀತಿ ಮೆಸೇಜ್ ಮಾಡುತ್ತಿದ್ದಾನೆ ಎಂದು. ಆತನ ಖಾತೆಯ ಹೆಸರು ಗೌತಮ್ ಎಂದಿತ್ತು. ನನಗೆ ಶಿಶ್ನದ ಫೋಟೋ, ಹಸ್ತಮೈಥುನ ಮಾಡಿಕೊಳ್ಳುವ ಫೋಟೋ ಅಥವಾ ವಿಡಿಯೋ ಬಂದ್ರೆ ತಕ್ಷಣವೇ ಡಿಲೀಟ್ ಮಾಡುತ್ತೀನಿ. ಈ ಅಕೌಂಟ್ ಹೆಸರನ್ನು ನೋಡಿದಾಗ ಎಲ್ಲೋ ನೋಡಿದ್ದೀನಿ ಅಂತ ನೆನಪಾಗಿ ನನ್ನ ಬ್ಲಾಕ್‌ ಲಿಸ್ಟ್‌ ಓಪನ್ ಮಾಡಿ ನೋಡಿದಾಗ ರೇಣುಕಾಸ್ವಾಮಿ ಅಕೌಂಟ್…

Read More

ಭಾರತೀಯ ಬಾಹ್ಯಾಕಾಶ ಸಂಸ್ಥೆ(ಇಸ್ರೋ) ಸಾಧನೆಗೆ ಮತ್ತೊಂದು ಗರಿ ಸೇರಿಕೊಂಡಿದೆ. ಮರುಬಳಕೆ ಉಡಾವಣೆ ವಾಹನಗಳ ಪ್ರಯೋಗದಲ್ಲಿ ಸತತ 3ನೇ ಹಾಗೂ ಅಂತಿಮ ಪ್ರಯೋಗದಲ್ಲಿ ಇಸ್ರೋ ಯಶಸ್ವಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ನಡೆದ ಮರುಬಳಕೆ ಮಾಡಬಹುದಾದ ಲಾಂಚ್ ವೆಹಿಕಲ್ ಪುಷ್ಪಕ್ ಲ್ಯಾಂಡಿಂಗ್ ಪ್ರಯೋಗ ಯಶಸ್ವಿಯಾಗಿದೆ.   ಪುಷ್ಪಕ್ ಲ್ಯಾಂಡಿಂಗ್ ಪ್ರಯೋಗದ ವಿಡಿಯೋವನ್ನು ಇಸ್ರೋ ಹಂಚಿಕೊಂಡಿದೆ. ಪುಷ್ಪಕ್ ಲಾಂಚ್ ವಾಹನವನ್ನು ಭಾರತೀಯ ವಾಯು ಸೇನೆಯ ಚಿನೂಕ್ ಹೆಲಿಕಾಪ್ಟರ್ 4.5 ಕಿಲೋಮೀಟರ್ ಅಲ್ಟಿಟ್ಯೂಡ್ ಮೇಲಕ್ಕೊಯ್ದು ಬಿಡಲಾಗಿತ್ತು. ಪುಷ್ಪಕ್ ಸ್ವಾಯತ್ತವಾಗಿ ಭೂಮಿಯತ್ತ ಇಳಿಯತೊಡಗಿತ್ತು. ಈ ವೇಳೆ ಇಸ್ರೋ ನಿಯಂತ್ರಕದ ಮೂಲಕ ಪುಷ್ಪಕ್ ನಿಯಂತ್ರಣ ಮಾಡಿ ಸುರಕ್ಷಿತವಾಗಿ ಲ್ಯಾಂಡ್ ಆಗುವಂತೆ ಮಾಡಿದ್ದಾರೆ. ಚಳ್ಳಕೆರೆಯ ರನ್‌ ವೇ ಮೇಲೆ ಸರಾಗವಾಗಿ ಯಾವುದೇ ಆತಂಕವಿಲ್ಲದೆ ಲ್ಯಾಂಡ್‌ ಆಯಿತು. ತಕ್ಷಣವೇ ಬ್ರೇಕ್‌ ಪ್ಯಾರಾಚೂಟ್‌, ಲ್ಯಾಂಡಿಂಗ್‌ ಗೇರ್‌ ಬ್ರೇಕ್‌ ಹಾಗೂ ನೋಸ್‌ ವ್ಹೀಲ್‌ ಸ್ಟೀರಿಂಗ್ ವ್ಯವಸ್ಥೆಯ ಮೂಲಕ ಪುಷ್ಕರ್ ವಾಹನ ನಿಲುಗಡೆಯಾಯಿತು ಎಂದು ಇಸ್ರೋ ತಿಳಿಸಿದೆ. ಈಗಾಗಲೇ ಎರಡು ಬಾರಿ ಪ್ರಯೋಗ  ಮಾಡಲಾಗಿತ್ತು. ಇದೀಗ 3ನೇ…

