Author: Author AIN

ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಗೌರವಾರ್ಥ ದೇಶಾದ್ಯಂತ ಇಂದು( ಮಂಗಳವಾರ) ಒಂದು ದಿನದ ಶೋಕಾಚರಣೆಯನ್ನು ಆಚರಿಸಲಾಗುವುದು ಎಂದು ಗೃಹ ಸಚಿವಾಲಯ ತಿಳಿಸಿದೆ. ಡಾ. ಸೆಯ್ಯದ್ ಇಬ್ರಾಹಿಂ ರೈಸಿ ಮತ್ತು ವಿದೇಶಾಂಗ ಸಚಿವ ಹುಸೇನ್ ಅಮೀರ್-ಅಬ್ದುಲ್ಲಾಹಿಯಾನ್ ಅವರು ಹೆಲಿಕಾಪ್ಟರ್ ಅಪಘಾತದಲ್ಲಿ ನಿಧನರಾಗಿದ್ದಾರೆ. ಮೃತರ ಆತ್ಮಗಳಿಗೆ ಗೌರವ ಸೂಚಕವಾಗಿ ಮಂಗಳವಾರ ಪ್ರತಿನಿತ್ಯ ಹಾರಿಸುವ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧ ಎತ್ತರದಲ್ಲಿ ಹಾರಿಸಲಾಗುತ್ತದೆ ಮತ್ತು ಯಾವುದೇ ಅಧಿಕೃತ ಸರ್ಕಾರಿ ಕಾರ್ಯಕ್ರಮಗಳು ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಭಾನುವಾರದಂದು ದಟ್ಟವಾದ ಮಂಜಿನಿಂದಾಗಿ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದ ಪರ್ವತ ಅರಣ್ಯ ಪ್ರದೇಶದಲ್ಲಿ ಪತನಗೊಂಡಿದೆ. ಪ್ರತಿಕೂಲ ಹವಾಮಾನದಿಂದಾಗಿ, ಶೋಧ ಮತ್ತು ರಕ್ಷಣಾ ತಂಡಗಳು ಅಪಘಾತದ ಸ್ಥಳವನ್ನು ತಲುಪಲು ಸಾಕಷ್ಟು ಪ್ರಯಾಸಪಡಬೇಕಾಯಿತು. ಕೊನೆಗೆ ಸೋಮವಾರ ಮುಂಜಾನೆ ಅವಘಡ ನಡೆದ ಸ್ಥಳಕ್ಕೆ ತಲುಪಲು ಸಾಧ್ಯವಾಯಿತು. ಈ ಅಪಘಾತದಲ್ಲಿ ಇರಾನ್‌ನ ವಿದೇಶಾಂಗ ಸಚಿವರೂ ಕೊನೆಯುಸಿರೆಳೆದಿದ್ದಾರೆ.

Read More

ಭಾನುವಾರ ನಡೆದ ಹೆಲಿಕಾಪ್ಟರ್ ದುರಂತದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನರಾಗಿದ್ದಾರೆ. ರೈಸಿ ಅವರ ಸಾವಿನ ಬಳಿಕ ದೇಶದಲ್ಲಿ ಅಧ್ಯಕ್ಷೀಯ ಚುನಾವಣೆ ನಡೆಸಲು ಇರಾನ್ ನಿರ್ಧರಿಸಿದೆ. ಜೂನ್ 28 ರಂದು ಇರಾನ್‌ನಲ್ಲಿ ಅಧ್ಯಕ್ಷೀಯ ಚುನಾವಣೆ ನಡೆಯಲಿದೆ ಎಂದು ಹೇಳಿಕೆ ತಿಳಿಸಿದೆ. ಸರ್ಕಾರ ಮತ್ತು ಸಂಸತ್ತಿನ ಮುಖ್ಯಸ್ಥರ ಸಭೆಯಲ್ಲಿ 14 ನೇ ಅಧ್ಯಕ್ಷೀಯ ಚುನಾವಣೆಯನ್ನು ಜೂನ್ 28 ರಂದು ನಡೆಸಲು ನಿರ್ಧರಿಸಲಾಯಿತು ಎಂದು ಇರಾನ್ ಮಾಧ್ಯಮಗಳು ವರದಿ ಮಾಡಿವೆ. ಈ ನಡುವೆ ಉಪಾಧ್ಯಕ್ಷ ಮೊಹಮ್ಮದ್ ಮೊಖ್ಬರ್ ಅವರನ್ನು ದೇಶದ ಹಂಗಾಮಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ದೇಶದಲ್ಲಿ 5 ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಲಾಗಿದೆ. ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಭಾನುವಾರದಂದು ದಟ್ಟವಾದ ಮಂಜಿನಿಂದಾಗಿ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದ ಪರ್ವತ ಅರಣ್ಯ ಪ್ರದೇಶದಲ್ಲಿ ಪತನಗೊಂಡಿದೆ. ಪ್ರತಿಕೂಲ ಹವಾಮಾನದಿಂದಾಗಿ, ಶೋಧ ಮತ್ತು ರಕ್ಷಣಾ ತಂಡಗಳು ಅಪಘಾತದ ಸ್ಥಳವನ್ನು ತಲುಪಲು ಸಾಕಷ್ಟು ಪ್ರಯಾಸಪಡಬೇಕಾಯಿತು. ಕೊನೆಗೆ ಸೋಮವಾರ ಮುಂಜಾನೆ ಅವಘಡ ನಡೆದ…

