Author: Author AIN

ದರ್ಶನ್ ಎಂಡ್ ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಭೀಕರವಾಗಿ ಹತ್ಯೆಯಾಗಿ ಈಗಾಗ್ಲೆ ಹತ್ತು ದಿನ ಕಳೆದಿದೆ. ರೇಣುಕಾಸ್ವಾಮಿ ಮೃತಪಟ್ಟು 10 ದಿನಗಳು ಕಳೆದಿದ್ದರೂ ಇದುವರೆಗೂ ರೇಣುಕಾಸ್ವಾಮಿ ಮೊಬೈಲ್ ಮಾತ್ರ ಪತ್ತೆಯಾಗಿಲ್ಲ. ಜೂನ್ 8ರಂದು ಸಂಜೆ ‘ಡಿ’ ಗ್ಯಾಂಗ್ ಪಟ್ಟಣಗೆರೆ ಶೆಡ್‌ನಲ್ಲಿ ರೇಣುಕಾಸ್ವಾಮಿಯನ್ನು ಕೊಲೆ ಮಾಡಿತ್ತು. ಅದೇ ದಿನ ಬೆಳಗ್ಗೆ ಆರೋಪಿಗಳು ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿ ಕರೆತಂದಿದ್ದಾರೆ. ಅಂದು ಬೆಳಗ್ಗೆ ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಮೊಬೈಲ್ ಸ್ವಿಚ್‌ಆಫ್ ಆಗಿತ್ತು. ಮಧ್ಯಾಹ್ನದ ವೇಳೆ ಆರ್‌ಆರ್ ನಗರದಲ್ಲಿ ರೇಣುಕಾಸ್ವಾಮಿ ಮೊಬೈಲ್ ಅನ್ನು ಸ್ವಿಚ್‌ಆನ್ ಮಾಡಲಾಗಿದೆ. ಜೂನ್ 8ರ ಸಂಜೆ ವೇಳೆಗೆ ಪಟ್ಟಣಗೆರೆಯಲ್ಲಿ ಮತ್ತೆ ಮೊಬೈಲ್ ಸ್ವಿಚ್‌ಆಫ್ ಆಗಿದೆ.  ಅದೇ ದಿನ ತಡರಾತ್ರಿ ರೇಣುಕಾಸ್ವಾಮಿಯನ್ನು ಹತ್ಯೆಗೈದು ಆರೋಪಿಗಳು ಮೃತದೇಹವನ್ನು ಸುಮನಹಳ್ಳಿ ಸತ್ವಾ ಅಪಾರ್ಟ್ಮೆಂಟ್ ಬಳಿ ಇರುವ ರಾಜಕಾಲುವೆ ಬಳಿ ಬಿಸಾಕಿದ್ದರು. ನಂತರ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ಆರೋಪಿಗಳು ಶರಣಾಗಿದ್ದಾರೆ. ಆದರೆ ಪೊಲೀಸ್ ವಿಚಾರಣೆ ವೇಳೆ ರೇಣುಕಾಸ್ವಾಮಿ ಮೊಬೈಲ್ ಅನ್ನು ಸುಮನಹಳ್ಳಿ ರಾಜ ಕಾಲುವೆಗೆ ಬಿಸಾಕಿದ್ದಾಗಿ ಹೇಳಿದ್ದಾರೆ. ಈ ಹಿನ್ನೆಲೆ ಕಳೆದ…

