Author: Author AIN

ಪಶ್ಚಿಮ ಬಂಗಾಳದ ನಾಲ್ಕು ವರ್ಷದ ಮಗುವಿನಲ್ಲಿ ಮಾನವನಲ್ಲಿ ಕಾಣಸಿಕೊಳ್ಳುವ ಹಕ್ಕಿ ಜ್ವರ H9N2 ಸೋಂಕು ಇರುವುದು ದೃಢಪಟ್ಟಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ ನೀಡಿದೆ. ನಿರಂತರ ಉಸಿರಾಟದ ಸಮಸ್ಯೆ, ತೀವ್ರ ಜ್ವರ ಮತ್ತು ಕಿಬ್ಬೊಟ್ಟೆಯ ಸೆಳೆತದಿಂದಾಗಿ ಫೆಬ್ರುವರಿಯಲ್ಲಿ ಮಗುವನ್ನು ಸ್ಥಳೀಯ ಆಸ್ಪತ್ರೆಯ ಮಕ್ಕಳ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು. ಮೂರು ತಿಂಗಳು ಚಿಕಿತ್ಸೆ ನೀಡಿದ ಬಳಿಕ ಮಗುವನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ ಎಂದು ಸಂಸ್ಥೆ ಹೇಳಿದೆ. ಮಗುವಿನ ಕುಟುಂಬದ ಉಳಿದ ಸದಸ್ಯರಲ್ಲಿ ಉಸಿರಾಟದ ಸಮಸ್ಯೆ ಇರಲಿಲ್ಲ. ಮಗು ಮನೆಯ ಸುತ್ತಮುತ್ತಲಿರುವ ಸಾಕು ಕೋಳಿಗಳೊಂದಿಗೆ ಹೆಚ್ಚು ಒಡನಾಟ ನಡೆಸಿದ ಕಾರಣ ಕಾಯಿಲೆ ಉಲ್ಬಣಗೊಂಡಿದೆ ಎಂದು ಆರೋಗ್ಯ ಸಂಸ್ಥೆ ತಿಳಿಸಿದೆ. ಇದು ಭಾರತದಲ್ಲಿ ಪತ್ತೆಯಾದ ಎರಡನೇ H9N2 ಹಕ್ಕಿ ಜ್ವರದ ಪ್ರಕರಣವಾಗಿದ್ದು, 2019ರಲ್ಲಿ ಮೊದಲ ಪ್ರಕರಣ ವರದಿಯಾಗಿದೆ ಎಂದೂ ಸಂಸ್ಥೆ ಹೇಳಿರುವುದಾಗಿ ರಾಯಿಟರ್ಸ್‌ ವರದಿ ತಿಳಿಸಿದೆ.

