Author: Author AIN

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈಗಾಗಲೇ ಪೊಲೀಸರು 13 ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಕಳೆದು ಮೂರು ದಿನಗಳಿಂದ ಸಾಕಷ್ಟು ಮಾಹಿತಿಗಳು ಹೊರ ಬೀಳುತ್ತಿದ್ದು ಈ ಮಧ್ಯೆ ಪ್ರಕರಣದ 8ನೇ ಆರೋಪಿ-ಚಾಲಕ ರವಿ ಚಿತ್ರದುರ್ಗ ಪೊಲೀಸರಿಗೆ ಶರಣಾಗಿದ್ದಾನೆ. ಕುರುಬರಹಟ್ಟಿ ಗ್ರಾಮದ ನಿವಾಸಿಯಾಗಿರುವ ರವಿ, ರೇಣುಕಾಸ್ವಾಮಿಯನ್ನ ರಘು ಮತ್ತು ಗ್ಯಾಂಗ್​ ಜೊತೆ ಸೇರಿ ಬೆಂಗಳೂರಿಗೆ ತನ್ನ ಇಟಿಯೋಸ್ ಕಾರಿನಲ್ಲಿ ಬೆಂಗಳೂರಿಗೆ ಕರೆತಂದಿದ್ದ. ಪ್ರಕರಣದ ದೊಡ್ಡದಾಗುತ್ತಿದ್ದಂತೆ ತಲೆ ತಪ್ಪಿಸಿಕೊಂಡಿದ್ದ. ಆದರೆ ತಾನಾಗಿಯೇ ಬಂದು ಚಿತ್ರದುರ್ಗ DYSP ಕಚೇರಿಯಲ್ಲಿ ಪೊಲೀಸರಿಗೆ ಶರಣಾಗಿದ್ದಾನೆ. ಜೂ8 ಶನಿವಾರ ಬೆಳಗ್ಗೆ ಹತ್ತು ಗಂಟೆ ವೇಳೆಗೆ ರೇಣುಕಾಸ್ವಾಮಿಯನ್ನ ಕಿಡ್ನಾಪ್ ಮಾಡಲಾಗಿತ್ತು. ಆರೋಪಿಗಳಾದ ರಾಘವೇಂದ್ರ, ಜಗ್ಗ, ಅನು ಸೇರಿ ರೇಣುಕಾಸ್ವಾಮಿಯನ್ನ ಬೆಂಗಳೂರಿಗೆ ಕರೆತರಲು ಪ್ಲಾನ್ ಮಾಡಿದ್ದರು. ಚಳ್ಳಕೆರೆ ಗೇಟ್ ಬಳಿಯ ಬಾಲಾಜಿ ಬಾರ್ ಬಳಿ ರೇಣುಕಾಸ್ವಾಮಿ ಬೈಕ್ ನಿಲ್ಲಿಸಿ ರವಿ ಕಾರಿನಲ್ಲಿ ಕರೆದೊಯ್ದಿದ್ದರು. ಜಗ್ಗ ಎಂಬಾತ ರವಿ ಬಳಿ 4000 ರೂಗೆ ಬಾಡಿಗೆ ಮಾತನಾಡಿದ್ದ. ಕಾರಲ್ಲಿ ಕರೆದೊಯ್ಯುವಾಗ ಸ್ವಲ್ಪವೂ ಅನುಮಾನ ಬರದಂತೆ ನಡೆದುಕೊಂಡಿದ್ದರು. ಆದರೆ…