Read More

ಕೋವಿಡ್ 19 ಸಾಂಕ್ರಾಮಿಕದ ನಂತರ ಜಪಾನ್‌ನಲ್ಲಿ ಅಪಾಯಕಾರಿ ಬ್ಯಾಕ್ಟೀರಿಯಾ ಸೋಂಕು ಪತ್ತೆಯಾಗಿದೆ. ಈ ಸೋಂಕಿನ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಇದರಿಂದ ಜನ ಕಂಗಾಲಾಗಿದ್ದಾರೆ. ಒಮ್ಮೆ ಈ ಸೋಂಕು ತಗುಲಿದರೆ ಮನುಷ್ಯ 48 ಗಂಟೆಗಳಲ್ಲಿ ಸಾಯಬಹುದು ಎಂದು ವರದಿಗಳು ತಿಳಿಸಿವೆ. ಅತ್ಯಂತ ಅಪರೂಪದ ಫ್ಲಶ್-ತಿನ್ನುವ ಬ್ಯಾಕ್ಟೀರಿಯಾ ಜಪಾನ್‌ನಲ್ಲಿ ಪತ್ತೆಯಾಗಿದೆ. ದಿನದಿಂದ ದಿನಕ್ಕೆ ಈ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಆತಂಕ ಸೃಷ್ಟಿಸಿದೆ. ಈ ಮಾರಕ ಬ್ಯಾಕ್ಟೀರಿಯಾಗಳು ಸ್ಪೆಕ್ಟ್ರೋಕೊಕಲ್ ಟಾಕ್ಸಿಕ್ ಶಾಕ್ ಸಿಂಡ್ರೋಮ್ ಅನ್ನು ಉಂಟುಮಾಡುತ್ತವೆ. ಇದು ಯಾವುದೇ ಸಮಯದಲ್ಲಿ ಮಾರಕವಾಗಬಹುದು. ಸೋಂಕು ತಗುಲಿದ 48 ಗಂಟೆಗಳಲ್ಲಿ ರೋಗಿಯು ಸಾಯಬಹುದು ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಈ ವರ್ಷ 2024 ರಿಂದ ಜೂನ್ ವರೆಗೆ 977 STSS ಪ್ರಕರಣಗಳು ಜಪಾನ್‌ನಲ್ಲಿ ವರದಿಯಾಗಿವೆ. ಕಳೆದ ವರ್ಷ 941 ಪ್ರಕರಣಗಳು ಬೆಳಕಿಗೆ ಬಂದಿದ್ದವು. ರಾಷ್ಟ್ರೀಯ ಸಾಂಕ್ರಾಮಿಕ ರೋಗಗಳ ಸಂಸ್ಥೆಯ ಪ್ರಕಾರ, ಇದೇ ಪ್ರಮಾಣದಲ್ಲಿ ಪ್ರಕರಣಗಳು ಹೆಚ್ಚಾದರೆ, ಈ ವರ್ಷ ಅದು 2500 ಪ್ರಕರಣಗಳನ್ನು ತಲುಪಬಹುದು. ಸಾವಿನ…

Read More

ಸಂಭ್ರಮಾಚರಣೆ ವೇಳೆ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಮೆರಿಕದ ಟೆಕ್ಸಾಸ್ ನ ನಾರ್ಥ್ ಆಸ್ಟಿನ್‌ನ ಓಲ್ಡ್ ಸೆಲ್ಟರ್ಸ್ ಪಾರ್ಕ್‌ನಲ್ಲಿ ಘಟನೆ ನಡೆದಿದೆ. ಓಲ್ಡ್ ಸೆಲ್ಟರ್ಸ್ ಪಾರ್ಕ್‌ನಲ್ಲಿ ಜೂನ್‌ ಟಿಂತ್ ಸಂಭ್ರಮಾಚರಣೆ ನಡೆಯುತ್ತಿತ್ತು. ಈ ವೇಳೆ ಎರಡು ಗುಂಪಿನ ನಡುವೆ ವಾಗ್ವಾದ ಆರಂಭವಾಗಿದೆ. ಗುಂಪಿನಲ್ಲಿದ್ದ ಅಪರಿಚಿತ ವ್ಯಕ್ತಿ ಗುಂಡಿನ ದಾಳಿ ಮಾಡಿದ್ದ. ಇದರಿಂದ ಇಬ್ಬರು ಸ್ಥಳದಲ್ಲೇ ಮೃತಪಟ್ಟು 9 ಜನ ಗಾಯಗೊಂಡಿದ್ದಾರೆ ಎಂದು ರೌಂಡ್ ರಾಕ್ ಪ್ರದೇಶದ ಪೊಲೀಸ್ ಮುಖ್ಯಸ್ಥ ಅಲೇನ್ ಬ್ಯಾಂಕ್ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ. ಸುದ್ದಿ ತಿಳಿದು ಕೂಡಲೇ ಸ್ಥಳಕ್ಕೆ ಪೊಲೀಸ್ ದೌಡಾಯಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿದ್ದರು. ಆದರೆ ಹಂತಕ ನಾಪತ್ತೆಯಾಗಿದ್ದು ಆತನ ಪತ್ತೆಗೆ ನಗರದಲ್ಲಿ ತೀವ್ರ ತಪಾಸಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಘಟನೆಯಲ್ಲಿ ಮೃತಪಟ್ಟವರು ವಾಗ್ವಾದ ನಡೆಸಿದ ಗುಂಪಿಗೆ ಸಂಬಂಧಿಸಿದವರಲ್ಲ ಎಂದು ಅಲೇನ್ ಸ್ಪಷ್ಟಪಡಿಸಿದ್ದಾರೆ.