Read More

ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 13 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ಈ ಪ್ರಕರಣದಲ್ಲಿ ಮತ್ತಷ್ಟು ಜನ ಭಾಗಿಯಾರುವ ಶಂಕೆ ಇದೆ. ಇದೀಗ ಘಟನೆಯಲ್ಲಿ ಆರೋಪಿಗಳ ಸಂಖ್ಯೆ 13ರಿಂದ 17ಕ್ಕೇ ಏರಿಕೆ ಆಗಿದೆ. ಪ್ರಕರಣದಲ್ಲಿ 17 ಆರೋಪಿಗಳ ಪೈಕಿ ಈಗಾಗಲೇ 13 ಆರೋಪಿಗಳನ್ನು ಪೊಲೀಸರು ಬಂಧಿಸಲಾಗಿದೆ. ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ನಾಲ್ವರು ಆರೋಪಿಗಳು ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದ್ದು, ನಾಪತ್ತೆಯಾಗಿರುವವರಿಗಾಗಿ ಪೊಲೀಸರಿಂದ ಇದೀಗ ಶೋಧ ಕಾರ್ಯ ಆರಂಭವಾಗಿದೆ. ನಾಪತ್ತೆಯಾಗಿರುವ ನಾಲ್ವರು ದರ್ಶನ್ ಆಪ್ತರು ಎನ್ನಲಾಗುತ್ತಿದೆ. ಪವಿತ್ರಾ ಗೌಡಗೆ ರೇಣುಕಾ ಸ್ವಾಮಿ ಅಶ್ಲೀಲ ಮೇಸೆಜ್ ಮಾಡಿದ್ದರು ಎಂಬ ಕಾರಣಕ್ಕೆ ಕೊಲೆ ಮಾಡಲಾಗಿದೆ. ಪ್ರಕರಣದಲ್ಲಿ ದರ್ಶನ್​, ಪವಿತ್ರಾ ಗೌಡ ವಿ. ವಿನಯ್, ಎಸ್​. ಪ್ರದೋಶ್​, ಎಂ. ಲಕ್ಷ್ಮಣ್​, ಆರ್. ನಾಗರಾಜು, ಕೆ. ಪವನ್ ಮುಂತಾದವರನ್ನು ಪೊಲೀಸ್​ ಕಸ್ಟಡಿಗೆ ನೀಡಲಾಗಿದೆ. ಇದೀಗ ನಾಪತ್ತೆಯಾಗಿರುವ ಇನ್ನೂ ನಾಲ್ವರಿಗೆ ಹುಡುಕಾಟ ಮುಂದುವರೆದಿದೆ.

Read More

ಕೊಲೆ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ನಟ ದರ್ಶನ್ ಜೈಲು ಸೇರಿದ್ದಾರೆ. ಇವರ ಜೊತೆ ಇನ್ನೂ 13 ಮಂದಿ ಅರೆಸ್ಟ್ ಆಗಿದ್ದು ಸದ್ಯ ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಘಟನೆಯ ಬಳಿಕ ದರ್ಶನ್ ಪತ್ನಿ ವಿಜಯಲಕ್ಷ್ಮೀ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಜೊತೆಗೆ ಸೋಷಿಯಲ್ ಮೀಡಿಯಾದಲ್ಲೂ ಯಾವುದೇ ಪೋಸ್ಟ್ ಹಾಕಿಲ್ಲ. ಅಲ್ಲದೆ ವಿಜಯಲಕ್ಷ್ಮಿ ಇನ್​ಸ್ಟಾಗ್ರಾಮ್​ ಪ್ರಾಫೈಲ್​ ಫೋಟೋನ ಡಿಲೀಟ್ ಮಾಡಿರುವುದರ ಜೊತೆಗೆ ದರ್ಶನ್ ಅವರನ್ನು ಅನ್​ಫಾಲೋ ಮಾಡಿದ್ದಾರೆ. ಇದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಕೆಲ ತಿಂಗಳ ಹಿಂದೆ ಪವಿತ್ರಾ ಗೌಡ ಅವರು ದರ್ಶನ್ ಜೊತೆ ಇರೋ ಫೋಟೋ ಹಂಚಿಕೊಂಡಿದ್ದರು. ‘10 ವರ್ಷಗಳ ಸಂಬಂಧ’ ಎಂದು ಟ್ಯಾಗ್​ಲೈನ್ ನೀಡಿದ್ದರು. ಇದನ್ನು ವಿಜಯಲಕ್ಷ್ಮಿ ಖಂಡಿಸಿದ್ದರು. ಇಬ್ಬರ ಮಧ್ಯೆ ಸೋಶಿಯಲ್ ಮೀಡಿಯಾದಲ್ಲಿ ವಾರ್ ನಡೆದಿತ್ತು. ಆ ಬಳಿಕ ಎಲ್ಲವೂ ಸೈಲೆಂಟ್ ಆಗಿತ್ತು. ಜೊತೆಗೆ ಇತ್ತೀಚೆಗೆ ದರ್ಶನ್ ವಿಜಯಲಕ್ಷ್ಮಿ ಜೊತೆ ದುಬೈಗೆ ತೆರಳಿದ್ದು ಅಲ್ಲಿ ಆನಿವರ್ಸರಿ ಸೆಲೆಬ್ರೇಟ್ ಮಾಡಿದ್ದರು. ಅದರ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಈ…