Read More

ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ ಹಾಗೂ ನಟ ಝಹೀರ್ ಇಕ್ಬಾಲ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಆಪ್ತರ ಸಮ್ಮುಖದಲ್ಲಿ ಮದುವೆಯಾದ ಜೋಡಿ ಬಳಿಕ ಅದ್ದೂರಿಯಾಗಿ ರಿಸೆಪ್ಷನ್ ಹಮ್ಮಿಕೊಂಡಿದ್ದರು. ಕೆಲವು ವರ್ಷಗಳಿಂದ ಡೇಟಿಂಗ್ ಮಾಡ್ತಿದ್ದ ನಟಿ ಸೋನಾಕ್ಷಿ ಸಿನ್ಹಾ ಹಾಗೂ ನಟ ಜಹೀರ್ ಇಕ್ಬಾಲ್ ಜೊತೆ ಸಿವಿಲ್ ಮ್ಯಾರೇಜ್ ಮಾಡಿಕೊಂಡಿದ್ದಾರೆ. ಮದುವೆಯ ನಂತರ ಪತಿಯೊಂದಿಗೆ ತಮ್ಮ ಮೊದಲ ಫೋಟೋವನ್ನು ನಟಿ ಸೋನಾಕ್ಷಿ ಹಂಚಿಕೊಂಡಿದ್ದಾರೆ. ಜೂನ್ 23 ರಂದು ಭಾನುವಾರ ಮುಂಬೈನಲ್ಲಿ ಸೋನಾಕ್ಷಿ ಸಿನ್ಹಾ ಮತ್ತು ಜಹೀರ್ ಇಕ್ಬಾಲ್ ನಾಗರಿಕ ವಿವಾಹವಾಗಿದ್ದಾರೆ. ಸಲ್ಮಾನ್ ಖಾನ್ ಅವರ ಸಹೋದರಿ ಅರ್ಪಿತಾ ಖಾನ್ ಮತ್ತು ಅವರ ಪತಿ ಆಯುಷ್ ಶರ್ಮಾ ಸೇರಿದಂತೆ ಅನೇಕ ಗಣ್ಯರು ಹಾಜರಾಗಿ ನವ ಜೋಡಿಗೆ ಶುಭ ಹಾರೈಸಿದ್ದಾರೆ. ಹಿರಿಯ ನಟ ಶತ್ರುಘ್ನ ಸಿನ್ಹಾ ಅವರ ಮುದ್ದಿನ ಮಗಳು ಸೋನಾಕ್ಷಿ ಸಿನ್ಹಾ ಇಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮದುವೆ ಸಂದರ್ಭದಲ್ಲಿ ವೇದಿಕೆಗೆ ಕರೆದುಕೊಂಡು ಹೋಗ್ತಿದ್ದ ಸಹೋದರರನ್ನು ಕಂಡು ನಟಿ ಸೋನಾಕ್ಷಿ ಭಾವುಕರಾಗಿ ಕಣ್ಣೀರು ಹಾಕಿದ್ದು ಈ…

Read More

ರಷ್ಯಾದ ಉತ್ತರ ಕಾಕಸಸ್ ಪ್ರದೇಶದ ಡಾಗೆಸ್ತಾನ್‌ ನಲ್ಲಿ ಭಾನುವಾರ ಅಪರಿಚಿತ ಬಂಧೂಕುದಾರಿಗಳು ಅಪ್ರಚೋದಿತವಾಗಿ ಎರಡು ಚರ್ಚ್‌ ಮತ್ತು ಪೊಲೀಸ್ ಪೋಸ್ಟ್ ಮೇಲೆ ಗುಂಡು ಹಾರಿಸಿದ್ದಾರೆ. ಪರಿಣಾಮ ಪೊಲೀಸರು ಮತ್ತು ಪಾದ್ರಿ ಸೇರಿದಂತೆ ಕನಿಷ್ಠ 15 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಅಲ್ಲಿನ ಗವರ್ನರ್ ಸೆರ್ಗೆಯ್ ಮೆಲಿಕೋವ್ ತಿಳಿಸಿದ್ದಾರೆ. ʼʼಶಸ್ತ್ರಸಜ್ಜಿತ ಉಗ್ರಗಾಮಿಗಳು 15ಕ್ಕೂ ಹೆಚ್ಚು ಪೊಲೀಸರು ಮತ್ತು ಆರ್ಥೊಡಾಕ್ಸ್ ಪಾದ್ರಿ ಸೇರಿದಂತೆ ಹಲವು ನಾಗರಿಕರನ್ನು ಹತ್ಯೆ ಮಾಡಿದ್ದಾರೆʼʼ ಎಂದು ಸೋಮವಾರ ಗವರ್ನರ್ ಸೆರ್ಗೆಯ್ ಮೆಲಿಕೋವ್ ಮಾಹಿತಿ ನೀಡಿದ್ದಾರೆ. ಡಾಗೆಸ್ತಾನ್‌ನ ಅತಿದೊಡ್ಡ ನಗರ ಮಖಚ್ಕಲಾ ಮತ್ತು ಕರಾವಳಿ ನಗರ ಡರ್ಬೆಂಟ್‌ನಲ್ಲಿ ಏಕಕಾಲದಲ್ಲಿ ದಾಳಿಗಳು ನಡೆದಿದ್ದು, ಸೆರ್ಗೆಯ್ ಮೆಲಿಕೊವ್ ಇದನ್ನು “ಭಯೋತ್ಪಾದಕ ದಾಳಿ” ಎಂದು ಕರೆದಿದ್ದಾರೆ. ಮಖಚ್ಕಲಾದಲ್ಲಿ ನಾಲ್ವರು ಮತ್ತು ಡರ್ಬೆಂಟ್‌ನಲ್ಲಿ ಇಬ್ಬರು ಬಂದೂಕುಧಾರಿಗಳನ್ನು ಪೊಲೀಸ್ ಸಿಬ್ಬಂದಿ ಹೊಡೆದುರುಳಿಸಿದ್ದಾರೆ. ಎರಡು ಆರ್ಥೊಡಾಕ್ಸ್ ಚರ್ಚ್‌ಗಳು, ಸಿನಗಾಗ್ ಮತ್ತು ಟ್ರಾಫಿಕ್ ಪೋಲಿಸ್ ಪೋಸ್ಟ್ ಅನ್ನು ಗುರಿಯಾಗಿಸಿ ಈ ದಾಳಿ ನಡೆದಿದೆ. ಮೃತರಲ್ಲಿ ಪೊಲೀಸ್ ಅಧಿಕಾರಿಗಳಲ್ಲದೆ, ಡರ್ಬೆಂಟ್‌ನಲ್ಲಿ 40…

