Author: Author AIN

ಗೆಳತಿ ಪವಿತ್ರಾ ಗೌಡಗೆ ಅಶ್ಲೀಲ ಮೇಸೆಜ್ ಮಾಡಿದ್ದಾರೆ ಎಂಬ ಕಾರಣಕ್ಕೆ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬುವವರನ್ನು ದರ್ಶನ್ ಎಂಡ್ ಗ್ಯಾಂಗ್ ಹತ್ಯೆ ಮಾಡಿದೆ. ಸದ್ಯ ದರ್ಶನ್, ಪವಿತ್ರಾ ಗೌಡ ಸೇರಿದಂತೆ 13 ಮಂದಿಯನ್ನು 6 ದಿನಗಳ ಕಾಲ ಪೊಲೀಸ್​ ಕಸ್ಟಡಿಗೆ ನೀಡಲಾಗಿದೆ. ಬೆಂಗಳೂರಿನ ಅನ್ನಪೂರ್ಣೇಶ್ವರಿನಗರ ಪೊಲೀಸ್​ ಠಾಣೆಯಲ್ಲಿ ದರ್ಶನ್ ಹಾಗೂ ಅವರ ಸಹಚರರು ಇದ್ದಾರೆ. ಈ ವೇಳೆ ಠಾಣೆಗೆ ಹೊರಗಡೆಯಿಂದ 10ಕ್ಕೂ ಹೆಚ್ಚು ದೊನ್ನೆ ಬಿರಿಯಾನಿ ಬಾಕ್ಸ್​ಗಳು ಬಂದಿವೆ. ಪೊಲೀಸರು ದರ್ಶನ್ ಎಂಡ್ ಗ್ಯಾಂಗ್ ಗೆ ದೊನ್ನೆ ಬಿರಿಯಾನಿ ತರಿಸಿಕೊಟ್ಟಿದ್ದಾರೆ ಎನ್ನಲಾಗುತ್ತಿದೆ. ಕ್ಷುಲ್ಲಕ ಕಾರಣಕ್ಕಾಗಿ ರೇಣುಕಾ ಸ್ವಾಮಿ ಎಂಬುವವರನ್ನು ಹತ್ಯೆ ಮಾಡಿದ ಆರೋಪದಲ್ಲಿ ದರ್ಶನ್​, ಪವಿತ್ರಾ ಗೌಡ, ವಿ. ವಿನಯ್, ಆರ್. ನಾಗರಾಜು, ಎಸ್​. ಪ್ರದೋಶ್​, ಎಂ. ಲಕ್ಷ್ಮಣ್​, ಕೆ. ಪವನ್, ನಂದೀಶ್​, ದೀಪಕ್​ ಕುಮಾರ್, ಕಾರ್ತಿಕ್​, ನಿಖಿಲ್ ನಾಯಕ್​, ರಾಘವೇಂದ್ರ ಅಲಿಯಾಸ್​ ರಾಘು, ಕೇಶವಮೂರ್ತಿ ಎಂಬುವವರನ್ನು ಪೊಲೀಸರು ಅರೆಸ್ಟ್ ಮಾಡಿದ್ದು ವಿಚಾರಣೆ ನಡೆಸುತ್ತಿದ್ದಾರೆ. ರೇಣುಕಾ ಸ್ವಾಮಿ ಹತ್ಯೆಯಿಂದ ಅವರ ಕುಟುಂಬ ಕಂಗಲಾಗಿದೆ. ಇಡೀ…