Read More

ನಟಿ ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿ ಫೋಟೋ ಹಳುಹಿಸಿದ್ದ ಎಂಬ ಕಾರಣಕ್ಕೆ ದರ್ಶನ್ , ಪವಿತ್ರಾ ಗೌಡ ಸೇರಿದಂತೆ 14 ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಘಟನೆ ಕುರಿತು ನಟಿ ರಮ್ಯಾ ಸೋಶಿಯಲ್​ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡಿದ್ದು, ದರ್ಶನ್ ನಡೆಯನ್ನು ಖಂಡಿಸಿದ್ದಾರೆ. ‘ಸೋಶಿಯಲ್​ ಮೀಡಿಯಾದಲ್ಲಿ ಯಾವುದೇ ವ್ಯಕ್ತಿಯನ್ನು ಬ್ಲಾಕ್​ ಮಾಡುವ ಆಯ್ಕೆ ಇದೆ. ಒಂದು ವೇಳೆ ಟ್ರೋಲ್​ ಮುಂದುವರಿದರೆ ನೀವು ದೂರು ನೀಡಬಹುದು. ನನ್ನನ್ನು ಕೂಡ ಕೆಟ್ಟ ಪದಗಳಿಂದ ಟ್ರೋಲ್​ ಮಾಡಿದ್ದರು. ನನ್ನನ್ನು ಮಾತ್ರವಲ್ಲದೇ ಅನೇಕರನ್ನು ಟ್ರೋಲ್​ ಮಾಡಿದ್ದಾರೆ. ಬೇರೆಯವರ ಹೆಂಡತಿ, ಮಕ್ಕಳನ್ನೂ ಬಿಡದೇ ಟ್ರೋಲ್ ಮಾಡಿದ್ದಾರೆ. ಎಂಥ ಕೆಟ್ಟ ಸಮಾಜದಲ್ಲಿ ನಾವು ಬದುಕುತ್ತಿದ್ದೇವೆ’ ಎಂದು ರಮ್ಯಾ ಅವರು ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಬರೆದುಕೊಂಡಿದ್ದಾರೆ. ‘ಕಾನೂನು ಪಾಲಿಸುವ ಯಾವುದೇ ಪ್ರಜೆಯ ರೀತಿ ನಾನು ಕೂಡ ದೂರು ನೀಡಿದ್ದೇನೆ. ಅಂಥವರಿಗೆ ಪೊಲೀಸರು ಎಚ್ಚರಿಕೆ ನೀಡಿದ ಬಳಿಕ ಪಾಪ ಅಂತ ನಾನು ಕೇಸ್​ ವಾಪಸ್​ ತೆಗೆದುಕೊಂಡಿದ್ದೇನೆ. ಟ್ರೋಲ್​ ಮಾಡಿದ ವ್ಯಕ್ತಿಗಳು ಇನ್ನೂ ಚಿಕ್ಕವರು. ಅವರಿಗೂ…

Read More

ರೇಣುಕಾಗೌಡ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಪೊಲೀಸ್‌ ಕಸ್ಟಡಿಯಲ್ಲಿದ್ದಾರೆ. ದರ್ಶನ್ ರ ಈ ನಡೆಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ನಟ, ನಟಿಯರು, ರಾಜಕೀಯ ಮುಖಂಡರು ಘಟನೆಯನ್ನು ಖಂಡಿಸಿದ್ದಾರೆ. ಪ್ರಕರಣದ ಕುರಿತು ದರ್ಶನ್‌ ಮೊದಲ ಪತ್ನಿ ವಿಜಯಲಕ್ಷ್ಮೀ ಇದುವರೆಗೂ ಯಾವುದೇ ಕಾಮೆಂಟ್‌ ಮಾಡಿಲ್ಲ. ಆದರೆ, ತಮ್ಮ ಸೋಶಿಯಲ್‌ ಅಕೌಂಟ್‌ನಲ್ಲಿ ದರ್ಶನ್‌ ಜೊತೆಗಿದ್ದ ಫೋಟೋವನ್ನು ಅವರು ಡಿಲೀಟ್‌ ಮಾಡಿದ್ದಾರೆ. ಇನ್ನು ತಮ್ಮ ಸೋಶಿಯಲ್‌ ಮೀಡಿಯಾ ಅಕೌಂಟ್‌ಅನ್ನೇ ಅವರು ಡಿಆಕ್ಟಿವೇಟ್‌ ಮಾಡಿದ್ದಾರೆ ಎನ್ನುವ ಸುದ್ದಿ ಇದೆ. ಇದರ ನಡುವೆ ದರ್ಶನ್‌ ಹಾಗೂ ವಿಜಯಲಕ್ಷ್ಮೀ ಅವರ ಪುತ್ರ ವಿನೇಶ್‌ ಸೋಶಿಯಲ್‌ ಮೀಡಿಯಾದಲ್ಲಿ ಘಟನೆಯ ಕುರಿತು ಬರೆದುಕೊಂಡಿದ್ದಾರೆ. ನನ್ನ ತಂದೆ ಬಗ್ಗೆ ಕೆಟ್ಟ ಕಾಮೆಂಟ್ಸ್ ಮತ್ತು ಅಸಭ್ಯ ಭಾಷೆಯಲ್ಲಿ ನಿಂದನೆ ಮಾಡುತ್ತಿರುವರಿಗೆ ಧನ್ಯವಾದಗಳು. ನನಗೆ 15 ವರ್ಷ, ನನಗೂ ಮನಸಿದೆ, ಈ ಕಷ್ಟದ ಸಮಯದಲ್ಲಿ ನನ್ನ ತಾಯಿ ಮತ್ತು ತಂದೆಗೆ ನಿಮ್ಮ ಬೆಂಬಲದ ಅಗತ್ಯವಿದೆ. ನನಗೆ ಶಾಪ ಹಾಕಿದ್ರೆ ಯಾವ ಬದಲಾವಣೆಯೂ ಆಗೋದಿಲ್ಲ’ ಎಂದು ವಿನೇಶ್‌ ಬರೆದುಕೊಂಡಿದ್ದಾರೆ. ಎಲ್ಲರಿಗೂ…