Read More

ಲೋಕಸಭೆ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು 12 ದಿನಗಳ ಕಳೆದು ಹೋಗಿವೆ. ಸರ್ಕಾರ ರಚನೆಯಾಗಿ ಸಚಿವರು ಅಧಿಕಾರ ಸ್ವೀಕರಿಸಿ ಆಗಿದೆ. ಆದ್ರೀಗ ವಿದ್ಯುನ್ಮಾನ ಮತ ಯಂತ್ರದ ಬಗ್ಗೆ ಚರ್ಚೆ ಶುರುವಾಗಿದೆ. ಇವಿಎಂ ಬಳಕೆ ಬಗ್ಗೆ ಅಪಸ್ವರ ಎತ್ತಿರುವ ಎಲಾನ್ ಮಸ್ಕ್, ಇವಿಎಂ ಹ್ಯಾಕ್ ಮಾಡುವ ಸಾಧ್ಯತೆಯಿದೆ. ಇವಿಎಂ ಬಳಕೆ ಹಿಂಪಡೆಯಬೇಕು ಅಂತಾ ಆಗ್ರಹಿಸಿದ್ದಾರೆ. ಸದ್ಯ ಈ ವಿಚಾರವಾಗಿ ಭಾರತದ ಚುನಾವಣಾ ಆಯೋಗವು ಎಲಾನ್ ಮಸ್ಕ್​ಗೆ ಸವಾಲು ಹಾಕಿದೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಭಾರತದ ಚುನಾವಣಾ ಆಯೋಗ, ಇದು ಅಸಂಬದ್ಧ ಊಹಾಪೋಹವಾಗಿದ್ದು, ಭಾರತೀಯ ಚುನಾವಣೆಗಳ ವಿಶ್ವಾಸಾರ್ಹತೆಯನ್ನು ಕೆಡಿಸುವ ಪ್ರಯತ್ನವಾಗಿದೆ ಎಂದು ಕಿಡಿಕಾರಿದೆ. ಎಲಾನ್ ಮಸ್ಕ್ ಅವರೇ ಭಾರತಕ್ಕೆ ಬಂದು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದ ಚುನಾವಣೆಯಲ್ಲಿ ಬಳಸಲಾದ ಇವಿಎಂಗಳ ಹ್ಯಾಕಿಂಗ್ ಅನ್ನು ಪ್ರದರ್ಶಿಸಲು ನಾವು ನಿಮಗೆ ಸವಾಲು ಹಾಕುತ್ತೇವೆ ಎಂದು ಹೇಳಿದೆ. ದೇಶದ ವಿಪಕ್ಷ ನಾಯಕರು ಮಸ್ಕ್ ಮಾತಿಗೆ ಬೆಂಬಲ ಸೂಚಿಸುತ್ತಿದ್ದಾರೆ. ಈ ಬಗ್ಗೆ ಬರೆದುಕೊಂಡಿರೋ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇವಿಎಂ ಬಳಕೆ…

