Author: Author AIN

ಕೊಲೆ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಅಭಿಮಾನಿಯೊಬ್ಬ ನಗರದ ಪಂಚರ್ ಅಂಗಡಿಯಲ್ಲಿ ಕೆಲಸ ಮಾಡುವ ಯುವಕನಿಗೆ ಜೀವ ಬೆದರಿಕೆ ಹಾಕಿರುವುದು ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಬೆದರಿಕೆ ಹಾಕಿದ್ದರು ಎನ್ನಲಾದ ಆಡಿಯೋ ವೈರಲ್ ಆಗಿದ್ದು, ಯಾದಗಿರಿ ಪೊಲಿಸರು ದರ್ಶನ್ ಅಭಿಮಾನಿ ಸಂಘದ ಅಧ್ಯಕ್ಷ ರಾಜು ಎಂಬಾತನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಗಂಗಾ ನಗರದ ನಿವಾಸಿ ಅಭಿ ಎಂಬ ಯುವಕನಿಗೆ ದರ್ಶನ್ ಅಭಿಮಾನಿ ಸಂಘದ ಜಿಲ್ಲಾಧ್ಯಕ್ಷ ರಾಜು ಇತ್ತೀಚೆಗೆ ಬೆದರಿಕೆ ಹಾಕಿದ್ದರು ಎನ್ನಲಾದ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಆಡಿಯೋದಲ್ಲಿ ರಾಜು, ಬಾಸ್ ಬಗ್ಗೆ ಮಾತನಾಡಿದ್ರೆ ಕೊಲೆ ಮಾಡೋದಾಗಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಅಭಿ, ಬಾಸ್ ಬಾಸ್ ಎಂದು ಬಕೆಟ್ ಯಾಕೆ ಹಿಡಿತೀರಿ, ತಾಯಿ-ತಂದೆಗೆ ಬಕೆಟ್ ಹಿಡಿಯಿರಿ ಎಂದು ಇನ್ಸ್ಟಾಗ್ರಾಮ್‍ನಲ್ಲಿ ಸ್ಟೇಟಸ್ ಹಾಕಿದ್ದ. ಇದರಿಂದ ಸಿಟ್ಟಿಗೆದ್ದ ರಾಜು, ಅಭಿಗೆ ಕರೆ ಮಾಡಿ, ವೀಡಿಯೋ ಡಿಲೀಟ್ ಮಾಡದೇ ಇದ್ರೆ ಜೀವಂತ ಸುಡೋದಾಗಿ ಬೆದರಿಸಿದ್ದಾನೆ. ಜೊತೆಗೆ ಕೂಡಲೇ ಕ್ಷಮೆ ಕೇಳಿ ವೀಡಿಯೋ ಮಾಡಿ…