Read More

ನನ್ನ ಮಗ ವಿಲವಿಲ ಒದ್ದಾಡಿ ಸತ್ತಂತೆ ದರ್ಶನ್ ಸಾಯಬೇಕು. ಪವಿತ್ರಾ ಗೌಡಳನ್ನು ಯಾವುದೇ ಕಾರಣಕ್ಕೂ ಬಿಡಬಾರದು ಎಂದು ಕೊಲೆಯಾದ ರೇಣುಕಾಸ್ವಾಮಿ ತಾಯಿ ರತ್ನಮ್ಮ ಮಾಧ್ಯಮಗಳ ಮುಂದೆ ಕಣ್ಣೀರು ಹಾಕಿದ್ದಾರೆ. ದರ್ಶನ್ ಎಂಡ್ ಗ್ಯಾಂಗ್ ನಿಂದ ಕೊಲೆಯಾದ ರೇಣುಕಾಸ್ವಾಮಿ ಅಂತ್ಯಕ್ರಿಯೆ ಬಳಿಕ ರುದ್ರಭೂಮಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 15 ದಿನದೊಳಗೆ ದರ್ಶನ್ ಸಾಯಲಿ. ನಮ್ ವಂಶ ನಿರ್ವಂಶ ಮಾಡಿದ ದರ್ಶನ್‌ಗೆ ತಕ್ಕ ಶಾಸ್ತಿ ಆಗಲಿ. ನನ್ನ ಮಗನನ್ನು ಕೊಂದಂತೆ ಅವನನ್ನು ಸಾಯಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು. ಗಂಡ ಬರುತ್ತಾನೆ ಎಂದು ನನ್ನ ಸೊಸೆ ಕಾದು ಕುಳಿತಿದ್ದಳು. ಪಾಪಿಗಳಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಪವಿತ್ರಾಗೌಡ ವಿರುದ್ಧ ರೇಣುಕಾಸ್ವಾಮಿ ತಾಯಿ  ಹರಿಹಾಯ್ದಿದ್ದಾರೆ. ದರ್ಶನ್ ಎಂಡ್ ಗ್ಯಾಂಗ್ ನಿಂದ ಹತ್ಯೆಯಾದ ರೇಣುಕಾಸ್ವಾಮಿ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ನೀಡಲಾಯಿತು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ನಡೆಸಿದ್ದು ರೇಣುಕಾಸ್ವಾಮಿ ಪೋಷಕರನ್ನು ಆಸ್ಪತ್ರೆಯ ಶವಗಾರಕ್ಕೆ ಕರೆತಂದಿದ್ದರು. ಈ ವೇಳೆ ಮಗನ ಮುಖ ಗುರುತು ಹಿಡಿಯುತ್ತಿದ್ದಂತೆ ಪೋಷಕರ ಆಕ್ರಂದನ…

Read More

ನಟಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಮೆಸೇಜ್ ಕಳುಹಿಸಿದ್ದಾರೆ ಎಂಬ ಕಾರಣಕ್ಕೆ ಸ್ಯಾಂಡಲ್ ವುಡ್ ನಟ ದರ್ಶನ್ ಸೇರಿ 13 ಮಂದಿಯನ್ನು ಬಂಧಿಸಲಾಗಿದೆ. ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲಾ  13 ಆರೊಪಿಗಳನ್ನು ಕೋರಮಂಗಲದ 24ನೇ ಎಸಿಎಂಎಂ ಕೋರ್ಟ್‌ 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ವಿಚಾರಣೆ ವೇಳೆ ಪೊಲೀಸರು 14 ದಿನಗಳ ಕಾಲ ಕಸ್ಟಡಿಗೆ ಕೇಳಿದ್ದರು. ನ್ಯಾಯಾಲಯ 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ವಿಚಾರಣೆ ವೇಳೆ ನ್ಯಾಯಾಲಯ ದರ್ಶನ್‍ಗೆ ಯಾವುದಾದರೂ ತೊಂದರೆ ಆಗಿದೆಯೆ ಎಂದು ಕೇಳಿದ ಪ್ರಶ್ನೆಗೆ, ಇಲ್ಲ ಎಂದು ದರ್ಶನ್ ಪ್ರತಿಕ್ರಿಯಿಸಿದರು. ವಕೀಲರ ನೇಮಕ ಮಾಡಿಕೊಳ್ಳುತ್ತೀರಾ? ಎಂಬ ಪ್ರಶ್ನೆಗೆ, ಹೌದು ಎಂದರು. ಬಳಿಕ ಮನೆಯವರಿಗೆ ಬಂಧನದ ಮಾಹಿತಿ ನೀಡಿದ್ದೇನೆ ಎಂದು ನ್ಯಾಯಾಲಯಕ್ಕೆ ದರ್ಶನ್ ತಿಳಿಸಿದ್ದಾರೆ. ಈ ವೇಳೆ ದರ್ಶನ್ ಪರ ವಕೀಲ ನಾರಾಯಣಸ್ವಾಮಿ, ದರ್ಶನ್ ಮೊಬೈಲ್ ವಶಪಡಿಸಿಕೊಳ್ಳಲಾಗಿದೆ. ರೇಣುಕಾಸ್ವಾಮಿ ಶವ ಕೂಡ ಪತ್ತೆಯಾಗಿದೆ. ಇಷ್ಟೇ ಅಲ್ಲದೇ ದರ್ಶನ್ ವಿರುದ್ಧ ಯಾವುದೇ ಆರೋಪಗಳಿಲ್ಲ. ಅವರು ಎಲ್ಲೂ…