Read More

ವಿಶ್ವದ ಬಿಲಿಯನೇರ್, ಸ್ಪೇಸ್ ಎಕ್ಸ್ ಮತ್ತು ಟೆಸ್ಲಾ ಮುಖ್ಯಸ್ಥ, ಶ್ರೀಮಂತ ಉದ್ಯಮಿ ಎಲೋನ್ ಮಸ್ಕ್ ಇದೀಗ 11ನೇ ಮಗುವಿನ ತಂದೆಯಾಗಿದ್ದಾರೆ. ಎಲಾನ್ ಮಸ್ಕ್ ಅವರ ಅವರ ಮೊದಲ ಹೆಂಡತಿ, ಲೇಖಕ ಜಸ್ಟಿನ್ ಮಸ್ಕ್ಗೆ ಐದು ಮಕ್ಕಳಿಗೆ ಜನ್ಮ ನೀಡಿದ್ದರು. ನಂತರ ಇಬ್ಬರ ಮಧ್ಯೆ ಮನಸ್ತಾಪ ಉಂಟಾದ ಕಾರಣ ಇಬ್ಬರು ಬೇರ್ಪಟ್ಟಿದ್ದರು. ನಂತರ ಮಸ್ಕ್‌ ಸಂಗೀತಗಾರ್ತಿ ಗ್ರಿಮ್ಸ್‌ನೊಂದಿಗೆ ಡೇಟಿಂಗ್ ಮಾಡಿ ಮೂರು ಮಕ್ಕಳಿಗೆ ಜನ್ಮ ನೀಡಿದ್ರು. ಇದೀಗ ಮಸ್ಕ್ ಕಂಪನಿಯ ಉದೋಗಿಯಾದ ಶಿವೋನ್ ಜಿಲಿಸ್ ಅವರರೊಂದಿಗೆ ಸಂಬಂಧ ಹೊಂದಿದ್ದಾರೆ. ಈ ಮೊದಲು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದ ಶಿವೋನ್ ಇದೀಗ ಮತ್ತೊಂದು ಮಗುವಿಗೆ ಜನ್ಮ ನೀಡಿದ್ದಾರೆ. ಆದ್ರೆ ಈ ಬಗ್ಗೆ ಮಸ್ಕ್ ಎಲ್ಲಿಯೂ ಮಾಹಿತಿ ನೀಡಿಲ್ಲ. ಎಲಾನ್ ಮಸ್ಕ್ ತಮ್ಮ ಮಕ್ಕಳಿಗೆ ಗ್ರಿಫಿನ್ ಮಸ್ಕ್, ಕ್ಸೇವಿಯರ್, ಡೇಮಿಯನ್, ವಿಲ್ಸನ್, ಕಾಯ್, ಸ್ಯಾಕ್ಸನ್, X Ash A Twelve, ಟೆಕ್ನೋ ಮೆಕಾನಿಕಸ್ ಮಸ್ಕ್, ಆಕ್ಸಾ ಡಾರ್ಕ್ ಸೈಡೆರಲ್ ಮಸ್ಕ್, ಕಾಯ್ ಮಸ್ಕ್ ಎಂದು ಹೆಸರಿಟ್ಟಿದ್ದಾರೆ.

Read More