Read More

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟ ದರ್ಶನ್ ಅವರ ಕರ್ಮ ಕಾಂಡಗಳು ಒಂದೊಂದಾಗೆ ಬಯಲಾಗುತ್ತಿದೆ. ದರ್ಶನ್ ಎಸಗಿದ್ದಾರೆ ಎನ್ನಲಾದ ಕೃತ್ಯಗಳ ಬಗ್ಗೆ ಸಾಕಷ್ಟು ಮಂದಿ ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. ಈ ಬೆನ್ನಲ್ಲೇ ಕಳೆದ 8 ವರ್ಷಗಳ ಹಿಂದೆ ದರ್ಶನ್ ಮ್ಯಾನೇಜರ್ ಏಕಾಏಕಿ ನಾಪತ್ತೆಯಾಗಿದ್ದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿತ್ತು. ಮ್ಯಾನೇಜರ್ ಮಲ್ಲಿ ಕಾಣೆಯಾಗಿದ್ದರ ಹಿಂದೆ ದರ್ಶನ್ ಕೈವಾಡವಿದೆ ಎಂದು ಹೇಳಲಾಗಿತ್ತು. ಇದೀಗ ಮಲ್ಲಿ ಪತ್ರವೊಂದನ್ನು ಬರೆದಿದ್ದು ಆ ಪತ್ರ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕಳೆದ 8 ವರ್ಷದ ಹಿಂದೆ ಮಲ್ಲಿಕಾರ್ಜುನ್ ಬಗ್ಗೆ ಸಾಕಷ್ಟು ಸುದ್ದಿಯಾಗಿತ್ತು. 8 ಕೋಟಿಗಿಂತ ಹೆಚ್ಚು ಹಣ ದುರುಪಯೋಗ ಮಾಡಿಕೊಂಡ ಆರೋಪ ಮಲ್ಲಿಕಾರ್ಜುನ್ ಮೇಲಿತ್ತು. ಆದಾದ ಬಳಿಕ ಮಲ್ಲಿಕಾರ್ಜುನ್ ಏಕಾಏಕಿ ನಾಪತ್ತೆಯಾಗಿದ್ದರು. ಆದಾದ ಮೇಲೆ ಮಲ್ಲಿಕಾರ್ಜುನ್ ಎಲ್ಲಿ ಹೋದರು, ಏನಾದರು ಎನ್ನುವುದು ಯಾರಿಗೂ ಗೊತ್ತಾಗಲಿಲ್ಲ. ಇದೀಗ ದರ್ಶನ್ ಆ್ಯಂಡ್ ಗ್ಯಾಂಗ್ ಅರೆಸ್ಟ್ ಆಗುತ್ತಿದ್ದಂತೆ ಮಲ್ಲಿಕಾರ್ಜುನ್ ವಿಚಾರ ಮತ್ತೆ ಮುನ್ನೆಲೆಗೆ ಬಂದಿತ್ತು. ಇದೀಗ ಅದೇ ಮಲ್ಲಿಕಾರ್ಜುನ್ ಬರೆದಿದ್ದೆ ಎನ್ನಲಾದ…

Read More

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನ ಬಳಿಕ ಅವರ ಹಲವು ಹಳೇ ವಿಡಿಯೋಗಳು ವೈರಲ್ ಆಗುತ್ತಿದೆ. ಕಳೆದ ಕೆಲ ದಿನಗಳ ಹಿಂದೆ ದರ್ಶನ್ ಹಾಗೂ ನಿರ್ಮಾಪಕ ಉಮಾಪತಿ ನಡುವೆ ಸಾಕಷ್ಟು ವಾಗ್ವಾದಗಳು ನಡೆದಿತ್ತು. ಅವುಗಳ ವಿಡಿಯೋಗಳು ಸಾಕಷ್ಟು ವೈರಲ್ ಆಗಿತ್ತು. ಈ ಬೆಳವಣಿಗೆ ನಡುವೆ ಉಮಾಪತಿ ಗೌಡ ಕುಟುಂಬದ ಜೊತೆ ದೇವಸ್ಥಾನ ದರ್ಶನ ಪಡೆಯುತ್ತಿದ್ದಾರೆ. ಧರ್ಮಸ್ಥಳದ ಮಂಜುನಾಥ ಸ್ವಾಮಿ ದರ್ಶನ ಪಡೆದು ಉಮಾಪತಿ ಗೌಡ, ದಕ್ಷಿಣ ಕನ್ನಡದ ಇತರ ಕೆಲ ದೇವಸ್ಥಾನಕ್ಕೂ ಭೇಟಿ ನೀಡಿದ್ದಾರೆ. ಧರ್ಮಸ್ಥಳದಲ್ಲಿ ಮಂಜುನಾಥ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ ಉಮಾಪತಿ ಕುಟುಂಬ ಬಳಿಕ ಧರ್ಮಾಧಿಕಾರಿ ಡಾ.ಡಿ ವಿರೇಂದ್ರ ಹೆಗ್ಗಡೆ ಭೇಟಿಯಾಗಿದ್ದಾರೆ. ಕುಟುಂಬ ಜೊತೆ ಕೆಲ ದೇವಸ್ಥಾನದಲ್ಲಿ ಸಮಯ ಕಳೆದಿದ್ದಾರೆ. ನಟ ದರ್ಶನ್ ಬಂಧನದ ಬಳಿಕ ಉಮಾಪತಿ ನೀಡಿದ್ದ ಹಲವು ಹೇಳಿಕೆಗೆ ವೈರಲ್ ಆಗಿತ್ತು. ದರ್ಶನ್ ಅಭಿನಯದ ರಾಬರ್ಟ್ ಚಿತ್ರದ ನಿರ್ಮಾಪಕರಾಗಿರುವ ಉಮಾಪತಿ ಗೌಡ, ಚಿತ್ರ ಹಾಗೂ ಕೆಲ ವಿಚಾರಕ್ಕೆ ಮನಸ್ತಾಪವಾಗಿತ್ತು. ಪರಿಣಾಮ ನಟ ಹಾಗೂ ನಿರ್ಮಾಪಕ…