Read More

ನಟ ದರ್ಶನ್ ರ ಕರ್ಮಕಾಂಡಗಳು ಬಗೆದಷ್ಟು ಬಯಲಾಗುತ್ತಿದೆ. ಹೊರಗಿನವರಿಗೆ ಮಾತ್ರವಲ್ಲ ಸ್ವತಃದವರಿಗೂ ದರ್ಶನ್ ವಿಲನ್ ಆಗಿಯೇ ಇದ್ದರು ಅನ್ನೋದು ಇದೀಗ ಬಯಲಾಗಿದೆ. ಸ್ವತಃ ತಾನು ಹುಟ್ಟಿದ ತಾಯಿಯ ತವರು ಮನೆಯಲ್ಲೇ ನೆಲಸಮಗೊಳಿಸಿ ತಮ್ಮ ಸೋದರ ಮಾವನವರನ್ನು ಬೀದಿಪಾಲು ಮಾಡಿದ ಪೈಶಾಚಿಕ ಕೃತ್ಯ ಕೊಡಗಿನಲ್ಲಿ ನಡೆದಿದ್ದು, ಈ ಬಗ್ಗೆ ಸ್ವತಃ ಅವರ ಸೋದರ ಮಾವ ಅಳಲು ತೋಡಿಕೊಂಡಿದ್ದಾರೆ. ದರ್ಶನ್ ಹುಟ್ಟೂರು ತನ್ನ ತಾಯಿಯ ತವರು ಮನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ. ನಟ ದರ್ಶನ್ ಹುಟ್ಟಿದ ಅಜ್ಜಿ-ತಾತನ ಮನೆಯನ್ನು ಸ್ವತಃ ದರ್ಶನ್ ಮತ್ತು ಆತನ ತಾಯಿ ಮೀನಾ ಕೆಡವಿ ನೆಲಸಮಗೊಳಿಸಿ ಸೋದರ ಮಾವಂದಿರನ್ನು ಬೀದಿಪಾಲು ಮಾಡಿದ್ದಾರಂತೆ. ಆಸ್ತಿ ವಿಚಾರವಾಗಿ ಸೋದರ ಮಾವಂದಿರ ಜೊತೆ ಗಲಾಟೆ ಮಾಡಿಕೊಂಡಿದ್ದ ದರ್ಶನ್ ಮತ್ತು ತಾಯಿ ಮೀನಾ ಮನೆಯನ್ನು ನೆಲಸಮ ಮಾಡಿದ್ದಾರೆ. ಈ ಪ್ರಕರಣದ ಕಳೆದ 10 ವರ್ಷಗಳ ಹಿಂದೆ ನಡೆದಿದ್ದು, ಈಗಲೂ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿದೆ. ರೇಣುಕಾಸ್ವಾಮಿ ಕೊಲೆ ಮಾಡಿದ ಆರೋಪದಲ್ಲಿ ಜೈಲು ಸೇರಿರುವ ದರ್ಶನ್ ವಿರುದ್ಧ ಸ್ವತಃ…