Read More

ದೊಡ್ಮನೆ ಕುಟುಂಬದ ಕುಡಿ ಯುವರಾಜ್ ಕುಮಾರ್ ವಿಚ್ಚೇದನ ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ. ನಟ ಯುವರಾಜ್ ಕುಮಾರ್ ಪತ್ನಿ ಶ್ರೀದೇವಿ ಮೇಲೆ ಅಗೌರವ, ಮಾನಸಿಕ ಕ್ರೌರ್ಯದ ಆರೋಪ ಹೊರಿಸಿ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಇದು ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು. ಯುವರಾಜ್ ಕುಮಾರ್ ಹಾಗೂ ಸಪ್ತಮಿ ಗೌಡ ನಡುವಿನ ಸಂಬಂಧದಿಂದ ಪತಿ ತನಗೆ ವಿಚ್ಚೇದನ ನೀಡಲು ಮುಂದಾಗಿದ್ದಾರೆ ಎಂದು ಯುವ ಪತ್ನಿ ಆರೋಪಿಸಿದ್ದರು. ಇದೀಗ ಸಪ್ತಮಿ ಗೌಡ ಕೋರ್ಟ್ ಮೆಟ್ಟಿಲೇರಿದ್ದಾರೆ. ಶ್ರೀದೇವಿ ಪತಿ ಯುವ ವಿರುದ್ಧ ಅಕ್ರಮ ಸಂಬಂಧದ ಆರೋಪ ಮಾಡಿದ್ದರು. ಅಲ್ಲದೆ, ಸಪ್ತಮಿ ಗೌಡ ಹೆಸರನ್ನು ಸಹ ಪ್ರಕರಣದಲ್ಲಿ ಎಳೆದು ತಂದಿದ್ದರು. ಸಪ್ತಮಿ ಗೌಡ ಹಾಗೂ ಯುವರಾಜ್ ಪರಸ್ಪರ ಸಂಬಂಧದಲ್ಲಿದ್ದಾರೆ. ತಾವು ಅಮೆರಿಕಕ್ಕೆ ತೆರಳಿದಾಗ ಯುವ ಹಾಗೂ ಸಪ್ತಮಿ ಸಹಜೀವನ ನಡೆಸಿದ್ದಾರೆ ಎಂದು ಶ್ರೀದೇವಿ ಭೈರಪ್ಪ ಆರೋಪ ಮಾಡಿದ್ದರು. ಸಪ್ತಮಿ ಗೌಡ ಅವರಿಗಾಗಿ ನನ್ನನ್ನು ಮನೆಯಿಂದ ಹೊರಗೆ ಹಾಕುವ ಪ್ರಯತ್ನವೂ ನಡೆದಿತ್ತು ಎಂದು ಸಹ ಶ್ರೀದೇವಿ ತಮ್ಮ ವಕೀಲರ ಮೂಲಕ…

Read More

ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್​ , ಪವಿತ್ರಾ ಗೌಡ ಸೇರಿದಂತೆ 17 ಮಂದಿಯನ್ನು ಬಂಧಿಸಲಾಗಿದೆ. ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್​ ಕಳುಹಿಸಿದ ಎಂಬ ಕಾರಣಕ್ಕೆ ರೇಣುಕಸ್ವಾಮಿಯನ್ನು ಅಪಹರಿಸಿ, ಶೆಡ್​ನಲ್ಲಿ ಕೂಡಿ ಹಾಕಿ ಮನಬಂದಂತೆ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ. ದರ್ಶನ್ ಎಂಡ್ ಗ್ಯಾಂಗ್ ನ ಕೃತ್ಯವನ್ನು ಸಾಕಷ್ಟು ಮಂದಿ ಖಂಡಿಸಿದ್ದಾರೆ. ಇದೀಗ ಹಿರಿಯ ರಂಗಕರ್ಮಿ ಹಾಗೂ ರಂಗಾಯಣದ ಮಾಜಿ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಘಟನೆಯನ್ನು ಖಂಡಿಸಿದ್ದಾರೆ. ಗುರು ಅಡ್ಡಂಡ ಕಾರ್ಯಪ್ಪ ಮಾತನಾಡಿ, ನಾನೊಬ್ಬ ಕಲಾವಿದ. ದರ್ಶನ್​ ಕೂಡಾ ಕನ್ನಡ ಸಿನಿಮಾರಂಗದ ಉತ್ಕೃಷ್ಟ ಕಲಾವಿದರಲ್ಲಿ ಮೇರು ನಟನಾಗಿ ಬೇಳೆದವನು. ಈ ಪ್ರಕರಣದಿಂದ ಅವನಿಗೆ ಈ ಸ್ಥಿತಿ ಬಂತಲ್ಲ ಎಂದು ತುಂಬಾ ದೊಡ್ಡ ನೋವಾಗಿದೆ. ನಾನು ಅವನ ಹಿತೈಶಿ ಆಗಿದ್ದೇನೆ. ದರ್ಶನ್ ಅವರ ಆರಂಭಿಕ ಜೀವನ, ಸೌಜನ್ಯ, ಮುಗ್ಧತೆ ಎಲ್ಲಾ ಯಾಕೆ ಮಾಯವಾದವು? ಕೀರ್ತಿಯೆ ಅವನಿಗೆ ಮುಳುವಾಯ್ತಾ? ಅದೇ ಅಹಂಕಾರವಾಯ್ತಾ? ಮದ್ಯಪಾನ ಅವನಿಗೆ ತೊಂದರೆ ಕೋಡ್ತಾ? ಹೆಣ್ಣಿನ ವ್ಯಾಮೋಹ ಮುಳುವಾಯ್ತಾ? ಎನ್ನುವುದು ಪ್ರಶ್ನೆಯಾಗಿದೆ.…