Read More

ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರ ಸಾವಿನಲ್ಲಿ ನಮ್ಮ ದೇಶವು ಭಾಗಿಯಾಗಿಲ್ಲ ಎಂದು ಇಸ್ರೇಲ್‌ನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಭಾನುವಾರ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ, ವಿದೇಶಾಂಗ ಸಚಿವ ಹುಸೇನ್ ಅಮಿರಾಬ್ದೊಲ್ಲಾಹಿಯಾನ್ ಮತ್ತು ಇತರ ಆರು ಮಂದಿ ಹೆಲಿಕಾಪ್ಟರ್‌ ದುರಂತದಲ್ಲಿ ಮೃತಪಟ್ಟಿದ್ದರು. ಆದರೆ ಈ ಅವಘಡದಲ್ಲಿ ದೇಶ ಭಾಗಿಯಾಗಿರುವ ಕುರಿತು ಬರುತ್ತಿರುವ ಆರೋಪಗಳನ್ನು ಇಸ್ರೇಲಿ ಅಧಿಕಾರಿ ನಿರಾಕರಿಸಿದ್ದಾರೆ. ತಮ್ಮ ಮೇಲೆ ಆರೋಪ ಕೇಳಿಬರುತ್ತಿದ್ದಂತೆಯೇ ಇಸ್ರೇಲ್‌ ಅಧಿಕಾರಿಯೊಬ್ಬರು ಪ್ರತಿಕ್ರಿಯೆ ನೀಡಿದ್ದು, ಘಟನೆಯಲ್ಲಿ ನಮ್ಮ ಕೈವಾಡ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಅಕ್ಟೋಬರ್ 7 ರಂದು ಹಮಾಸ್ ಇಸ್ರೇಲ್ ಮೇಲೆ ದಾಳಿ ಮಾಡಿದ ನಂತರ ಕಳೆದ ಕೆಲವು ತಿಂಗಳುಗಳಲ್ಲಿ ಮಧ್ಯಪ್ರಾಚ್ಯದಲ್ಲಿ ಇರಾನ್ ಮತ್ತು ಅದರ ಪ್ರಾಕ್ಸಿ ಗುಂಪುಗಳನ್ನು ಒಳಗೊಂಡ ದಾಳಿಗಳು ಮತ್ತು ಸಂಘರ್ಷಗಳು ಹುಟ್ಟಿಕೊಂಡವು. ಇದು ಗಾಜಾದಲ್ಲಿ ರಕ್ತಪಾತಕ್ಕೆ ಕಾರಣವಾಯಿತು.  ಒಟ್ಟಿನಲ್ಲಿ ಇಸ್ರೇಲ್ ವಿರುದ್ಧ ಮಧ್ಯಪ್ರಾಚ್ಯ ಭಾಗದಲ್ಲಿ ಮತ್ತೊಮ್ಮೆ ಸೇಡಿನ ಕಿಡಿ ಹೊತ್ತಿಕೊಂಡಿದೆ. ಈ ಮೂಲಕ 3ನೇ ಮಹಾಯುದ್ಧಕ್ಕೆ ಕ್ಷಣಗಣನೆ ಆರಂಭವಾಗಿದೆ.…