Read More

ಕೊಲೆ ಪ್ರಕರಣದಲ್ಲಿ ಪೊಲೀಸ್ ಠಾಣೆಯಲ್ಲಿರುವ ದರ್ಶನ್ ಹಾಗೂ ಸಹಚರರಿಗೆ ಅಲ್ಲೂ ರಾಜ ಮರ್ಯಾದೆ ಸಿಗುತ್ತಿದೆ. ಈಗಾಗಲೇ ದರ್ಶನ್ ಎಂಡ್ ಗ್ಯಾಂಗ್ ಗೆ ಬಿರಿಯಾನಿ ತರಿಸಿಕೊಟ್ಟು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದ ಪೊಲೀಸರು ಇದೀಗ ದರ್ಶನ್ ಮತ್ತವರ ಸಂಗಡಿಗರಿಗೆ ಪೊಲೀಸ್ ಠಾಣೆಯಲ್ಲಿಯೇ ಸ್ಮೋಕಿಂಗ್ ಝೋಮ್ ಮಾಡಿಕೊಟ್ಟಿದ್ದಾರೆ ಎನ್ನಲಾಗುತ್ತಿದೆ. ಹೈಪ್ರೊಫೈಲ್‌ ಕೇಸ್‌ ಆಗಿರುವ ಕಾರಣ ದರ್ಶನ್‌ ಸೇರಿದಂತೆ ಎಲ್ಲಾ ಆರೋಪಿಗಳಿಗೆ ಠಾಣೆಯಲ್ಲಿಯೇ ಸಿಗರೇಟ್‌ ಸೇದೋಕೆ ಅವಕಾಶ ಕೊಟ್ಟಿದ್ದಾರೆ ಎನ್ನಲಾಗುತ್ತಿದೆ. ಶಾಮಿಯಾನ ಹಾಕಿ, ದರ್ಶನ್‌ಗೆ ಸಿಗರೇಟ್‌ ಸೇದೋಕೆ ವ್ಯವಸ್ಥೆ ಮಾಡಲಾಗಿದೆ ಎನ್ನುವ ಮಾತುಗಳು ಕೇಳಿ ಬಂದಿವೆ. ಮಾಧ್ಯಮದವರು ಹಾಗೂ ಅಭಿಮಾನಿಗಳಿಗೆ ಮಾಹಿತಿ ತಿಳಿಯಬಾರದು ಎನ್ನುವ ಕಾರಣಕ್ಕೆ ಸ್ಟೇಷನ್‌ನ ಹೊರಗಡೆ ಶಾಮಿಯಾನದ ಸೈಡ್‌ ವಾಲ್‌ ಅನ್ನು ಕಟ್ಟಲಾಗಿತ್ತು. ಆದರೆ, ಈಗ ಸ್ಟೇಷನ್‌ನ ಮೊದಲನೇ ಮಹಡಿಯ ಬಾಲ್ಕನಿಯಲ್ಲೂ ಶಾಮಿಯಾನ ಹಾಕಿರುವುದು ಈ ಅನುಮಾನಕ್ಕೆ ಕಾರಣವಾಗಿದೆ. ಠಾಣೆ ಆವರಣಕ್ಕೆ ಶಾಮಿಯಾನ ಹಾಕಿರೋದನ್ನು ಒಪ್ಪಬಹುದು. ಆದ್ರೆ, ಮೊದಲನೇ ಮಹಡಿಯ ಬಾಲ್ಕನಿಗೆ ಶಾಮಿಯಾದ ವಾಲ್‌ ಹಾಕಿರುವ ಬಗ್ಗೆಯೇ ಪ್ರಶ್ನೆಗಳು ಹುಟ್ಟಿಕೊಂಡಿದೆ. ಇದೆಲ್ಲವನ್ನೂ ನೋಡ್ತಾ ಇದ್ದರೆ,…