Read More

ಅನುಭವಿ ಡಾಕ್ಟರ್ ಗಳೇ ಕಂಡುಹಿಡಿಯಲು ಹೆಣಗಾಡಿದ ಕಾಯಿಲೆಯನ್ನು ಹತ್ತು ಸೆಕೆಂಡ್ ನಲ್ಲಿ ಕಂಡು ಹಿಡಿದ ಮನೆಕೆಲಸದ ಅಜ್ಜಿ ಸಾಕಷ್ಟು ವರ್ಷ ಅನುಭವ ಹೊಂದಿದ ಡಾಕ್ಟರ್ ಗಳೇ ಕಂಡು ಹಿಡಿಯಲು ಸಾಧ್ಯವಾಗದ ರೋಗವನ್ನು ಜಸ್ಟ್ 10 ಸೆಕೆಂಡ್ ನಲ್ಲಿ ಮನೆ ಕೆಲಸದ ಅಜ್ಜಿ ಕಂಡು ಹಿಡಿದಿರುವ ಘಟನೆ ಕೇರಳದಲ್ಲಿ ನಡೆದಿದೆ. ಈ ಘಟನೆಯನ್ನು ವೈದ್ಯರು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಲಿವರ್ ವೈದ್ಯರು ಎಂದೇ ಕರೆಯಲಾದ ಸಿರಿಯಾಕ್ ಅಬ್ಬಿ ಫಿಲಿಪ್ಸ್ ತಮ್ಮ ಕುಟುಂಬ ಸದಸ್ಯರಲ್ಲೊಬ್ಬರ ರೋಗ ನಿರ್ಣಯವನ್ನು ಪತ್ತೆಹಚ್ಚಲಾಗದೇ ತಲೆಕೆಡಿಸಿಕೊಂಡಿದ್ದರು. ಅವರ ಕುಟುಂಬದ ಹಿರಿಯ ಸದಸ್ಯರೊಬ್ಬರಿಗೆ ಶೀತ, ವಿಪರೀತ ಆಯಾಸ, ಸಂಧಿವಾತ, ವಿಲಕ್ಷಣವಾದ ದದ್ದುಗಳೊಂದಿಗೆ ಜ್ವರ ಕಂಡುಬಂದಿತ್ತು. ವೈದ್ಯರು ರೋಗಿಯ ವೈರಲ್ ಪರೀಕ್ಷೆ, ಹೆಪಟೈಟೀಸ್, ಕೋವಿಡ್-19, ಇನ್ಫ್ಲುಯೆನ್ಸ ಮತ್ತು ಡೆಂಗ್ಯೂ ಮತ್ತು ಎಪ್ಸ್ಟೀನ್ ಬಾರ್ ವೈರಸ್‌ವರೆಗಿನ ಎಲ್ಲಾ ರೀತಿಯ ಪರೀಕ್ಷೆಗಳನ್ನು ನಡೆಸಿದರು. ಆದರೆ ಯಾವ ಪರೀಕ್ಷೆಯೂ ಪಾಸಿಟಿವ್ ಆಗಿ ಬಂದಿರಲಿಲ್ಲ. ರೋಗಿಯ ರೋಗ ನಿರ್ಣಯ ತುಂಬಾ ತಲೆನೋವಾಗಿ ವೈದ್ಯರನ್ನು ಕಾಡಿತ್ತು. ಆದರೆ ಅವರ…