Read More

ಸೌತ್ ಸಿನಿಮಾ‌ ಇಂಡಸ್ಟ್ರಿಯಲ್ಲಿ ಕಣ್ಣಪ್ಪ ಸಿನಿಮಾ ಒಂದಲ್ಲ ಒಂದು ಕಾರಣಕ್ಕೆ ಸದ್ದು ಮಾಡುತ್ತಿದೆ. ಅದರಲ್ಲೂ ಪಾತ್ರವರ್ಗದ ವಿಚಾರವಾಗಿಯೇ ಸಾಕಷ್ಟು ಗಮನ ಸೆಳೆಯುತ್ತಿದೆ. ಚಿತ್ರತಂಡಕ್ಕೆ ದಿನಕ್ಕೊಬ್ಬರಂತೆ ಸ್ಟಾರ್ ನಟ ನಟಿಯರು ಎಂಟ್ರಿಕೊಡ್ತಿದ್ದಾರೆ. ಇದೀಗ ನಟಿ ಕಾಜಲ್ ಅಗರ್ ವಾಲ್ ಎಂಟ್ರಿಕೊಟ್ಟಿದ್ದಾರೆ. ವಿಷ್ಣು ಮಂಚು ಮತ್ತು ಕಾಜಲ್ ಅಗರ್ವಾಲ್ ಈ ಹಿಂದೆ ತೆಲುಗಿನ ಮೊಸಗಲ್ಲು ಚಿತ್ರದಲ್ಲಿ ಸಹೋದರ ಮತ್ತು ಸಹೋದರಿಯಾಗಿ ಕಾಣಿಸಿಕೊಂಡಿದ್ದರು. ಇದೀಗ ವಿಷ್ಣು ಮಂಚು ಅವರ ಬಹುನಿರೀಕ್ಷಿತ ಪ್ರಾಜೆಕ್ಟ್‌ ಕಣ್ಣಪ್ಪ ಚಿತ್ರಕ್ಕೂ ಆಗಮಿಸುವ ಮೂಲಕ ಎರಡನೇ ಸಲ ಒಂದಾಗುತ್ತಿದ್ದಾರೆ. ಆದರೆ ಕಣ್ಣಪ್ಪ ಚಿತ್ರದಲ್ಲಿ ಕಾಜಲ್‌ ಅಗರ್‌ವಾಲ್‌ ಪಾತ್ರವೇನು ಎಂಬುದನ್ನು ಮಾತ್ರ ಚಿತ್ರತಂಡ ರಿವೀಲ್ ಮಾಡಿಲ್ಲ. ಬದಲಿಗೆ ವಿಶೇಷವಾದ ಪಾತ್ರವೊಂದರಲ್ಲಿ ಕಾಜಲ್‌ ನಟಿಸುವ ಮೂಲಕ ಕಣ್ಣಪ್ಪ ಸಿನಿಮಾದ ಭಾಗವಾಗಲಿದ್ದಾರೆ. ನೂರಾರು ಕೋಟಿ ಬಜೆಟ್‌ನಲ್ಲಿ ದೊಡ್ಡ ಕ್ಯಾನ್ವಾಸ್‌ನೊಂದಿಗೆ ಮೂಡಿಬರುತ್ತಿರುವ ಈ ಸಿನಿಮಾದ ಶೂಟಿಂಗ್‌ ಸಹ ಅಷ್ಟೇ ವೇಗವಾಗಿ ಸಾಗುತ್ತಿದೆ. ಈ ಚಿತ್ರದಲ್ಲಿ ಮೋಹನ್ ಬಾಬು, ಪ್ರಭಾಸ್, ಅಕ್ಷಯ್ ಕುಮಾರ್, ಮೋಹನ್ ಲಾಲ್ ಮತ್ತು ಶರತ್‌ಕುಮಾರ್ ಸೇರಿ…