Read More

ಕಳೆದು ಮೂರು ನಾಲ್ಕು ದಿನಗಳಿಂದ ಬರೀ ನಟ ದರ್ಶನ್ ಹಾಗೂ ಪವಿತ್ರಾ ಗೌಡರದ್ದೇ ಸುದ್ದಿ. ಇದುವರೆಗೂ ಆಗಾಗ ಸುದ್ದಿಯಾಗುತ್ತಿದ್ದು ದರ್ಶನ್ ಹಾಗೂ ಪವಿತ್ರಾ ಸಂಬಂಧಿ ಇದೀಗ ಕೊಲೆ ಪ್ರಕರಣದಲ್ಲಿ ಪೊಲೀಸ್ ಠಾಣೆಗೆ ಬಂದು ನಿಂತಿದೆ. ನಟಿ ಪವಿತ್ರಾರನ್ನು ನೋಡ್ತಿದ್ದಂಗೆ ಯಾರಿಗಾದ್ರು ಈಕೆ ಸೌಂದರ್ಯವತಿ ಅಂತ ಅನಿಸೋದೆ ಇರೋದಿಲ್ಲ. ನಿಜವಾಗಿಯೂ ಪವಿತ್ರಾ ಅಷ್ಟು ಸೌಂದರ್ಯವಾಗಿದ್ದಾರೆ. ಆದ್ರೆ ಆ ಸೌಂದರ್ಯದ ಹಿಂದೆ ಯಾರಿಗೂ ಕಾಣದ ಮುಖವಿದೆ ಅನ್ನೋದು ರೇಣುಕಾಸ್ವಾಮಿ ಹತ್ಯೆಯಾದ ಬಳಿಕವೇ ಬಯಲಾಗಿದೆ. ಹೌದು. ಇಂದು ಕೋಟ್ಯಾಂತರ ರೂಪಾಯಿಗಳ ಒಡತಿಯಾಗಿರೋ ಪವಿತ್ರಾ ಗೌಡ ಮೊದಲು ವಾಸವಿದದ್ದು ಸಣ್ಣದೊಂದು ಬಾಡಿಗೆ ಮನೆಯಲ್ಲಿ. ಬೆಂಗಳೂರಿನ ಚಾಮರಾಜ ಪೇಟೆಯಲ್ಲಿ ಪವಿತ್ರಾ ಕಟುಂಬ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಅದೇ ಮನೆಯ ಮುಂದಿದ್ದ ಕಿರಾಣಿ ಅಂಗಡಿ ಮಾಲಿಕನ ಜೊತೆ ಪವಿತ್ರಾಗೆ ಪ್ರೀತಿಯಾಗಿ ಬಳಿಕ ಇಬ್ಬರು ಮದುವೆಯಾದರು. ಪವಿತ್ರಾ ಗೌಡ ಹಾಗೂ ಸಂಜಯ್ ಸಿಂಗ್ ದಂಪತಿಗಳಿಗೆ ಖುಷಿ ಎಂಬ ಮಗಳು ಹುಟ್ಟಿದಳು. ಮೊದಲು ತೀರಾ ಸಣ್ಣಗಿದ್ದ ಪವಿತ್ರಾ ಗೌಡ ಮಗುವಾದ ಬಳಿಕ ದಪ್ಪಗಾದರು.…