Read More

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಬಳಿಕ ನಾಪತ್ತೆಯಾಗಿದ್ದ ಪ್ರಕರಣದ 9ನೇ ಆರೋಪಿಯನ್ನು ಕೊನೆಗೂ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ 19 ಆಗಿದೆ. ರಾಜು ಅಲಿಯಾಸ್‌ ಧನರಾಜು ಬಂಧಿತ ಆರೋಪಿಯಾಗಿದ್ದು, ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.  ಆರೋಪಿ ಧನರಾಜು ಮೃತ ರೇಣುಕಾಸ್ವಾಮಿಗೆ ಮೆಗ್ಗರ್‌ ಡಿವೈಸ್‌ ಬಳಸಿ ಕರೆಂಟ್‌ ಶಾಕ್‌ ನೀಡಿದ್ದ ಎನ್ನಲಾಗಿದೆ. ಎ5 ಆರೋಪಿ ನಂದೀಶ್‌ ಜೊತೆಗೂಡಿ, ಮೃತನಿಗೆ ಕರೆಂಟ್‌ ಶಾಕ್‌ ನೀಡಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಬಂಧಿತ ಆರೋಪಿಯಿಂದ ಕೃತ್ಯಕ್ಕೆ ಬಳಸಿದ್ದ ಮೆಗ್ಗರ್ ಡಿವೈಸ್ ಅನ್ನು ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ. ರೇಣುಕಾಸ್ವಾಮಿಯನ್ನು ಪಟ್ಟಣಗೆರೆ ಶೆಡ್‌ನಲ್ಲಿ ಚಿತ್ರ ಹಿಂಸೆ ನೀಡಿದ್ದರು. ಈ ವೇಳೆ ಎ9 ಆರೋಪಿ ರಾಜು ಹಾಗೂ ಎ5 ಆರೋಪಿ ನಂದೀಶ್ ಇಬ್ಬರು ಸೇರಿ ರೇಣುಕಾಸ್ವಾಮಿಗೆ ಕರೆಂಟ್ ಶಾಕ್ ನೀಡಿದ್ದರು. ತೀವ್ರ ಹಲ್ಲೆ, ಮರ್ಮಾಂಗಕ್ಕೆ ಒದ್ದು ಹಾಗೂ ಕರೆಂಟ್ ಶಾಕ್‌ ನೀಡಿ ರೇಣುಕಾಸ್ವಾಮಿಯನ್ನು ಹತ್ಯೆ ಮಾಡಲಾಗಿತ್ತು. ಮೃತದೇಹ ಮೋರಿಗೆ ಎಸೆದ ಬಳಿಕ ಆರೋಪಿ ರಾಜು ಪರಾರಿಯಾಗಿದ್ದ.…