Read More

ರೇಣುಕಾ ಸ್ವಾಮಿ ಕೊಲೆ ಪ್ರಕರಣ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಪ್ರಕರಣದಲ್ಲಿ ಈಗಾಗಲೇ ದರ್ಶನ್, ಪವಿತ್ರಾ ಗೌಡ ಸೇರಿದಂತೆ 13ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ವಿಚಾರಣೆ ವೇಳೆ ಸಾಕಷ್ಟು ಮಾಹಿತಿಗಳು ಹೊರ ಬೀಳುತ್ತಿದೆ. ಇದೀಗ ಪವಿತ್ರಾಗೆ ಮೃತಾ ರೇಣುಕಾಸ್ವಾಮಿ ಗುಪ್ತಾಂಗದ ಫೋಟೋ ಕಳುಹಿಸಿ ದರ್ಶನ್ ​ಗಿಂತ ನಾನೇನು ಕಡಿಮೆ ಬಾ ಎಂದು ಅಸಭ್ಯವಾಗಿ ಮೆಸೇಜ್ ಮಾಡಿದ್ದ ಎನ್ನುವುದು ವಿಚಾರಣೆ ವೇಳೆ ಬಯಲಾಗಿದೆ. ದರ್ಶನ್ ಹಾಗೂ ವಿಜಯಲಕ್ಷ್ಮಿ ದಾಂಪತ್ಯದಲ್ಲಿ ಪವಿತ್ರಾ ಗೌಡ ಎಂಟ್ರಿ ಆಗಿದ್ದಾರೆ ಎನ್ನುವ ಮಾತಿದೆ. ಈ ವಿಚಾರದಲ್ಲಿ ಪವಿತ್ರಾ ಹಾಗೂ ವಿಜಯಲಕ್ಷ್ಮಿ ಮಧ್ಯೆ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಕಿರಿಕ್ ಆಗಿತ್ತು. ದರ್ಶನ್ ಹಾಗೂ ವಿಜಯಲಕ್ಷ್ಮಿ ಸಂಸಾರ ಚೆನ್ನಾಗಿರಬೇಕು ಎಂದು ಬಯಸಿದ ರೇಣುಕಾಸ್ವಾಮಿ ಪವಿತ್ರಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದರು ಎನ್ನಲಾಗಿದೆ. ಕೊಲೆಯಾದ ರೇಣುಕ ಸ್ವಾಮಿ ಫೆಬ್ರವರಿ 27ರಿಂದ ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡೋಕೆ ಶುರು ಮಾಡಿದ್ದರು. ಅಕೌಂಟ್ ಬ್ಲಾಕ್ ಮಾಡಿದರೂ ಹೊಸ ಅಕೌಂಟ್ ಓಪನ್ ಮಾಡಿ ಅಶ್ಲೀಲವಾಗಿ ಮಸೇಜ್ ಕಳುಹಿಸುತ್ತಿದ್ದ. ಕಳೆದ…