Read More

ಅರ್ಜುನ್ ಸರ್ಜಾ ಮಗಳು ಐಶ್ವರ್ಯಾ ತಮಿಳು ನಟ ರಾಮಯ್ಯ ಅವರ ಪುತ್ರ ಉಮಾಪತಿ ರಾಮಯ್ಯ ಜೊತೆ ಹಸೆಮಣೆ ಏರಿದ್ದಾರೆ. ಜೂನ್ 10ರಂದು ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು ನಟಿ ಮದುವೆಯ ಫೋಟೋಗಳನ್ನು ಇನ್​ಸ್ಟಾಗ್ರಾಮ್​ನಲ್ಲಿ ಶೇರ್ ಮಾಡಿದ್ದಾರೆ. ಐಶ್ವರ್ಯಾ ಅರ್ಜುನ್ ಕೆಂಪು ಬಣ್ಣದ ಸೀರೆಯಲ್ಲಿ ಮಿಂಚಿದರೆ, ಉಮಾಪತಿ ರಾಮಯ್ಯ ಪಂಚೆ ಶರ್ಟ್ ಶಲ್ಯ ಧರಿಸಿದ್ದರು. ನಟಿ ಮದುವೆಯ ಫೋಟೋಸ್ ಶೇರ್ ಮಾಡಿ 10.06.2024 ಎಂದಷ್ಟೇ ಬರೆದಿದ್ದಾರೆ. ಅದರೊಂದಿಗೆ ಎವಿಲ್ ಐ ಎಮೋಜಿ ಹಾಕಿದ್ದಾರೆ. ದೃಷ್ಟಿಯಾಗದಂತೆ ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ಬಳಸುವ ಎಮೋಜಿ ಇದು. ಉಂಗುರು ಹುಡುಕುವ ಶಾಸ್ತ್ರದ ಫೋಟೋವನ್ನು ಕೂಡಾ ನಟಿ ಶೇರ್ ಮಾಡಿದ್ದಾರೆ. ಟಿವಿ ಕಾರ್ಯಕ್ರಮವೊಂದರಲ್ಲಿ ಪರಿಚಯವಾದ ಐಶ್ವರ್ಯಾ ಮತ್ತು ಉಮಾಪತಿ ಮೊದಲು ಸ್ನೇಹಿತರಾಗಿದ್ದರು. ಬಳಿಕ ಸ್ನೇಹ ಪ್ರೀತಿಗೆ ತಿರುಗಿತು. ಈ ವಿಚಾರವನ್ನು ಹಿರಿಯರ ಗಮನಕ್ಕೆ ತಂದಾಗ ಇಬ್ಬರ ಮನೆಯವರು ಮದುವೆಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಕಳೆದ ವರ್ಷ ಅಕ್ಟೋಬರ್​ನಲ್ಲಿ ಅವರ ನಿಶ್ಚಿತಾರ್ಥ ಸಮಾರಂಭ ನಡೆದಿತ್ತು. ಜೂನ್ 10 ರಂದು…