Read More

ನಟ ದರ್ಶನ್ ಎಂಡ್ ಗ್ಯಾಂಗ್ ನಡೆಸಿದ ರೇಣುಕಾಸ್ವಾಮಿ ಕೊಲೆಯನ್ನು ಸಾಕಷ್ಟು ಮಂದಿ ಟೀಕಿಸಿದ್ದಾರೆ. ಇದೀಗ ಪರಿಷತ್ ಸದಸ್ಯ ಸಿ.ಟಿ.ರವಿ ಘಟನೆಯ ಕುರಿತು ಮಾತನಾಡಿದ್ದು, ನಟ ದರ್ಶನ್ ಪ್ರಕರಣದ ಸುದ್ದಿ ನಾಗರೀಕ ಸಮಾಜ ತಲೆ ತಗ್ಗಿಸುವಂತದ್ದು. ರಾಜಕಾರಣಿಗಳ ಮೇಲಿನ ಟೀಕೆಗೆ ಅದನ್ನೇ ಮಾಡೋ ಹಾಗಿದ್ರೆ ಗಂಟೆಗೊಂದು ಹೆಣ ಬೀಳುತ್ತಿತ್ತು ಎಂದಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಷ್ಟು ಕ್ರೂರ ಮನಸ್ಥಿತಿ ಇರುತ್ತೆ ಅಂತ ಯಾರೂ ಭಾವಿಸಿರಲಿಲ್ಲ. ಸಿನಿಮಾದಲ್ಲಿ ಹೀರೋಗಳಾದವರು ನಿಜ ಜೀವನದಲ್ಲಿ ಹೀರೋಗಳಾಗಿರಲ್ಲ. ದರ್ಶನ್‌ ಪ್ರಕರಣ ನೋಡಿದಾಗ ಅವರು ಸಿನಿಮಾದಲ್ಲಿ ಮಾತ್ರ ಹೀರೋ ಆಗಿದ್ರು ಅನ್ಸತ್ತೆ. ನಮ್ಮ ಪಕ್ಷ ರೇಣುಕಾಸ್ವಾಮಿ ಕುಟುಂಬದ ಜೊತೆ ಇದೆ, ಆ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದರು. ಯಾರಿಗೂ ಕಾನೂನು ಕೈಗೆತ್ತಿಕೊಂಡು ಕ್ರೌರ್ಯ ಮಾಡುವ ಅಧಿಕಾರವಿಲ್ಲ. ಸಾರ್ವಜನಿಕ ಜೀವನದಲ್ಲಿ ಇರುವವರಿಗೆ ಹೆಚ್ಚು ಬದ್ಧತೆ ಇರಬೇಕು. ಆ ಕ್ರೌರ್ಯವನ್ನ ಯಾರೂ ಒಪ್ಪಲು ಸಾಧ್ಯವಿಲ್ಲ. ಅವರಿಗೆ ರಾಜಮರ್ಯಾದೆ, ವಿಶೇಷ ಸವಲತ್ತು ಕೊಡ್ತಿದ್ದಾರೆ ಅನ್ನೋದು ಸಂದೇಶವೇ ಒಳ್ಳೆದಲ್ಲ. ಆ ರೀತಿ ಇದ್ರೆ ಬಲ…

Read More

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದಿನದಿಂದ ದಿನಕ್ಕೆ ಆರೋಪಿಗಳ ಕ್ರೂರ ಮುಖ ಬಯಲಾಗುತ್ತಿದೆ. ಆರಂಭದಲ್ಲಿ ಭಯಪಡಿಸಲು ಹೋಗಿ ಮಾಡಲಾಗಿರುವ ಹತ್ಯೆ ಎನ್ನಲಾಗಿತ್ತು, ಆದರೆ ಪ್ರಕರಣ ಮುಂದುವರೆದಂತೆ ರೇಣುಕಾ ಸ್ವಾಮಿಯನ್ನು ದರ್ಶನ್ ಹಾಗೂ ಗ್ಯಾಂಗ್ ಹೇಗೆಲ್ಲ ಚಿತ್ರಹಿಂಸೆ ಕೊಟ್ಟಿದ್ದಾರೆ ಎಂಬ ಅಂಶಗಳು ಬಹಿರಂಗವಾಗುತ್ತಿವೆ. ರೇಣುಕಾಸ್ವಾಮಿ ಹತ್ಯೆ ಮಾಡುವ ವೇಳೆ ಆರೋಪಿಗಳು ನಡೆದುಕೊಂಡ ರಾಕ್ಷಸ ಕೃತ್ಯ ಒಂದೊಂದಾಗೆ ಬಯಲಾಗುತ್ತಿದೆ. ದರ್ಶನ್ ಮತ್ತು ಗ್ಯಾಂಗ್ ಅನ್ನು ಮತ್ತೆ ಒಂಬತ್ತು ದಿನಗಳ ಕಾಲ ವಶಕ್ಕೆ ಕೋರಿ ಪೊಲೀಸರು ಅರ್ಜಿ ಸಲ್ಲಿಸಿದ್ದರು. ನೃಪತುಂಗ ರಸ್ತೆಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು, ಈ ಹಂತದಲ್ಲಿ ಸರ್ಕಾರದ ವತಿಯಿಂದ ವಿಶೇಷ ಅಭಿಯೋಜಕರಾಗಿ ನೇಮಕವಾಗಿರುವ ಪ್ರಸನ್ನ ಕುಮಾರ್ ಅವರು ಪೊಲೀಸರ ಪರ ವಾದ ಮಂಡಿಸಿದರು.ಈ ವೇಳೆ ರೇಣುಕಾ ಸ್ವಾಮಿಯನ್ನು ಕೊಲ್ಲುವ ಮುಂಚೆ ಆತನಿಗೆ ಕರೆಂಟ್ ಶಾಕ್ ನೀಡಲಾಗಿತ್ತು ಎಂದು ಶಾಕಿಂಗ್ ಹೇಳಿಕೆ ನೀಡಿದ್ದಾರೆ. ನ್ಯಾಯಾಲಯದಲ್ಲಿ ದರ್ಶನ್ ಹಾಗೂ ಗ್ಯಾಂಗ್​ನ ಕ್ರೂರತೆಯ ಬಗ್ಗೆ ಸಣ್ಣ ಸುಳಿವೊಂದನ್ನು ನೀಡಿದ ಹಿರಿಯ ವಕೀಲ ಪ್ರಸನ್ನ ಕುಮಾರ್ ಅವರು ರೇಣುಕಾ…