Read More

ನಟಿ ಪವಿತ್ರಾ ಗೌಡಗೆ ಕೆಟ್ಟಿದಾಗಿ ಮೇಸೆಜ್ ಮಾಡಿದ್ದರು ಎಂಬ ಕಾರಣಕ್ಕೆ ರೇಣುಕಾಸ್ವಾಮಿಯನ್ನು ನಟ ದರ್ಶನ್ ಎಂಡ್ ಗ್ಯಾಂಕ್ ಕೊಲೆ ಮಾಡಿದೆ. ಈ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ 13 ಜನರನ್ನು ಬಂಧಿಸಿದ್ದು 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಇದರ ನಡುವೆ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಬಗ್ಗೆ ಹಲವು ಆಘಾತಕಾರಿ ವಿಷಯಗಳು ಹೊರಬರುತ್ತಿವೆ. ರೇಣುಕಾ ಸ್ವಾಮಿಯ ಶವವನ್ನು ಎಸೆದು, ಕೊಲೆ ಆರೋಪವನ್ನು ಹೊತ್ತುಕೊಳ್ಳಲು ಮೂವರಿಗೆ 30 ಲಕ್ಷ ರೂಪಾಯಿ ಹಣವನ್ನು ದರ್ಶನ್ ನೀಡಿದ್ದರು ಎನ್ನಲಾಗುತ್ತಿದೆ. ರೇಣುಕಾ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಣ ಮಾಡಿ ಕರೆದುಕೊಂಡು ಬಂದು ಶೆಡ್​ನಲ್ಲಿ ಇರಿಸಿಕೊಂಡು ಹಲ್ಲೆ ಮಾಡಿದ್ದ ದರ್ಶನ್ ಮತ್ತು ಗ್ಯಾಂಗ್​, ಹಲ್ಲೆಯಿಂದ ರೇಣುಕಾ ಸ್ವಾಮಿ ನಿಧನ ಹೊಂದಿದ ಬಳಿಕ ಆತಂಕಗೊಂಡಿದ್ದರು. ಶವವನ್ನು ಸಾಗಿಸುವ ದಾರಿ ಹುಡುಕಿದ್ದಾರೆ. ಆಗ ಬೇರೆ ಗ್ಯಾಂಗ್ ಒಂದನ್ನು ಕರೆಸಿ ಅವರಿಗೆ ಶವ ಒಪ್ಪಿಸಿ ಅದನ್ನು ವಿಲೇವಾರಿ ಮಾಡುವಂತೆ ಹೇಳಿ ಅವರಿಗೆ ಮೂವತ್ತು ಲಕ್ಷ ರೂಪಾಯಿ ಹಣ ನೀಡಿದ್ದಾರೆ. ಈ…

Read More

ಸದ್ಯ ಸ್ಯಾಂಡಲ್ ವುಡ್ ನಲ್ಲಿ ದರ್ಶನ್ ಪ್ರಕರಣ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಕೊಲೆ ಕೇಸ್ ನಲ್ಲಿ ನಟ ದರ್ಶನ್ ಬಂಧನವಾಗಿದ್ದು ಸದ್ಯ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಇನ್ನೂ ಘಟನೆಯ ಕುರಿತು ನಟ ಚೇತನ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ದರ್ಶನ್ ಪ್ರಕರಣದ ಕುರಿತು ಸಾಮಾಜಿಕ ಜಾಲಾ ತಾಣದಲ್ಲಿ ಬರೆದುಕೊಂಡಿರುವ ಚೇತನ್, ನಟ ದರ್ಶನ ಮತ್ತು ಆತನ ಸಹಚರರ ವಿರುದ್ಧ ಕೊಲೆ ಆರೋಪಗಳು ಗಂಭೀರವಾಗಿವೆ. ನಮ್ಮ ರಾಜ್ಯ ಪೊಲೀಸರು ಅದಕ್ಕೆ ಅನುಗುಣವಾಗಿ ತನಿಖೆ ನಡೆಸುತ್ತಾರೆ ಎಂದು ನಾವು ನಂಬುತ್ತೇವೆ ಎಂದಿದ್ದಾರೆ. ಅಲ್ಲದೆ, ಚಲನಚಿತ್ರ ತಾರೆಯರು ಸುಮಾರು ಒಂದು ಶತಮಾನದಿಂದ ಅವರು ಪಡೆದಿರುವ ಜೀವನಕ್ಕಿಂತ ದೊಡ್ಡ ಸ್ಥಾನಮಾನಕ್ಕೆ ಅರ್ಹರಲ್ಲ. ಇಂತಹ ನಿಜ-ಜೀವನದ ಖಳನಾಯಕರನ್ನು ಸೃಷ್ಟಿಸಿದವರು ನಾವು ಒಂದು ಸಮಾಜವಾಗಿ ತಪ್ಪಿತಸ್ಥರು ಎಂಬುದಾಗಿ ತಿಳಿಸಿದ್ದಾರೆ.