Read More

ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಇತ್ತೀಚೆಗಷ್ಟೇ ವಿದೇಶ ಪ್ರವಾಸ ಕೈಗೊಂಡಿದ್ದರು. ಇದೀಗ ಪತಿ ಜೊತೆ ವಿಜಯಲಕ್ಷ್ಮಿ ದುಬೈಗೆ ಹಾರಿದ್ದಾರೆ. ದುಬೈನಲ್ಲಿ ಗ್ರ್ಯಾಂಡ್ ಆಗಿ ಮ್ಯಾರೇಜ್ ಆನಿವರ್ಸರಿ ಸೆಲೆಬ್ರೇಟ್ ಮಾಡಿದ್ದಾರೆ. 2003ನೇ ಇಸವಿಯ ಮೇ19 ರಂದು ವಿಜಯಲಕ್ಷ್ಮೀ ಹಾಗೂ ದರ್ಶನ್ ದರ್ಮಸ್ಥಳದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳದ ವಸಂತ್ ಮಹಲ್‌ನಲ್ಲಿ ದರ್ಶನ್ – ವಿಜಯಲಕ್ಷ್ಮೀ ವಿವಾಹ ಬಂಧನಕ್ಕೆ ಒಳಗಾದರು. 19-05-2003 ರಂದು ಬೆಳಗ್ಗೆ 9.10 ರಿಂದ 9.50 ರವರೆಗಿದ್ದ ಶುಭ ಮಿಥುನ ಲಗ್ನದಲ್ಲಿ ವಿಜಯಲಕ್ಷ್ಮೀ ಕೊರಳಿಗೆ ದರ್ಶನ್ ಮಾಂಗಲ್ಯಧಾರಣೆ ಮಾಡಿದರು. ‘ಲಂಕೇಶ್ ಪತ್ರಿಕೆ’ ಸಿನಿಮಾ ಬಿಡುಗಡೆ ಬೆನ್ನಲ್ಲೇ ದರ್ಶನ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ದಂಪತಿಗೆ ವಿನೀಶ್ ಎನ್ನುವ ಒಬ್ಬ ಮಗನಿದ್ದಾನೆ. ವಿನೀಶ್ ಕೂಡ ತಂದೆಯ ಎರಡು ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದಾನೆ.  ಇದೀಗ ದರ್ಶನ್ – ವಿಜಯಲಕ್ಷ್ಮೀ ತಮ್ಮ 21ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ. ದುಬೈನಲ್ಲಿ ಅದ್ಧೂರಿಯಾಗಿ ಮ್ಯಾರೇಜ್ ಆನಿವರ್ಸರಿ ಸೆಲೆಬ್ರೇಟ್ ಮಾಡಿದ್ದು ಅಲ್ಲಿನ ಸುಂದರ ಫೋಟೋಗಳನ್ನು ವಿಜಯಲಕ್ಷ್ಮಿ…

Read More

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ ಹಲವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ರೇವ್ ಪಾರ್ಟಿಯಲ್ಲಿ ತೆಲುಗು ನಟಿ-ನಟಿಯರ ಹೆಸರು ಕೇಳಿ ಬಂದಿದೆ. ತೆಲುಗು ನಟ ಶ್ರೀಕಾಂತ್ ಹೆಸರು ಕೇಳಿ ಬಂದ ಬೆನ್ನಲ್ಲೇ, ನಾನು ಯಾವ ರೇವ್ ಪಾರ್ಟಿಗೂ ಹೋಗಿಲ್ಲ ಎಂದು ವಿಡಿಯೋ ಮೂಲಕ ನಟ ಸ್ಟಷ್ಟನೆ ನೀಡಿದ್ದಾರೆ. ನಾನು ನನ್ನ ಹೈದರಾಬಾದ್ ಮನೆಯಲ್ಲಿ ನಿಂತಿದ್ದೇನೆ. ಜನರು ಇದನ್ನು ಪರಿಶೀಲಿಸಬಹುದು. ಬೆಂಗಳೂರಿನಲ್ಲಿ ಪೊಲೀಸರು ದಾಳಿ ನಡೆಸಿದ ರೇವ್ ಪಾರ್ಟಿಯಲ್ಲಿ ನನ್ನ ಹೆಸರು ಕೇಳಿ ಬಂದಿದ್ದು ನೋಡಿ ನನಗೆ ಆಶ್ಚರ್ಯ ಆಯಿತು. ನನ್ನ ಸ್ನೇಹಿತರು ಈ ಬಗ್ಗೆ ವಿಚಾರಿಸಲು ಕರೆ ಮಾಡಿದ್ದರು. ಈ ಸುದ್ದಿ ಕೇಳಿ ಮೊದಲಿಗೆ ನನ್ನ ಕುಟುಂಬಸ್ಥರು ನಕ್ಕರು. ಆದರೆ ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಅನೇಕ ಸುದ್ದಿಗಳು ಹರಿದಾಡಲು ಆರಂಭಿಸಿದಾದ ನಾನು ಸ್ಪಷ್ಟನೆ ನೀಡಲು ನಿರ್ಧರಿಸಿದೆ ಎಂದು ಶ್ರೀಕಾಂತ್ ಹೇಳಿದ್ದಾರೆ. ಸುದ್ದಿ ಪ್ರಸಾರ ಮಾಡುವುದಕ್ಕೂ ಮುನ್ನ ಮಾಧ್ಯಮದ ಅನೇಕ ಸ್ನೇಹಿತರು ನನಗೆ…