Read More

ರೇಣುಕಾಸ್ವಾಮಿ ಹತ್ಯೆಯ ಕುರಿತು ದಿನದಿಂದ ದಿನಕ್ಕೆ ಒಂದೊಂದೆ ಮುಖ ಬಲಯಾಗುತ್ತಿದೆ. ರೇಣುಕಾಸ್ವಾಮಿಗೆ ಚಿತ್ರ ಹಿಂಸೆ ನೀಡಿ ಕಲೆ ಮಾಡಿದ ದುಷ್ಕರ್ಮಿಗಳು ಬಳಿಕ ಆತನ ಮೈಮೇಲಿದ್ದ ಒಡವೆಗಳನ್ನು ದೋಚಿರುವುದು ತನಿಖೆಯ ವೇಳೆ ಬಯಲಾಗಿದೆ. ರೇಣುಕಾಸ್ವಾಮಿ ಬರ್ಬರ ಕೊಲೆಯ ಬಳಿಕ ಅವರ ಮೈಮೇಲಿದ್ದ ಚಿನ್ನಾಭರಣವನ್ನು ಕಳವು ಮಾಡಲಾಗಿದೆ. ಪೊಲೀಸರ ತನಿಖೆ ವೇಳೆ ಈ ಸ್ಫೋಟಕ ಮಾಹಿತಿಯನ್ನು ಆರೋಪಿ ರವಿ ಬಾಯ್ಬಿಟ್ಟಿದ್ದಾನೆ. ರೇಣುಕಾಸ್ವಾಮಿ ಮೈಮೇಲಿದ್ದ ಚಿನ್ನವನ್ನು ಆರೋಪಿ ಜಗ್ಗ ದೋಚಿದ್ದಾನೆ ಎಂದು ಪೊಲೀಸರ ಮುಂದೆ ರವಿ ಸತ್ಯ ಬಾಯಿ ಬಿಟ್ಟಿದ್ದಾನೆ. ಸುಮ್ಮನಹಳ್ಳಿ ಬಳಿ ರೇಣುಕಾಸ್ವಾಮಿ ಶವವನ್ನ ಎಸೆದು ಬಳಿಕ ಪೊಲೀಸ್ ಠಾಣೆಗೆ ಶರಣಾಗುವಂತೆ ಹೇಳಿದರು. ಆದರೆ ಭಯದಿಂದ ಠಾಣೆಗೆ ಹೋಗದೆ ಕಾರಿನಲ್ಲಿ ಚಿತ್ರದುರ್ಗಕ್ಕೆ ಬಂದೆ. ಕಾರಿನಲ್ಲಿ ಜಗ್ಗನ ಜೊತೆ ಚಿತ್ರದುರ್ಗಕ್ಕೆ ಬಂದುಬಿಟ್ಟೆ. ಆರೋಪಿ ಜಗ್ಗ ಚಿನ್ನಾಭರಣ ತೆಗೆದುಕೊಂಡು ಬಂದಿದ್ದ ಎಂದು ರವಿ ಹೇಳಿದ್ದಾನೆ.

Read More