Read More

ದರ್ಶನ್ ಎಂಡ್ ಗ್ಯಾಂಗ್ ನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆಯಾಗಿದ್ದಾರೆ.ಘಟನೆಯ ಕುರಿತು ಸಾಕಷ್ಟು ಮಂದಿ ಪ್ರತಿಕ್ರಿಯೆ ನೀಡಿದ್ದಾರೆ. ಇದೀಗ ಸ್ಯಾಂಡಲ್ ವುಡ್ ನಟಿ ರಮ್ಯಾ ಘಟನೆಯ ಕುರಿತು ಪ್ರತಿಕ್ರಿಯಿಸಿದ್ದು,ಕೃತ್ಯವನ್ನು ಖಂಡಿಸಿದ್ದಾರೆ. ಮಾಧ್ಯಮದ ಜೊತೆ ಮಾತನಾಡಿದ ರಮ್ಯಾ, ನಟರಾಗಿ ಜವಾಬ್ದಾರಿಯುತ ಸ್ಥಾನದಲ್ಲಿ ಸಮಾಜಕ್ಕೆ ಒಳ್ಳೆಯದನ್ನು ನೀಡಬೇಕು. ಅಭಿಮಾನಿಗಳನ್ನು ಬಳಸಿಕೊಂಡು ಕೊಲೆ ಮಾಡುವುದು ಎಷ್ಟು ಸರಿ? ಇಂತಹದ್ದನ್ನು ಸಮರ್ಥಿಸಿಕೊಂಡರೆ ಸಮಾಜಕ್ಕೆ ನಾವು ಕೊಡುವ ಸಂದೇಶ ಏನು? ಕಾನೂನಿಗಿಂತ ಯಾರೂ ದೊಡ್ಡವರಿಲ್ಲ. ಪೊಲೀಸರು ನಿಷ್ಪಕ್ಷಪಾತ ತನಿಖೆ ಮಾಡುತ್ತಾರೆ ಎಂದು ನಂಬಿದ್ದೇನೆ ಎಂದರು. ನಮಗೆ ಬ್ಲಾಕ್ ಎನ್ನುವ ಆಯ್ಕೆ ಇದೆ. ಎಲ್ಲರಿಗೂ ಈ ಆಯ್ಕೆ ಇದೆ. ಯಾರಾದರೂ ಟ್ರೋಲ್ ಮಾಡುತ್ತಿದ್ದರೆ ಮೊದಲು ಬ್ಲಾಕ್ ಮಾಡಿ. ನಾನು ಈ ಹಿಂದೆ ನನ್ನ ಟ್ರೋಲ್ ಮಾಡಿದ ಕೆಲವರ ವಿರುದ್ಧ ದೂರು ನೀಡಿದ್ದೆ. ಪೊಲೀಸರು ಕರೆದು ಎಚ್ಚರಿಕೆ ನೀಡಿದ ಬಳಿಕ ನಾನು ಕೇಸ್ ವಾಪಸ್ ಪಡೆದಿದ್ದೆ. ಈ ಹಿಂದೆ ಹಲವು ಪ್ರಕರಣಗಳಲ್ಲಿ ದರ್ಶನ್ ರಾಜಕೀಯ ಪ್ರಭಾವ ಬೀರಿರಬಹುದು. ಆದರೆ ಈ ಹಂತದಲ್ಲಿ…

Read More

ಜಿ7 ಶೃಂಗ ಸಭೆಯಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿ ಇಟಲಿಗೆ ತೆರಳಿದ್ದರು. ಸಭೆ ಮುಗಿದ ನಂತರ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರು ಮೋದಿ ಅವರೊಂದಿಗೆ ಸೆಲ್ಫಿ ವಿಡಿಯೋ ಮಾಡಿ #Melodi ಎಂದು ಬರೆದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ. ಇಟಲಿಯಲ್ಲಿ ನಡೆದ ಜಿ7 ರಾಷ್ಟ್ರಗಳ ಸಭೆಗೆ ವಿಶೇಷ ಆಹ್ವಾನಿತರಾಗಿ ಮೋದಿ ಹೋಗಿದ್ದರು. ಕಾರ್ಯಕ್ರಮ ಮುಗಿದ ಬಳಿಕ ಮೆಲೋನಿ ಅವರು ಮೋದಿ ಜೊತೆ ಸೆಲ್ಫಿ ಕ್ಲಿಕ್ಕಿಸಿ ‘Hello From The Melody Team’ ಎಂದು ಬರೆದು ಪೋಸ್ಟ್‌ ಮಾಡಿದ್ದಾರೆ. ಮೆಲೋನಿ ಅವರು ಮೋದಿ ಅವರ ಜೊತೆ ಸೆಲ್ಫಿ ಕ್ಲಿಕ್ಕಿಸುತ್ತಿರುವುದು ಇದೇ ಮೊದಲೆನಲ್ಲ. ಈ ಹಿಂದೆ ದುಬೈನಲ್ಲಿ ವಿಶ್ವಸಂಸ್ಥೆಯ ಹವಾಮಾನ ಸಮ್ಮೇಳನ ನಡೆದಿತ್ತು. ಈ ವೇಳೆ ಮೋದಿ ಮತ್ತು ಮೆಲೋನಿ ಭಾಗವಹಿಸಿದ್ದರು. ಈ ಸಂದರ್ಭದಲ್ಲೂ ಮೆಲೋನಿ ಅವರು ಜೊತೆ ಸೆಲ್ಪಿ ತೆಗೆದುಕೊಂಡಿದ್ದರು.