Read More

ಇಂದು ಯಾವುದೇ ಸಣ್ಣ ಪುಟ್ಟ ಅಂಗಡಿಗಳಿಗೆ ಹೋದ್ರೂ ಫೋನ್ ಫೇ ಮೂಲಕ ಹಣ ನೀಡಬಹುದು. ಕೈಯಲ್ಲಿ ದುಡ್ಡಿಲ್ಲವಾದ್ರು ಮೊಬೈಲ್ ಒಂದಿದ್ರೆ ಚಿಂತೆ ಇಲ್ಲದೆ ಹೊರಗೆ ಹೋಗಬಹುದು. ಇದೀಗ ಕೆಎಸ್ ಆರ್ ಟಿಸಿ ಪ್ರಯಾಣಿಕರುಗೆ ಇಂಥದ್ದೇ ಗುಡ್ ನ್ಯೂಸ್ ಸಿಕ್ಕಿದೆ. ಜೂನ್ 25 ರಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ಯುಪಿಐ, ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್‌ಗಳ ಮೂಲಕ ಪಾವತಿಸಬಹುದಾಗಿದ್ದು, ಕೈಯಲ್ಲಿ ಹಣ ಹಿಡಿದುಕೊಂಡು ಓಡಾಡುವ ಗೋಜು ಇಲ್ಲವಾಗಿದೆ. ಕೆಎಸ್‌ಆರ್‌ಟಿಸಿ ಜೂನ್ 25 ರಿಂದ ನಾಲ್ಕು ಡಿಪೋಗಳಲ್ಲಿ ಎಲೆಕ್ಟ್ರಾನಿಕ್ ಟಿಕೆಟಿಂಗ್ ಯಂತ್ರಗಳ (ಇಟಿಎಂ) ಪ್ರಾಯೋಗಿಕ ಯೋಜನೆಯನ್ನು ಪ್ರಾರಂಭಿಸಲಿದೆ. ಎಲ್ಲಾ ಕಂಡಕ್ಟರ್‌ಗಳಿಗೆ ತರಬೇತಿ ನೀಡಿದ ನಂತರ ಕೆಲವೇ ವಾರಗಳಲ್ಲಿ ಇದನ್ನು ಎಲ್ಲಾ ಬಸ್‌ಗಳಿಗೆ ವಿಸ್ತರಿಸಲಾಗುವುದು. ಸಾರಿಗೆ ನಿಗಮವು ಪ್ರತಿ ಸಾಧನಕ್ಕೆ ತಿಂಗಳಿಗೆ 645 ರೂಪಾಯಿ ಬಾಡಿಗೆಗೆ 10,245 ಇಟಿಎಂಗಳನ್ನು ತೆಗೆದುಕೊಂಡಿದೆ. ಕೆಎಸ್‌ಆರ್‌ಟಿಸಿ ಎಂಡಿ ಅನ್ಬು ಕುಮಾರ್, “ಈ ಮಾದರಿಗಳ ಮೇಲೆ ಕೆಲಸ ಮಾಡಿದ ನಂತರ, ನಾವು ಈ ತಿಂಗಳ…