Read More

ಡೆಮಾಕ್ರಟಿಕ್ ಪ್ರೊಗ್ರೆಸ್ಸಿವ್ ಪಾರ್ಟಿಯ (ಡಿಪಿಪಿ) ಲೈ ಚಿಂಗ್-ಟೆ ಅವರು ತೈವಾನ್ ನ ಐದನೇ ಜನಪ್ರಿಯ ಚುನಾಯಿತ ಅಧ್ಯಕ್ಷರಾಗಿ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು. 1996 ರಲ್ಲಿ ತೈವಾನ್ ತನ್ನ ಮೊದಲ ನೇರ ಅಧ್ಯಕ್ಷೀಯ ಚುನಾವಣೆಯನ್ನು ನಡೆಸಿದ ನಂತರ 64 ವರ್ಷದ ಲೈ ಮತ್ತು ಉಪಾಧ್ಯಕ್ಷ ಹ್ಸಿಯಾವೊ ಬಿ-ಖಿಮ್ ಅಧಿಕಾರ ವಹಿಸಿಕೊಳ್ಳುವುದರೊಂದಿಗೆ ಡಿಪಿಪಿ ಸತತ ಮೂರನೇ ನಾಲ್ಕು ವರ್ಷಗಳ ಅವಧಿಗೆ ಆಡಳಿತ ನಡೆಸುತ್ತಿರುವ ಮೊದಲ ಆಡಳಿತ ಪಕ್ಷವಾಗಿದೆ. ಉದ್ಘಾಟನಾ ಸಮಾರಂಭವು ಅಧ್ಯಕ್ಷರ ಕಚೇರಿಯಲ್ಲಿ ನಡೆಯಿತು, ಮತ್ತು ರಾಷ್ಟ್ರದ ದೊಡ್ಡ ಮುದ್ರೆಯನ್ನು ಕ್ಯುಮಿಂಟಾಂಗ್ (ಕೆಎಂಟಿ) ನ ಶಾಸಕಾಂಗ ಸ್ಪೀಕರ್ ಹಾನ್ ಕುವೊ-ಯು ಅವರು ಲೈ ಅವರಿಗೆ ಹಸ್ತಾಂತರಿಸಿದರು, ಇದು ಲೈ ಅವರು ರಾಷ್ಟ್ರದ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡ ಸಂಕೇತವಾಗಿತ್ತು. ನಾಲ್ಕು ಬಾರಿ ಶಾಸಕ ಮತ್ತು ಎರಡು ಬಾರಿ ತೈನಾನ್ನ ಮೇಯರ್ ಆಗಿರುವ ಲೈ, ತ್ಸಾಯ್ ಆಡಳಿತದಲ್ಲಿ 2017 ರಿಂದ 2019 ರವರೆಗೆ ತೈವಾನ್ ಪ್ರಧಾನಿಯಾಗಿದ್ದರು ಮತ್ತು ನಂತರ 2020 ರಲ್ಲಿ ತ್ಸಾಯ್ ಅವರ ಎರಡನೇ…