Read More

ಚಂದನವನದ ಕ್ಯೂಟ್ ಜೋಡಿ ಡಾರ್ಲಿಂಗ್ ಕೃಷ್ಣ ಹಾಗೂ ಮಿಲನಾ ನಾಗರಾಜ್ ಫೋಷಕರಾಗುತ್ತಿರುವ ಸಂಭ್ರಮದಲ್ಲಿದ್ದಾರೆ. ತುಂಬು ಗರ್ಭಿಣಿಯಾಗಿರುವ ಮಿಲನಾ ಇದೀಗ ಬೇಬಿ ಬಂಪ್ ಫೋಟೋ ಶೂಟ್ ಮಾಡಿಸಿದ್ದು ಸಖತ್ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಯೆಸ್. ಸ್ಯಾಂಡಲ್ ವುಡ್ ನ ಕ್ರಿಸ್ ಮಿ ಜೋಡಿ ಇದೀಗ ಸುಂದರವಾಗಿ ಬೇಬಿ ಬಂಪ್ ಫೋಟೋ ಶೂಟ್ ಮಾಡಿಸಿದ್ದಾರೆ. ಈ ಫೋಟೋಗಳಿಗೆ ಅಭಿಮಾನಿಗಳು, ಸ್ನೇಹಿತರು ಸೇರಿದಂತೆ ಸಾಕಷ್ಟು ಮಂದಿ ಕಾಮೆಂಟ್ ಮಾಡಿ ಮೆಚ್ಚುಗೆ ಸೂಚಿಸಿದ್ದಾರೆ. ನಟಿ ಮಿಲನಾ ನಾಗರಾಜ್ ಪತಿ ಡಾರ್ಲಿಂಗ್ ಕೃಷ್ಣ ಜೊತೆ ಬೇಬಿ ಬಂಪ್ ಫೋಟೋಶೂಟ್ ಗೆ ಫೋಸ್ ನೀಡಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಲೈಟ್ ಕ್ರೀಮ್ ಕಲರ್​​ ಡ್ರೆಸ್​ನಲ್ಲಿ ನಟಿ ಮಿಲನಾ ನಾಗರಾಜ್​ ಮಿಂಚುತ್ತಿದ್ದಾರೆ. ಇವರಿಬ್ಬರು ಸ್ಯಾಂಡಲ್​ವುಡ್​ನ ಕ್ಯೂಟ್ ಜೋಡಿಯಾಗಿದ್ದಾರೆ. ಇದೀಗ ಅಪ್ಪ-ಅಪ್ಪ ಆಗುವ ಖುಷಿಯಲ್ಲಿದ್ದಾರೆ. ಮೊದಲ ಮಗುವನ್ನು ವೆಲ್​​ ಕಮ್ ಮಾಡಲು ಕಾಯ್ತಿದ್ದಾರೆ. ಸ್ಯಾಂಡಲ್​ವುಡ್ ದಂಪತಿ ಡಾರ್ಲಿಂಗ್ ಕೃಷ್ಣ ಹಾಗೂ ಮಿಲನಾ ನಾಗರಾಜ್ ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇತ್ತೀಚಿಗಷ್ಟೇ ಸೋಷಿಯಲ್…