Read More

ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರ ಬಂಧನದ ಕುರಿತು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಸುದ್ದಿಗೋಷ್ಠಿ ನಡೆಸಿದ್ದು ಈ ವೇಳೆ ಕೆಲ ವಿಚಾರಗಳನ್ನು ತಿಳಿಸಿದ್ದಾರೆ. ಈ ವೇಳೆ ಬಿ. ದಯಾನಂದ್ ಅವರು, ‘ಭಾನುವಾರ ಅಪರಿಚಿತ ಗಂಡಸಿನ ಶವದ ಮೇಲಿನ ಗಾಯಗಳನ್ನು ಗಮನಿಸಿ ಕೊಲೆ ಪ್ರಕರಣ ದಾಖಲಾಗಿತ್ತು. ಕಾಮಾಕ್ಷಿಪಾಳ್ಯ ವ್ಯಾಪ್ತಿಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು. ಸಿಸಿಟಿವಿ ಇತರ ತಾಂತ್ರಿಕ ಆಧಾರದ ಮೇಲೆ ಕೆಲವರನ್ನು ಬಂಧಿಸಲಾಯಿತು. ನಂತರ ಅವರ ವಿಚಾರಣೆ ಬಳಿಕ ಇದು ಚಿತ್ರದುರ್ಗದ ರೇಣುಕಾಸ್ವಾಮಿ ಎಂದು ತಿಳಿದು ಬಂದಿದೆ. ಇದರ ಹಿಂದೆ ಚಿತ್ರದ ಓರ್ವ ನಟ(ದರ್ಶನ್) ಇರುವುದು ತಿಳಿದು ಬಂದಿದೆ. ಸದ್ಯ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ’ ಎಂದು ಹೇಳಿದರು. ‘ಕೊಲೆ ಜೂನ್ 9ರಂದು ಆಗಿದೆ. ಹತ್ತು ಜನರಿಗಿಂತ ಹೆಚ್ಚು ಜನ ಈ ಪ್ರಕರಣದಲ್ಲಿ ಬಂಧಿಸಲಾಗಿದೆ. ದರ್ಶನ್ ವಶಕ್ಕೆ ಪಡೆಯಲಾಗಿದೆ. ವಿಚಾರಣೆ ಬಳಿಕ ನಂತರ ಕ್ರಮ ತೆಗೆದುಕೊಳ್ಳುತ್ತೇವೆ. ಮೃತ ರೇಣುಕಾಸ್ವಾಮಿಗೆ 33 ವರ್ಷ. ಹೆಚ್ಚಿನ ತನಿಖೆ ನಡೆದ ಬಳಿಕವಷ್ಟೇ…

Read More

ಗೆಳತಿ ಪವಿತ್ರಾಗೌಡ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲವಾಗಿ ಸಂದೇಶ ಕಳುಹಿಸಿದ್ದ  ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿರುವ ನಟ ದರ್ಶನ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಬಂಧನ ಬಳಿಕ ಪೊಲೀಸರ ವಿಚಾರಣೆ ವೇಳೆ ಮಾತನಾಡಿದ ನಟ ದರ್ಶನ್, ನಾನು ರೇಣುಕಾಸ್ವಾಮಿ ಕೊಲೆ ಮಾಡಲು ಹೇಳಿಲ್ಲ. ಆತನನ್ನು ಬೆದರಿಸುವಂತೆ ಮಾತ್ರ ಹೇಳಿದ್ದೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ. ಮೈಸೂರಿನಲ್ಲಿ ನಟ ದರ್ಶನ್‌ನನ್ನು ಬಂಧಿಸಿರುವ ಬೆಂಗಳೂರು ಕಾಮಾಕ್ಷಿಪಾಳ್ಯ ಪೊಲೀಸರು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಇಟ್ಟು ವಿಚಾರಣೆ ನಡೆಸುತ್ತಿದ್ದಾರೆ. ಬೆಳಗ್ಗೆಯಿಂದಲೇ ನಟ ದರ್ಶನ್ ಅವರನ್ನು ವಿಚಾರಣೆ ನಡೆಸಲಾಗುತ್ತಿದೆ. ದರ್ಶನ್ ನನ್ನು ವಿಚಾರಣೆ ನಡೆಸುತ್ತಿರುವ ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಕೊಲೆ ಪ್ರಕರಣದ ವಿಚಾರವಾಗಿ ದರ್ಶನ್ ಜೊತೆ ಪವಿತ್ರಾ ಗೌಡರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕೊಲೆಯಲ್ಲಿ ಇವರದ್ದೇನಾದರೂ ಪಾತ್ರವಿ ಇದೆಯೇ? ಇವರ ಕುಮ್ಮಕ್ಕಿನಿಂದಲೇ ಹತ್ಯೆ ನಡೆಯಿತೇ? ಎಂಬೆಲ್ಲ ಆಯಾಮದಲ್ಲಿ ತನಿಖೆಯನ್ನು ಪೊಲೀಸರು ನಡೆಸುತ್ತಿದ್ದಾರೆ. ಇನ್ನೂ ಕೊಲೆಯಾಗಿರುವ ರೇಣುಕಾಸ್ವಾಮಿ ಪತ್ನಿ ಮೂರು ತಿಂಗಳ ಗರ್ಭಿಣಿ…