Read More

ದ್ವಿಚಕ್ರ ಅಥವಾ ನಾಲ್ಕು ಚಕ್ರದ ವಾಹನಗಳ ಚಾಲಕರು ತಮ್ಮ ಪರವಾನಗಿಗಳನ್ನು ಪಡೆಯಲು ಇನ್ನು ಮುಂದೆ ಪ್ರಾದೇಶಿಕ ಸಾರಿಗೆ ಕಚೇರಿಗೆ (ಆರ್ಟಿಒ) ಹೋಗಬೇಕಾಗಿಲ್ಲ. ಚಾಲನಾ ಪರವಾನಗಿ ಪಡೆಯಲು ಕೇಂದ್ರವು ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಡ್ರೈವಿಂಗ್ ಲೈಸೆನ್ಸ್ ಪಡೆಯುವ ಅವಶ್ಯಕತೆಗಳು ಬದಲಾಗಿವೆ ಮತ್ತು ಹೊಸ ಚಾಲನಾ ಪರವಾನಗಿ ನಿಯಮಗಳು ಜುಲೈ 1, 2022 ರಿಂದ ಜಾರಿಗೆ ಬಂದಿವೆ ಎಂದು ಕೇಂದ್ರ ರಸ್ತೆಗಳು ಮತ್ತು ಮೋಟಾರುಮಾರ್ಗ ಸಚಿವಾಲಯ ತಿಳಿಸಿದೆ. ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ನಂತರ ಅರ್ಹ ಅಭ್ಯರ್ಥಿಗಳಿಗೆ ಡಿಎಲ್ ನೀಡುವ ಅಧಿಕಾರವನ್ನು ಸರ್ಕಾರ ಮಾನ್ಯತೆ ಪಡೆದ ಚಾಲಕ ತರಬೇತಿ ಕೇಂದ್ರಗಳಿಗೆ ನೀಡಿದೆ, ಆರ್ಟಿಒಗೆ ಹಾಜರಾಗುವ ಮತ್ತು ತಮ್ಮ ಡಿಎಲ್ ಪಡೆಯಲು ದೊಡ್ಡ ಸಾಲಿನಲ್ಲಿ ಕಾಯುವ ಅಗತ್ಯವನ್ನು ನಿವಾರಿಸುತ್ತದೆ. ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ ಸ್ಥಾಪಿಸಿದ ಹೊಸ ಚಾಲನಾ ಪರವಾನಗಿ ನಿಯಮಗಳಿಂದ ಎಲ್ಲಾ ಹೊಸ ಅರ್ಜಿದಾರರು ಸಂತೋಷಪಡಬೇಕು. ಭಾರತದಲ್ಲಿ ಚಾಲನಾ ಪರವಾನಗಿ ಪಡೆಯುವ ಸಲುವಾಗಿ, ಭಾರತ ಸರ್ಕಾರವು ಚಾಲನಾ ಪರವಾನಗಿ ಹೊಸ ನಿಯಮಗಳು 2024 ಅನ್ನು…

Read More

ಲೋಕಸಭೆ ಚುನಾವಣೆಯ 5ನೇ ಹಂತದ ಮತದಾನ ನಡೆಯುತ್ತಿದೆ. ಪತಿ ರಣ್‌ವೀರ್ ಸಿಂಗ್ ಜೊತೆ ಆಗಮಿಸಿದ ನಟಿ ದೀಪಿಕಾ ಪಡುಕೋಣೆ ವೋಟ್ ಮಾಡಿದ್ದಾರೆ. ನಟಿಯ ಬೇಬಿ ಬಂಪ್ ವಿಡಿಯೋ ವೈರಲ್ ಆಗಿದೆ. ಬಿಟೌನ್‌ನ ಹಲವು ಸೆಲೆಬ್ರಿಟಿಗಳು ಇಂದು ಮತದಾನ ಮಾಡಿದ್ದು, ಇದೀಗ ದೀಪಿಕಾ ಪಡುಕೋಣೆ ದಂಪತಿ ಮುಂಬೈನ ಪಾಲಿ ಹಿಲ್‌ನಲ್ಲಿ ಮತ ಚಲಾಯಿಸಿದ್ದಾರೆ. ವೈಟ್ ಶರ್ಟ್ ಮತ್ತು ನೀಲಿ ಜೀನ್ಸ್ ಧರಿಸಿ ಬೇಬಿ ಬಂಪ್‌ನೊಂದಿಗೆ ದೀಪಿಕಾ ಕಾಣಿಸಿಕೊಂಡಿದ್ದಾರೆ. ಈ ವೇಳೆ ರಣ್‌ವೀರ್, ಪತ್ನಿ ದೀಪಿಕಾರ ಕೈ ಹಿಡಿದು ಎಚ್ಚರಿಕೆಯಿಂದ ಕಾರಿನಲ್ಲಿ ಕೂರಿಸಿದ್ದರು. ಈ ಹಿಂದೆ ಸಿನಿಮಾ ಶೂಟಿಂಗ್, ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದ ನಟಿಯನ್ನು ನೋಡಿ ನಿಜಕ್ಕೂ ಗರ್ಭಿಣಿನಾ? ಎಂದು ಹಲವರು ಆರೋಪಿಸಿದ್ದರು. ಇದೀಗ ಅದಕ್ಕೆಲ್ಲಾ ಉತ್ತರ ಸಿಕ್ಕಿದೆ. ಸದ್ಯ ಪ್ರಗ್ನೆಂಟ್ ಆಗಿರುವ ದೀಪಿಕಾ ಪಡುಕೋಣೆ ಸಿನಿಮಾ ರಂಗದಿಂದ ದೂರ ಉಳಿದಿದ್ದಾರೆ.