Read More

ಇಂದ್ರಜಿತ್​ ಲಂಕೇಶ್ ಸಮರ್ಜಿತ್ ಲಂಕೇಶ್ ನಟನೆಯ ‘ಗೌರಿ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಚಿತ್ರದ ಮೂಲಕ ಸಮರ್ಜಿತ್ ಹಾಗೂ ನಟಿ ಸಾನ್ಯಾ ಅಯ್ಯರ್ ಸ್ಯಾಂಡಲ್ ವುಡ್ ಗೆ ಗ್ರ್ಯಾಂಡ್ ಎಂಟ್ರಿಕೊಡ್ತಿದ್ದಾರೆ. ಈ ಚಿತ್ರದ ಹಾಡುಗಳನ್ನು ಹುಬ್ಬಳ್ಳಿಯಲ್ಲಿ ಬಿಡುಗಡೆ ಮಾಡಲಾಗಿದೆ. ಈ ವೇಳೆ ನಟ ದರ್ಶನ್ ಪ್ರಕರಣದ ಬಗ್ಗೆಯೂ ಇಂದ್ರಜಿತ್ ಪ್ರತಿಕ್ರಿಯೆ ನೀಡಿದ್ದಾರೆ. ‘ದರ್ಶನ್ ಅವರಿಗೆ ನಾನು ಯಾಕೆ ಟಾಂಗ್ ನೀಡಲಿ? ಬಸವಣ್ಣನ ವಚನ ಹೇಳಿದ್ದೇನೆ ಅಷ್ಟೇ. ದರ್ಶನ್​ ಜೊತೆ ನಾನು ಸಿನಿಮಾ ಮಾಡಿದ್ದೇನೆ. ಪತ್ರಕರ್ತನಾಗಿ ನಾನು ಕೆಲವು ವಿಚಾರಗಳ ಬಗ್ಗೆ ಧ್ವನಿ ಎತ್ತಿದ್ದೇನೆ ಅಷ್ಟೆ. ಅದನ್ನು ಹೊರತುಪಡಿಸಿ ನಮ್ಮ ನಡುವೆ ಏನೂ ಇಲ್ಲ. ಅನ್ಯಾಯ ಆದಾಗ ಧ್ವನಿ ಎತ್ತುವುದನ್ನು ನಾನು ನನ್ನ ತಂದೆ ಲಂಕೇಶ್ ಅವರಿಂದ ಕಲಿತ್ತದ್ದು. ಕೊಲೆಯಾದ ರೇಣುಕಾ ಸ್ವಾಮಿ ಕುಟುಂಬದವರಿಗೆ ನ್ಯಾಯ ಸಿಗಬೇಕು. ವಿಜಯಲಕ್ಷ್ಮಿ ಮತ್ತು ಅವರ ಮಗನಿಗೆ ದೇವರು ಶಕ್ತಿ ಕೊಡಲಿ’ ಎಂದಿದ್ದಾರೆ ಇಂದ್ರಜಿತ್​ ಲಂಕೇಶ್​. ಸೋಶಿಯಲ್​ ಮೀಡಿಯಾ ಬಳಕೆ ಬಗ್ಗೆ ಇಂದ್ರಜಿತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಸಾಮಾಜಿಕ ಜಾಲತಾಣ…