Read More

ರೇಣುಕಾಸ್ವಾಮಿ ಎಂಬುವವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ಸ್ಟಾರ್ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ. ಇದೀಗ ಘಟನೆಗೆ ಸಂಬಂಧಿಸಿದಂತೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್  ನಲ್ಲಿ ದರ್ಶನ್‌ ರನ್ನು ಬಂಧಿಸಲಾಗಿದೆ. ಬಂಧಿಸಿರುವ ಆರೋಪಿಗಳ ವಿಚಾರಣೆ ಮಾಡುವಾಗ ದರ್ಶನ್ ಹೆಸರು ಬಂದಿದೆ ಎಂಬ ಮಾಹಿತಿ ಇದೆ. ಇದರ ಮೇಲೆ ಇನ್ನಷ್ಟು ತನಿಖೆ ನಡೆಯಬೇಕಿದೆ. ಅಲ್ಲಿಯವರೆಗೂ ಇದರ ಬಗ್ಗೆ ಏನು ಹೇಳೋಕೆ ಆಗಲ್ಲ ಎಂದು ಪರಮೇಶ್ವರ್ ಹೇಳಿದ್ದಾರೆ. ಈ ಕೇಸ್‌ನಲ್ಲಿ ಅವರು ನೇರವಾಗಿ ಭಾಗಿಯಾಗಿದ್ದಾರಾ ಇಲ್ವಾ? ಯಾವ ಕಾರಣ ಕೊಲೆ ನಡೆದಿದೆ ಎಂದು ಇನ್ನೂ ತನಿಖೆ ಬಳಿಕ ತಿಳಿಯಬೇಕಿದೆ. ಈ ಸಂದರ್ಭದಲ್ಲಿ ಹೆಚ್ಚೇನು ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ. ಸೋಶಿಯಲ್ ಮೀಡಿಯಾ ಕಾಮೆಂಟ್ ಬಗ್ಗೆ ಗೊತ್ತಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.

Read More

ನಟ ದರ್ಶನ್ ಅವರನ್ನು ರೇಣುಕಾಸ್ವಾಮಿ ಎಂಬುವವರ ಕೊಲೆ ಕೇಸ್​ನಲ್ಲಿ ಬಂಧಿಸಲಾಗಿದ್ದು ವಿಚಾರಣೆ ನಡೆಸಲಾಗುತ್ತಿದೆ. ದರ್ಶನ್ ಸ್ನೇಹಿತೆ ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಅಶ್ಲೀಲವಾಗಿ ಸಂದೇಶ ಕಳುಹಿಸಿದ್ದ ಎನ್ನಲಾಗಿದೆ. ಈ ಕಾರಣಕ್ಕೆ ಅವರ ಮೇಲೆ ಕೆಲವರು ಹಲ್ಲೆ ಮಾಡಿದ್ದಾರೆ. ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ಮಾಡಿದ್ದೇವೆ ಎಂದು ಕೊಲೆ ಮಾಡಿರುವವರು ಒಪ್ಪಿಕೊಂಡಿದ್ದಾರೆ. ಈ ಬೆನ್ನಲ್ಲೇ ಮತ್ತೊಂದು ಶಾಕಿಂಗ್ ವಿಚಾರವೊಂದು ಬೆಳಕಿಗೆ ಬಂದಿದೆ. ಪವಿತ್ರಾ ಮೇಲೆ ದರ್ಶನ್ ಹಲ್ಲೆ ಮಾಡಿದ್ದರು ಎನ್ನಲಾಗಿದೆ. ದರ್ಶನ್ ಹಾಗೂ ಪವಿತ್ರಾ ಮಧ್ಯೆ ಕಳೆದ 10 ವರ್ಷಗಳಿಂದ ಆಪ್ತತೆ ಇದೆ. ಇಬ್ಬರೂ ಬೇರೆ ಬೇರೆ ಕಡೆಗಳಲ್ಲಿ ಸುತ್ತಾಡಿದ ಫೋಟೋಗಳನ್ನು ಹಂಚಿಕೊಂಡಿದ್ದರು. ಪವಿತ್ರಾಗೆ ಕಿರುಕುಳ ನೀಡಿದರು ಎನ್ನುವ ಕಾರಣಕ್ಕೆ ರೇಣುಕಾಸ್ವಾಮಿಯ ಕೊಲೆ ಆಯಿತು ಎನ್ನಲಾಗಿದೆ. ಈ ಮಧ್ಯೆ ಹಲ್ಲೆ ವಿಚಾರ ಚರ್ಚೆ ಆಗಿದೆ. ರೇಣುಕಾಸ್ವಾಮಿ ಕೊಲೆ ಬಳಿಕ ಪವಿತ್ರಾ ಮೇಲೆ ದರ್ಶನ್ ಹಲ್ಲೆ ಮಾಡಿದ್ದರು ಎನ್ನಲಾಗಿದೆ. ‘ನಿನ್ನಿಂದ ಹೀಗೆಲ್ಲಾ ಆಯಿತು’ ಎಂದು ದರ್ಶನ್ ಕೂಗಾಡಿದ್ದರು ಎಂದು ವರದಿ ಆಗಿದೆ. ಹಲ್ಲೆಗೊಳಗಾದ ಪವಿತ್ರಾಗೆ ಬೆಂಗಳೂರಿನ…