Read More

ಡಾಲಿ ಧನಂಜಯ್ ನಟನೆಯ ಹೆಡ್ ಬುಷ್ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದ ನಟಿ ಪಾಯಲ್ ರಜಪೂತ್ ನಿರ್ಮಾಪಕರೊಬ್ಬರ ಬಗ್ಗೆ ಆರೋಪಿಸಿದ್ದಾರೆ. ಸಿನಿಮಾದಲ್ಲಿ ನಟಿಸಿದ್ದಕ್ಕಾಗಿ ಸಂಭಾವನೆ ನೀಡಿಲ್ಲ. ಆದರೂ ಸಿನಿಮಾ ಪ್ರಚಾರ ಮಾಡಿ ಎಂದು ಒತ್ತಾಯಿಸುತ್ತಿದ್ದಾರೆ ಎಂದು ನಟಿ ಪಾಯಲ್ ನಿರ್ಮಾಪಕರ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾ ಪೋಸ್ಟ್‌ನಲ್ಲಿ, ನನ್ನ ಬಳಿ ‘ರಕ್ಷಣ’ ಎಂಬ ಸಿನಿಮಾವಿದೆ. ಇದನ್ನು 2019 ಮತ್ತು 2020ರಲ್ಲಿ ಚಿತ್ರೀಕರಿಸಲಾಗಿದೆ. ಇದನ್ನು ಮೂಲತಃ 5Ws ಎಂದು ಹೆಸರಿಡಲಾಗಿತ್ತು. ಆದರೆ ಕಾರಣಾಂತರಗಳಿಂದ ಚಿತ್ರದ ಬಿಡುಗಡೆಯನ್ನು ಮುಂದೂಡಲಾಯಿತು. ಆದರೆ ಇತ್ತೀಚೆಗೆ ನನಗೆ ಸಿಕ್ಕ ಯಶಸ್ಸು ನೋಡಿ ಈಗ ನಿರ್ಮಾಪಕರು ಆ ಚಿತ್ರವನ್ನು ಬಿಡುಗಡೆ ಮಾಡಲು ಮುಂದಾಗಿದ್ದಾರೆ. ನನ್ನ ಬಾಕಿ ಹಣಗಳನ್ನು ಕ್ಲೀಯರ್ ಮಾಡದೇ ಪ್ರಚಾರ ಮಾಡಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಚಿತ್ರದ ಪ್ರಚಾರಕ್ಕೆ ಬರದೇ ಇದ್ದರೆ ತೆಲುಗು ಉದ್ಯಮದಿಂದ ಬ್ಯಾನ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ. ನನ್ನ ತಂಡ ಬಾಕಿ ಮೊತ್ತದ ಬಗ್ಗೆ ಚರ್ಚಿಸಿದಾಗ ರಾಜಿ ಮಾಡಿಕೊಳ್ಳಲು ನಿರಾಕರಿಸಿದರು. ನನ್ನ ಹೆಸರನ್ನು…

Read More