Read More

ದಕ್ಷಿಣ ಆಫ್ರಿಕಾದ ಆಡಳಿತಾರೂಢ ಆಫ್ರಿಕನ್ ನ್ಯಾಷನಲ್ ಕಾಂಗ್ರೆಸ್ (ಎಎನ್ ಸಿ) ನಾಯಕ ಸಿರಿಲ್ ರಾಮಫೋಸಾ ಅವರನ್ನು ಮುಂದಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ರಾಷ್ಟ್ರೀಯ ಅಸೆಂಬ್ಲಿ ಮರು ಆಯ್ಕೆ ಮಾಡಿದೆ. ಗುರುವಾರ ನಡೆದ ರಾಷ್ಟ್ರೀಯ ಅಸೆಂಬ್ಲಿಯ ಮೊದಲ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದ ಮುಖ್ಯ ನ್ಯಾಯಮೂರ್ತಿ ರೇಮಂಡ್ ಜೊಂಡೊ, ಅಧ್ಯಕ್ಷೀಯ ಚುನಾವಣೆಯಲ್ಲಿ ರಾಮಫೋಸಾ 283 ಮತಗಳನ್ನು ಗಳಿಸಿ ಜಯಗಳಿಸಿದರೆ, ಇನ್ನೊಬ್ಬ ನಾಮನಿರ್ದೇಶಿತ ಎಕನಾಮಿಕ್ ಫ್ರೀಡಂ ಫೈಟರ್ಸ್ನ ಜೂಲಿಯಸ್ ಮಾಲೆಮಾ 44 ಮತಗಳನ್ನು ಪಡೆದರು ಎಂದು ಘೋಷಿಸಿದರು. ಅಧ್ಯಕ್ಷರಾಗಿ ಆಯ್ಕೆಯಾದ ನಂತರ ತಮ್ಮ ಮೊದಲ ಭಾಷಣದಲ್ಲಿ, ರಮಾಫೋಸಾ ಅವರು ಮರು ಆಯ್ಕೆಯನ್ನು “ದೊಡ್ಡ ಜವಾಬ್ದಾರಿ” ಎಂದು ಒಪ್ಪಿಕೊಂಡಿದ್ದಾರೆ ಮತ್ತು ಅವರನ್ನು ಬೆಂಬಲಿಸದವರೊಂದಿಗೆ ಸಹ ಕೆಲಸ ಮಾಡುತ್ತಾರೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ. ಮೇ ಅಂತ್ಯದಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯ ಫಲಿತಾಂಶಗಳು ದಕ್ಷಿಣ ಆಫ್ರಿಕಾದ ಜನರು ತಮ್ಮ ನಾಯಕರು ತಮ್ಮ ಅಗತ್ಯಗಳನ್ನು ಪೂರೈಸಲು ಒಟ್ಟಾಗಿ ಕೆಲಸ ಮಾಡಬೇಕೆಂದು ನಿರೀಕ್ಷಿಸುತ್ತಾರೆ ಎಂಬುದನ್ನು ಸ್ಪಷ್ಟಪಡಿಸಿದೆ ಎಂದು…

Read More

ಸ್ನೇಹಿತೆ ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದಾರೆ ಎಂಬ ಕಾರಣಕ್ಕೆ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬಾತನನ್ನು ದರ್ಶನ್ ಎಂಡ್ ಗ್ಯಾಂಗ್ ಹತ್ಯೆ ಮಾಡಿದೆ. ಘಟನೆಯಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಪಟ್ಟು 18 ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ವಿಚಾರಣೆ ವೇಳೆ ನಟ ದರ್ಶನ್ ನಾನು ಶೆಡ್‌ನಿಂದ ಬಂದ ಮೇಲೆ ಇವ್ರೆಲ್ಲಾ ಸೇರಿ ಹೀಗೆ ಮಾಡಿ ನನ್ನ ತಲೆಗೆ ತಂದಿದ್ದಾರೆ ಎಂದು ಅಳಲು ತೋಡಿಕೊಂಡಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್‌ ಮತ್ತು ಗ್ಯಾಂಗ್‌ ಸದಸ್ಯರನ್ನು ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ನಿರಂತರ ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ, ಸರ್ ನನಗೇನು ಗೊತ್ತಿಲ್ಲ ಅವನನ್ನ ಕರ್ಕೊಂಡ್ ಬಂದಿರೋದು ನನಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ ಎಂಬ ವಿಚಾರ ಪೊಲೀಸ್‌ ಮೂಲಗಳು ತಿಳಿಸಿವೆ. ರೇಣುಕಾಸ್ವಾಮಿಯನ್ನು ಕರ್ಕೊಂಡ್ ಬಂದಿದ್ದ ದಿನ ನಾನು ಸ್ಟೋನಿ ಬ್ರೂಕ್ ರೆಸ್ಟೋರೆಂಟ್ ನಲ್ಲಿದ್ದೆ. ಹುಡುಗರ ಜೊತೆ ಮದ್ಯ ಹಾಕುತ್ತಿದ್ದಾಗ ಪವನ ಅಲ್ಲಿಗೆ ಬಂದಿದ್ದ. ನನ್ನ ಕಿವಿಯಲ್ಲಿ ರೇಣುಕಾಸ್ವಾಮಿಯನ್ನು ಕರೆದುಕೊಂಡು ಬಂದಿರುವುದಾಗಿ ಹೇಳಿದ. ನಾನು…