Read More

ನಟಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಮೆಸೇಜ್ ಮಾಡಿದ್ದಾರೆ ಎಂಬ ಕಾರಣಕ್ಕೆ ರೇಣುಕಾಸ್ವಾಮಿ ಎಂಬುವವರನ್ನು ದರ್ಶನ್ ಬಾಡಿಗಾರ್ಡ್ ಗಳು ಕೊಲೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಘಟನೆ ಸಂಬಂಧ ಈಗಾಗಲೇ ದರ್ಶನ್ ಸೇರಿ ಹತ್ತು ಮಂದಿಯನ್ನು ಬಂಧಿಸಲಾಗಿದೆ. ಸದ್ಯ ಮಗನ ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಕೊಲೆ ಪ್ರಕರಣದಲ್ಲಿ ದರ್ಶನ್‌ ಹೆಸರು ಕೇಳಿ ಬಂದ ಹಿನ್ನಲೆಯಲ್ಲಿ ಪೋಷಕರು ನಟನಿಗೆ ಹಿಡಿ ಶಾಪ ಹಾಕುತ್ತಿದ್ದಾರೆ. ಕೊಲೆಯಾದ ರೇಣುಕಾಸ್ವಾಮಿ ಪೋಷಕರು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ಬಂದಿದ್ದು, ಅಶ್ಲೀಲ ಮೆಸೇಜ್ ಮಾಡಿದ್ರೆ ಕಾನೂನು ಕ್ರಮ ಕೈಗೊಳ್ಳಬಹುದಿತ್ತು. ಅದು ಬಿಟ್ಟು ಕೊಲೆ ಮಾಡಿಸುವ ಮನಸ್ಥಿತಿಗೆ ಯಾಕೆ ಬಂದರು ಎಂದು ದರ್ಶನ್ ವಿರುದ್ಧ ರೇಣುಕಾಸ್ವಾಮಿ ಪೋಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾನೂನು ಮೂಲಕ ಹೋರಾಟ ಮಾಡಬಹುದಿತ್ತು ಎಂದು ರೇಣುಸ್ವಾಮಿ ಪೋಷಕರಾದ ಶಿವನಗೌಡ ಮತ್ತು ರತ್ನಪ್ರಭಾ ದಂಪತಿ ಠಾಣೆಯಲ್ಲಿಯೇ ಕಣ್ಣೀರು ಹಾಕಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಅವರು ಪವಿತ್ರಾ ಗೌಡ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಪೋಸ್ಟ್ ಮಾಡಿದ್ದರು. ಈ ಪೋಸ್ಟ್ ಮಾಡಿದ ನಂತರ…

Read More