Read More

ನಟ ದರ್ಶನ್ ಎಂಡ್ ಗ್ಯಾಂಗ್ ನಿಂದ ಕೊಲೆಯಾದ ರೇಣುಕಾಸ್ವಾಮಿ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚು ಗಂಭೀರತೆ ಪಡೆದುಕೊಳ್ಳುತ್ತಿದೆ. ಸಾಕಷ್ಟು ನಟ, ನಟಿಯರು, ರಾಜಕೀಯ ಮುಖಂಡರು ಪ್ರತಿಕ್ರಿಯೆ ನೀಡಿದ್ದಾರೆ.ಇದೀಗ ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದರೆ. ರೇಣುಕಾಸ್ವಾಮಿ ಕೊಲೆ ಗಂಭೀರ ಪ್ರಕರಣವಾಗಿದ್ದು, ಈ ಪ್ರಕರಣದಲ್ಲಿ ಆರೋಪಿಗಳಿಗೆ ಶಿಕ್ಷೆ ಸಿಗುವವರೆಗೂ ಅಧಿಕಾರಿಗಳು ಚುರುಕುತನ, ನಿಯತ್ತಿನ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. ಅಮಾನವೀಯವಾಗಿ ವರ್ತಿಸುವ ಅಧಿಕಾರ ಯಾರಿಗೂ ಇಲ್ಲ. ಅಧಿಕಾರದಲ್ಲಿ ಇರುವವರು ಆಗಿರಬಹುದು, ಸೆಲೆಬ್ರಿಟಿ ಆಗಬಹುದು. ಯಾರಿಗೂ ವಿಶೇಷ ಅಧಿಕಾರ ಇಲ್ಲ. ಕಾನೂನಿನ ಮುಂದೆ ನಾವೆಲ್ಲರೂ ಸಮಾನರು. ಕಾನೂನನ್ನು ಕೈಗೆತ್ತಿಕೊಳ್ಳುವುದೇ ಅಪರಾಧ. ಅದು ಮರ್ಡರ್ ಆಗುವ ಮಟ್ಟಕ್ಕೆ ಹೋದರೆ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದರು. ಕೊಲೆಯಲ್ಲಿ ಹಲವಾರು ರೀತಿ ಇವೆ. ಇದು ಸಂಚು ಮಾಡಿ ಮರ್ಡರ್ ಮಾಡಿರುವ ಪ್ರಕರಣ. ಇದೊಂದು ಗಂಭೀರ ಪ್ರಕರಣ. ದರ್ಶನ್ ಪ್ರಕರಣದಲ್ಲಿ ಆರಂಭದಲ್ಲಿ ತನಿಖೆ ಚುರುಕಾಗಿ ನಡೆಯುತ್ತಿದೆ. ಕೊನೆಯವರೆಗೂ ಇದೇ ಚುರುಕುತನ, ನಿಯತ್ತು ತನಿಖೆಯಲ್ಲಿರಬೇಕು. ಹಾಗಾದಾಗ ಮಾತ್ರ ತಪ್ಪಿತಸ್ಥರಿಗೆ…

Read More

ಎರಡು ಹಡಗುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಹಡಗು ಮಗುಚಿ 80 ಮಂದಿ ಮೃತಪಟ್ಟಿರುವ ಘಟನೆ ಕಾಂಗೋದಲ್ಲಿ ನಡೆದಿದೆ. ಹಡಗಿನಲ್ಲಿ ಒಟ್ಟು 270 ಮಂದಿ ಪ್ರಯಾಣಿಸುತ್ತಿದ್ದು ಅವರಲ್ಲಿ 80ಮಂದಿ ಮೃತಪಟ್ಟಿದ್ದಾರೆ. ಈ ಹಡಗು ಕಾಂಗೋದ ರಾಜಧಾನಿ ಕಿನ್ಶಾಸಾಗೆ ಹೋಗುತ್ತಿತ್ತು. ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋದ ಮೈ-ನ್ಡೊಂಬೆ ಪ್ರಾಂತ್ಯದ ಕ್ವಾ ನದಿಯಲ್ಲಿ ದೋಣಿ ಅಪಘಾತ ಸಂಭವಿಸಿದೆ. ಕಾಂಗೋಲೀಸ್ ನೀರಿನಲ್ಲಿ ಮಾರಣಾಂತಿಕ ಹಡಗು, ಅಪಘಾತಗಳು ಸಾಮಾನ್ಯವಾಗಿದೆ, ಅಲ್ಲಿ ಹಡಗುಗಳು ಹೆಚ್ಚಾಗಿ ಸರಕುಗಳಿಂದ ತುಂಬಿರುತ್ತವೆ ಮತ್ತು ಅಪಘಾತಗಳಿಗೆ ಬಲಿಯಾಗುತ್ತವೆ. ಮಧ್ಯ ಆಫ್ರಿಕಾದ ದೇಶದ ವಿಶಾಲವಾದ ಅರಣ್ಯ ಪ್ರದೇಶದಲ್ಲಿ ಕೆಲವೇ ಸುಸಜ್ಜಿತ ರಸ್ತೆಗಳಿವೆ. ಆದ್ದರಿಂದ ನದಿಯ ಮೂಲಕ ಅಲ್ಲಿನ ಹೆಚ್ಚಿನ ಜನರು ಪ್ರಯಾಣ ಮಾಡುವುದು ಸಾಮಾನ್ಯವಾಗಿದೆ. ಈ ಹಿಂದೆ ಫೆಬ್ರವರಿ ತಿಂಗಳಲ್ಲೂ ಓವರ್‌ಲೋಡ್‌ನಿಂದ ಹಡಗು ಮುಳುಗಿ ಹತ್ತಾರು ಜನರು ಈ ಭಾಗದಲ್ಲಿ ಪ್ರಾಣ ಕಳೆದುಕೊಂಡಿದ್ದರು. 2023 ರಲ್ಲಿ ಇಲ್ಲಿ ಒಂದು ದೊಡ್ಡ ಅಪಘಾತ ಸಂಭವಿಸಿತ್ತು. ಕಾಂಗೋ ನದಿಯಲ್ಲಿ ಹಡಗು ಮುಳುಗಿ ಕನಿಷ್ಠ 52 ಜನರು ಸಾವನ್ನಪ್ಪಿದ್ದರು. ಎಂಬಾಂಡಕಾ…