Read More

ನಟ ದರ್ಶನ್ ಹಾಗೂ ಸಂಗಡಿಗರಿಂದ ಭೀಕರವಾಗಿ ಹತ್ಯೆಯಾದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಮನೆಗೆ ಇಂದು ಚಲನ ಚಿತ್ರ ವಾಣಿಜ್ಯ ಮಂಡಳಿ ಸದಸ್ಯರು ಭೇಟಿ ನೀಡಲಿದ್ದಾರೆ. ರೇಣುಕಾಸ್ವಾಮಿ ಪೋಷಕರು ಹಾಗೂ ಪತ್ನಿಗೆ ಸಾಂತ್ವಾನ ನೀಡಲು ತೆರಳಿದ್ದಾರೆ. ಸಾರಾ ಗೋವಿಂದು, ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್, ವಾಣಿಜ್ಯ ಮಂಡಳಿ ಅಧ್ಯಕ್ಷ ಸುರೇಶ್ ಸೇರಿದಂತೆ 15ಕ್ಕೂ ಹೆಚ್ಚು ಸದಸ್ಯರು ರೇಣುಕಾಸ್ವಾಮಿ ಮನೆಗೆ ಭೇಟಿ ನೀಡಲಿದ್ದಾರೆ. ಬಳಿಕ ಸುದ್ದಿಗೋಷ್ಠಿ ನಡೆಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಆರೋಪಿ ನಟ ದರ್ಶನ್ ಅವರನ್ನು ಚಿತ್ರರಂಗದಿಂದ ಬ್ಯಾನ್ ಮಾಡುವುದು ಹಾಗೂ ಅಸಹಕಾರ ನೀಡುವುದರ ಬಗ್ಗೆ ಯಾವುದೇ ನಿರ್ಧಾರ ಮಾಡಿಲ್ಲ. ಆರೋಪ ಸಾಬೀತಾದರೆ ಅಸಹಕಾರ ನೀಡುವ ವಿಚಾರಾಗಿ ನಿರ್ಧಾರ ಮಾಡಲಾಗುತ್ತದೆ ಎಂದು ಫಿಲ್ಮ್ ಚೇಂಬರ್ ಅಧ್ಯಕ್ಷ್ಯ ಎನ್.ಎಂ ಸುರೇಶ್ ಜೂ.13ರಂದು ನಡೆಸಿದ್ದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದರು. ಈ ಪ್ರಕರಣವನ್ನು ನಾವು ಖಂಡಿಸುತ್ತೇವೆ. ಅವರನ್ನು ತಕ್ಷಣಕ್ಕೆ ಬ್ಯಾನ್ ಮಾಡಲು ಆಗುವುದಿಲ್ಲ. ಬ್ಯಾನ್ ಮಾಡಲು, ಕಲಾವಿದರ ಸಂಘ ಹಾಗೂ ಇತರ ಅಂಗ ಸಂಸ್ಥೆಗಳು ಭಾಗಿಯಾಗಬೇಕು ಎಂದು…

Read More