Read More

ಏಪ್ರಿಲ್.1, 2019ಕ್ಕಿಂತ ಮೊದಲು ನೋಂದಾಯಿಸಿಕೊಂಡ ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸೋದು ಕಡ್ಡಾಯವಾಗಿದೆ. HSRP ನಂಬರ್‌ ಪ್ಲೇಟ್‌ ಅಳವಡಿಕೆಗೆ ಸಾಕಷ್ಟು ಅವಕಾಶಗಳನ್ನು ನೀಡಲಾಗಿತ್ತು. ಆದರೆ ಲಕ್ಷಾಂತರ ವಾಹನಗಳು ನಂಬರ್ ಪ್ಲೇಟ್ ಬದಲಾವಣೆ ಮಾಡಿಕೊಂಡಿಲ್ಲ. ಆದರೆ ಇಂದುʻHSRPʼ ನಂಬರ್‌ ಪ್ಲೇಟ್‌ ಅಳವಡಿಕೆಗೆ ಕೊನೆಯ ದಿನವಾಗಿದೆ. ಕರ್ನಾಟಕ ರಾಜ್ಯದಲ್ಲಿ 1ನೇ ಏಪ್ರಿಲ್ 2019ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲಾ (ಹಳೆಯ / ಅಸ್ತಿತ್ವದಲ್ಲಿರುವ ವಾಹನಗಳು) (ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನಗಳು, ಪ್ರಯಾಣಿಕ ಕಾರುಗಳು, ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು, ಟ್ರೈಲರ್, ಟ್ರ್ಯಾಕ್ಟರ್ ಇತ್ಯಾದಿ) ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು ಅಳವಡಿಸುವುದು ಕಡ್ಡಾಯವಾಗಿದೆ. ಈ ವಿಧಾನ ಅನುಸರಿಸಿ, ನಿಮ್ಮ ಹಳೆಯ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸಿ https://transport.karnataka.gov.in ಅಥವಾ www.siam.in ಜಾಲತಾಣಕ್ಕೆ ಭೇಟಿ ನೀಡಿ, Book HSRP ಕ್ಲಿಕ್ ಮಾಡಿ. ನಿಮ್ಮವಾಹನ ತಯಾರಕರನ್ನು ಆಯ್ಕೆಮಾಡಿ. ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ. •…

Read More

ಅಭಿಮಾನಿಗಳ ಪಾಲಿನ ಆರಾಧ್ಯ ದೈವ, ದೇವರಂತೆ ಆರಾಧಿಸುವ ಕೋಟ್ಯಾಂತರ ಅಭಿಮಾನಿಗಳ ದಾಸ ದರ್ಶನ್ ಇಂದು ಕೊಲೆ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದಾರೆ. ಗೆಳತಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಮೆಸೇಜ್ ಮಾಡಲಾಗಿದೆ ಎಂಬ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿ ಅವರನ್ನು ಕೊಲೆ ಮಾಡಲಾಗಿದೆ. ರೇಣುಕಾ ಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಒಟ್ಟು 13 ಮಂದಿಯನ್ನ ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ಆರೋಪಿ ನಂಬರ್ 1 ಪವಿತ್ರಾ ಗೌಡ ಆಗಿದ್ದಾರೆ. ಕ್ರಿಮಿನಲ್ ಒಳಸಂಚು ಆರೋಪದಡಿಯಲ್ಲಿ ಪವಿತ್ರಾ ಗೌಡ ಅವರನ್ನ ಅರೆಸ್ಟ್ ಮಾಡಲಾಗಿದ್ದು, ಪ್ರಕರಣದಲ್ಲಿ ಎ1 ಆರೋಪಿಯಾಗಿದ್ದಾರೆ. ಪ್ರಕರಣದ ಎ2 ಆರೋಪಿ ಚಾಲೆಂಜಿಂಗ್ ಸ್ಟಾರ್‌ ದರ್ಶನ್ ಆಗಿದ್ದಾರೆ. ಹತ್ಯೆ ಕೇಸ್‌ನಲ್ಲಿ ದರ್ಶನ್‌ ಅವರನ್ನ ಪ್ರಮುಖ ಆರೋಪಿಯನ್ನಾಗಿ ಮಾಡಲಾಗಿದೆ. ಇನ್ನೂ ವಿಚಾರಣೆ ವೇಳೆ ಪೊಲೀಸರ ಮುಂದೆ ‘’ನಾನೇನೂ ಮಾಡಿಲ್ಲ. ನಂಗೇನೂ ಗೊತ್ತಿಲ್ಲ’’ ಎಂದು ದರ್ಶನ್ ಹೇಳಿಕೆ ಕೊಟ್ಟಿದ್ದಾರಂತೆ. ಪತ್ನಿ ವಿಜಯಲಕ್ಷ್ಮೀ ಹಾಗೂ ವಿನೀಶ್ ಜೊತೆ ಫೋನ್‌ನಲ್ಲಿ ದರ್ಶನ್…