Read More

ಕುವೈತ್‌ ನ ವಸತಿ ಕಟ್ಟಡದಲ್ಲಿ ಬುಧವಾರ ಸಂಭವಿಸಿದ ಅಗ್ನಿ ದುರಂತದಲ್ಲಿ 49 ಮಂದಿ ಮೃತಪಟ್ಟಿದ್ದಾರೆ. ಮೃತರಲ್ಲಿ ಹೆಚ್ಚಿನವರು ಕೇರಳದಿಂದ ಹೋದವರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೇರಳದಿಂದ ಹೋದ 14 ಜನರು ದುರಂತದಲ್ಲಿ ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಮೃತದೇಹಗಳನ್ನು ಆದಷ್ಟು ಬೇಗ ಭಾರತಕ್ಕೆ ತರಲು ಪ್ರಯತ್ನಗಳು ನಡೆಯುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ಬೆನ್ನಲ್ಲೇ ವಿದೇಶಾಂಗ ವ್ಯವಹಾರಗಳ ಖಾತೆ ರಾಜ್ಯ ಸಚಿವ ಕೀರ್ತಿವರ್ಧನ್ ಸಿಂಗ್ ಕುವೈತ್‌ಗೆ ತೆರಳಿದ್ದಾರೆ. ದೆಹಲಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೀರ್ತಿವರ್ಧನ್, ‘ಘಟನೆ ಸಂಬಂಧ ಬುಧವಾರ ಸಂಜೆ ಪ್ರಧಾನಿಯವರೊಂದಿಗೆ ಸಭೆ ನಡೆಸಿದ್ದೇವೆ. ಅಲ್ಲಿಗೆ ತಲುಪಿದ ತಕ್ಷಣ ಪರಿಸ್ಥಿತಿಯ ಪೂರ್ಣ ಚಿತ್ರಣ ಸಿಗುತ್ತದೆ’ ಎಂದು ತಿಳಿಸಿದರು. ‘ಕೆಲವು ಮೃತದೇಹಗಳು ಗುರುತಿಸಲಾಗದಷ್ಟು ಸುಟ್ಟು ಕರಕಲಾಗಿರುವುದು ತಿಳಿದುಬಂದಿದೆ. ಮೃತದೇಹಗಳನ್ನು ಗುರುತಿಸಲು ಡಿಎನ್‌ಎ ಪರೀಕ್ಷೆ ನಡೆಸಲಾಗುತ್ತದೆ. ಮೃತದೇಹಗಳನ್ನು ಸಾಗಿಸಲು ವಾಯುಪಡೆಯ ವಿಮಾನಗಳು ಸಿದ್ಧವಾಗಿವೆ. ಶವಗಳನ್ನು ಗುರುತಿಸಿದ ತಕ್ಷಣ ಸಂಬಂಧಿಕರಿಗೆ ಮಾಹಿತಿ ನೀಡಲಾಗುತ್ತದೆ’ ಎಂದು ಹೇಳಿದರು. ‘ಈಗಿನ ಮಾಹಿತಿ ಪ್ರಕಾರ ದುರಂತದಲ್ಲಿ…

Read More