Read More

ಮಲಾವಿಯ ಉಪಾಧ್ಯಕ್ಷ ಸೌಲೋಸ್‌ ಚಿಲಿಮಾ ಮತ್ತು ಇತರ ಒಂಬತ್ತು ಜನರು ವಿಮಾನ ಅಪಘಾತದಲ್ಲಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಸೌಲೋಸ್ ಚಿಲಿಮಾ ಅವರು ಪ್ರಯಾಣಿಸುತ್ತಿದ್ದ ಸೇನಾ ವಿಮಾನ ಏಕಾಏಕಿ ನಾಪತ್ತೆಯಾಗಿತ್ತು. ಸುಮಾರು  ಒಂದು ದಿನಕ್ಕೂ ಹೆಚ್ಚು ಕಾಲ ನಡೆದ ಶೋಧದ ನಂತರ ದೇಶದ ಉತ್ತರದ ಪರ್ವತ ಪ್ರದೇಶದಲ್ಲಿ ವಿಮಾನದ ಅವಶೇಷಗಳು ಪತ್ತೆಯಾಗಿವೆ. ಅಪಘಾತದಲ್ಲಿ ಯಾರೂ ಬದುಕುಳಿದಿಲ್ಲ ಎಂದು ಮಲಾವಿ ಅಧ್ಯಕ್ಷ ಲಾಜರಸ್ ಚಕ್ವೆರಾ ಅವರು ತಿಳಿಸಿದ್ದಾರೆ. ಆಫ್ರಿಕಾದ ಆಗ್ನೇಯ ಭಾಗದ ರಾಷ್ಟ್ರ ಮಲಾವಿ ರಾಜಧಾನಿ ಲಿಲೋಂಗ್ವೆಯಿಂದ ಮುಜು ನಗರಕ್ಕೆ ವಿಮಾನವು ಸೋಮವಾರ ಬೆಳಿಗ್ಗೆ ಹೊರಟಿತ್ತು. 45 ನಿಮಿಷಗಳಲ್ಲಿ ನಿಗದಿತ ಸ್ಥಳ ತಲುಪಬೇಕಿದ್ದ ಈ ವಿಮಾನ ಪ್ರಯಾಣ ಆರಂಭಿಸಿದ ಕೆಲವೇ ಕ್ಷಣಗಳಲ್ಲಿ ಕಣ್ಮರೆಯಾಗಿತ್ತು. ಚಿಲಿಮಾ ಅವರು ಈ ವಿಮಾನದಲ್ಲಿದ್ದರು. ಕಣ್ಮರೆಯಾದ ವಿಮಾನದ ಪತ್ತೆಗೆ ನೂರಾರು ಸೈನಿಕರು, ಪೊಲೀಸ್ ಅಧಿಕಾರಿಗಳು ಮತ್ತು ವಲಯ ಅರಣ್ಯಾಧಿಕಾರಿಗಳು ಶೋಧ ನಡೆಸಿದ್ದರು. ಪ್ರತಿಕೂಲ ಹವಾಮಾನದಿಂದಾಗಿ ಮುಜು ವಿಮಾನ ನಿಲ್ದಾಣದಲ್ಲಿ ವಿಮಾನವನ್ನು ಇಳಿಸದಂತೆ ಪೈಲಟ್‌ಗಳಿಗೆ ಏರ್ ಟ್ರಾಫಿಕ್ ಕಂಟ್ರೋಲರ್‌ಗಳು ಮಾಹಿತಿ ನೀಡಿದರು. ಲಿಲೋಂಗ್ವೆಗೆ…

Read More

ನಮಗೆ ಮದುವೆಯಾಗಿ ಒಂದು ವರ್ಷವಾಗಿದೆ. ಈಗ ನಾನು ತಾಯಿ ಆಗ್ತಿದ್ದೀನಿ. ನಂಗೆ ಮುಂದೆ ಹುಟ್ಟೋ ಮಗು ಅಪ್ಪ ಎಲ್ಲಿ ಎಂದು ಕೇಳಿದರೆ ಏನು ಹೇಳಬೇಕು? ಮೊನ್ನೆ ನನಗೆ ಕರೆ ಮಾಡಿ ಮಾತನಾಡಿದ್ದೇ ಕೊನೆ ಆಗೋಯ್ತು. ನನ್ನ ಮತ್ತು ನನ್ನ ಮುಂದಿನ ಜೀವನ ಹೇಗೆ ಎಂದು ದರ್ಶನ್ ಗ್ಯಾಂಗ್ ನಿಂದ ಹತ್ಯೆಯಾದ ರೇಣುಕಾಸ್ವಾಮಿ ಪತ್ನಿ ಸಹನಾ ಕಣ್ಣೀರಿಟ್ಟಿದ್ದಾರೆ. ನಮ್ಮನೆಯವರು ದರ್ಶನ್ ಅವರ ಅಭಿಮಾನಿ ಆಗಿರಲಿಲ್ಲ. ದರ್ಶನ ಮೇಲೆ ಆರೋಪ ಬಂದಿರೋದಕ್ಕೆ ನ್ಯಾಯ ಕೊಡಿಸಲು ಜನ ಇದಾರೆ. ನಾನು ಮುಂದೆ ಜೀವನ ಮಾಡೋದು ಹೇಗೆ? ಮುಂದೆ ಈ ಮಗುವಿಗೆ ಯಾರು ಬರ್ತಾರೆ? ನಮಗೆ ನ್ಯಾಯ ಬೇಕು ಎಂದು ಮೃತ ರೇಣುಕಾಸ್ವಾಮಿ ಅವರ ಪತ್ನಿ ಸಹನಾ ಮಾಧ್ಯಮಗಳ ಮುಂದೆ ನೋವು ತೋಡಿಕೊಂಡಿದ್ದಾರೆ. ಇನ್ನೂ ಕೊಲೆಯಾದ ರೇಣುಕಾಸ್ವಾಮಿ ಪತ್ನಿ ಭೇಟಿ ಮಾಡಿದ ಭಾವನಾ ಬೆಳಗೆರೆ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಅವರ ಪತ್ನಿ ನೋಡಿ  ನನ್ನ ಕಣ್ಣಲ್ಲೇ ನೀರು ಬಂತು. ಅವರ ಪತ್ನಿ ಸಂಪೂರ್ಣವಾಗಿ ಬ್ಲಾಂಕ್ ಆಗಿದ್ದಾರೆ. ತುಂಬಾ ಎಂಗ್ ಇದ್ದಾರೆ,…

Read More